ಅಕ್ರಮ ಜಾನುವಾರು ಸಾಗಾಟ ಆರೋಪ : ಓರ್ವನ ಬಂಧನ
ಹೆಬ್ರಿ : ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಆರೋಪದಲ್ಲಿ ಓರ್ವನನ್ನು ಹೆಬ್ರಿ ಪೊಲೀಸರು ಜು.3ರಂದು ರಾತ್ರಿ ವೇಳೆ ಕೆರೆಬೆಟ್ಟು ಗ್ರಾಮದ ಕರೆಬೆಟ್ಟು ಮಹಾಲಿಂಗ ದೇವಸ್ತಾನಕ್ಕೆ ಹೋಗುವ ಕ್ರಾಸ್ ಬಳಿ ಬಂಧಿಸಿದ್ದಾರೆ.
ಶಕೀಲ್ ಅಹಮ್ಮದ್ ಟಿ.ಕೆ ಬಂಧಿತ ಆರೋಪಿ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಈತನಿಂದ ಕಾರು ಹಾಗೂ ಎರಡು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಒಂದು ಜಾನುವಾರು ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೇಳಂಜೆ ಗ್ರಾಮದ ಈಸರಗದ್ದೆ ಎಂಬಲ್ಲಿ ರಸ್ತೆಯ ಬದಿಯಲ್ಲಿ ಮಲಗಿದ ಜಾನುವಾರುಗಳನ್ನು ಕಳವು ಮಾಡಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story