Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಿದ...

ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಿದ ಅರಮನೆಗಳ ತೆರವಿಗೆ ಸರಕಾರ ಮುಂದಾಗುತ್ತಿಲ್ಲ: ಎಚ್.ಡಿ.ಕುಮಾರಸ್ವಾಮಿ ಆರೋಪ

ವಾರ್ತಾಭಾರತಿವಾರ್ತಾಭಾರತಿ3 July 2022 9:40 PM IST
share
ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಿದ ಅರಮನೆಗಳ ತೆರವಿಗೆ ಸರಕಾರ ಮುಂದಾಗುತ್ತಿಲ್ಲ: ಎಚ್.ಡಿ.ಕುಮಾರಸ್ವಾಮಿ ಆರೋಪ

ಬೆಂಗಳೂರು, ಜು.3: ರಾಜಕಾಲುವೆಗಳ ಮೇಲೆ ನಿರ್ಮಾಣವಾಗಿರುವ ‘ಮಾಲ್‍ಗಳು, ಅರಮನೆಯಂಥ ಭಂಗಲೆಗಳ ಮೇಲೆ ಬುಲ್ಡೋಜರ್ʼಗಳು ಹೋಗುವುದಿಲ್ಲ. ಆದರೆ, ಬಡವರು ಯಾರಾದರೂ ಸಣ್ಣ ಮನೆ, ಗುಡಿಸಲು ಕಟ್ಟಿಕೊಂಡಿದ್ದರೆ ಅವರ ಮನೆಗಳ ಮೇಲೆ ಬುಲ್ಡೋಜರ್ʼಗಳು ನಿರ್ದಯವಾಗಿ ಸರಕಾರದಿಂದ ಹರಿಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರವಿವಾರ ಹೆಬ್ಬಾಳ ವಿಧಾನಸಭೆ ಕ್ಷೇತ್ರದ ನಾಗೇನಹಳ್ಳಿಯಲ್ಲಿ ನಡೆದ ‘ಜನತಾಮಿತ್ರʼ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರಕಾರಗಳ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿದರು.

ಬಡವರಿಗೆ, ಮಧ್ಯಮವರ್ಗದ ಜನರಿಗೆ ಕಡಿಮೆ ದರದಲ್ಲಿ ನಿವೇಶನ, ಮನೆ ಕೊಡಬೇಕಾದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ. ಅದೊಂದು ಭ್ರಷ್ಟಕೂಪ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಎಲ್ಲ ಪ್ರದೇಶಗಳು ಸಮಾನವಾಗಿ ಅಭಿವೃದ್ಧಿ ಆಗುತ್ತಿಲ್ಲ. ಶ್ರೀಮಂತರು ವಾಸ ಮಾಡುವ ಪ್ರದೇಶಗಳಿಗೆ ಎಲ್ಲ ಅನುಕೂಲಗಳಿದ್ದರೆ, ಬಡವರ ಬಡಾವಣೆಗಳಿಗೆ ಕೊನೆಪಕ್ಷ ರಸ್ತೆಗಳಿಗೆ ಡಾಂಬರು ಇಲ್ಲ, ವಿದ್ಯುತ್ ದೀಪಗಳಿಲ್ಲ. ಯಲಹಂಕ ವಿಧಾನಸಭೆ ಕ್ಷೇತ್ರದ ಬೆಟ್ಟಹಳ್ಳಿ ಗ್ರಾಮಕ್ಕೆ ಹೋದರೆ ರಾಜ್ಯ ಸರಕಾರದ ನಿಜವಾದ ಅಭಿವೃದ್ಧಿ ಮಾದರಿ ಕಣ್ಣಿಗೆ ಕಾಣುತ್ತದೆ ಎಂದು ಎಚ್‍ಡಿಕೆ ಕಿಡಿಕಾರಿದರು. 

ಬೆಂಗಳೂರಿನಲ್ಲಿ ಇವತ್ತು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿ ಅನೇಕ ರಾಜಕಾರಣಿಗಳು, ಸಾರ್ವಜನಿಕ ಹಾಗೂ ಬಡಬಗ್ಗರ ಭೂಮಿಯನ್ನು ಕೊಳ್ಳೆ ಹೊಡೆದು ನೂರಾರು ಕೋಟಿ ಮಾಡಿದ್ದಾರೆ. ಅದೇ ಪಾಪದ ಹಣದಿಂದ ಫುಡ್ ಕಿಟ್, ಸಣ್ಣಪುಟ್ಟ ಪ್ರಮಾಣದ ಭಕ್ಷೀಸು ನೀಡಿ ಚುನಾವಣೆ ಗೆಲ್ಲುತ್ತಿದ್ದಾರೆ ಎಂದರು. 

