ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ: ಅರ್ಜಿ ಆಹ್ವಾನ
ಉಡುಪಿ, ಜು.೪: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸುವಿಧಾ ತಂತ್ರಾಂಶ -suvidha.karnataka.gov.in- ಮೂಲಕ ಪ್ರವರ್ಗ -೧ರ ಉಪ್ಪಾರ ಮತ್ತು ಇದರ ಉಪ ಜಾತಿಗೆ ಸೇರಿದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ ೧೨ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ/ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಮಣಿಪಾಲ, ಉಡುಪಿ, ವೆಬ್ಸೈಟ್ -http://upparadevelopment.karnataka.gov.in-, ಸಹಾಯವಾಣಿ ಸಂಖ್ಯೆ: ೭೦೨೬೨೮೮೮೮೮, ದೂರವಾಣಿ ಸಂಖ್ಯೆ: ೦೮೨೦- ೨೫೭೪೮೮೨ ಅನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Next Story