ಬೆಂಗಳೂರಿನಲ್ಲಿ ಬಡವರ ಬಂಧು ಕಾರ್ಯಕ್ರದ ಮೂಲಕ ಬೀದಿಬದಿ ವ್ಯಾಪಾರಿಗಳಿಗೆ ನೆರವಾದೆ. 25 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿದೆ. ಇದೆಲ್ಲವನ್ನೂ ಫಲಾನುಭವಿಗಳ ಹೆಸರಿನ ಸಮೇತ ದಾಖಲೆ ಕೊಡಬಲ್ಲೆ, ನರೇಂದ್ರ ಮೋದಿ ಅವರಂತೆ ನಾನು ಬರೀ ಭಾಷಣ ಮಾಡಲ್ಲ ಎಂದರಲ್ಲದೆ, ಮೋದಿ ಹಿಂದೆ ಸುತ್ತುವ ಆತ್ಮೀಯನೊಬ್ಬ ಗಂಟೆಗೆ 53 ಕೋಟಿ ದುಡಿಯುತ್ತಿದ್ದಾನಂತೆ. ಅದು ಹೇಗೆ? ಯಾವ ರೀತಿ? ಇಂಥವರನ್ನು ತೋರಿಸಿ ಭಾರತ ಉದ್ಧಾರವಾಗಿದೆ ಎಂದು ಜಗತ್ತಿಗೆ ತೋರಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಮಾತನಾಡಿದರು. ಹೆಬ್ಬಾಳ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮೊಯಿದ್ದೀನ್ ಅಲ್ತಾಫ್, ದಾಸರಹಳ್ಳಿ ಶಾಸಕ ಮಂಜುನಾಥ್, ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್.ಎಂ.ರಮೇಶ್ ಗೌಡ ಸೇರಿದಂತೆ ಪಕ್ಷದ ಮುಖಂಡರು, ಅಸಂಖ್ಯಾತ ಕಾರ್ಯಕರ್ತರು ಜನತಾಮಿತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇದಕ್ಕೂ ಮೊದಲು ದಾಸರಹಳ್ಳಿ ವಿಧಾನಸಭೆ ಕ್ಷೇತ್ರದ ವಿವಿಧ ಭಾಗಗಳಲ್ಲಿ ನಡೆದ ಜನತಾಮಿತ್ರ ಜಾಥ ಮತ್ತು ಬಹಿರಂಗ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಸ್ಥಳೀಯ ಶಾಸಕ ಮಂಜುನಾಥ್ ಪಾಲ್ಗೊಂಡಿದ್ದರು.  

ಕಟ್ಟಾ ಜನರಿಗೆ ಮಂಕೂಬೂದಿ ಎರಚಿ ಗೆಲ್ಲುತ್ತಾರೆ

ಹೆಬ್ಬಾಳ ವಿಧಾನಸಭೆ ಕ್ಷೇತ್ರದಿಂದ ಈ ಹಿಂದೆ ಸಚಿವರಾಗಿದ್ದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಲಲಿತಾ ಸಹಸ್ರನಾಮ ಕಾರ್ಯಕ್ರಮ ಏರ್ಪಡಿಸುತ್ತೇನೆ ಎಂದು ಈಗ ಕ್ಷೇತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲೆಲ್ಲ ದೊಡ್ಡದಾಗಿ ಮಹಿಳೆಯರನ್ನು ಸೇರಿಸಿ ಪೂಜೆ ಪುನಸ್ಕಾರ ಅಂತ ಹೇಳಿ ಮಂಕೂಬೂದಿ ಎರಚಿ, ಗೆದ್ದುಹೋಗಿ ಮಂತ್ರಿ ಆಗುತ್ತಾರೆ. ಆಮೇಲೆ, ಸರಕಾರಿ ಭೂಮಿಯನ್ನು ಲಪಟಾಯಿಸಿ ಬಳಿಕ ಜಾಮೀನಿಗಾಗಿ ಕೋರ್ಟ್ ಕಚೇರಿ ಅಂತ ಅಲೆಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X