ಬೆಳ್ತಂಗಡಿ: ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ

ಬೆಳ್ತಂಗಡಿ: ನಾವೂರು ಗ್ರಾಮದ ಅಬ್ಬನ್ ಕೆರೆ ಎಂಬಲ್ಲಿ ವ್ಯಕ್ತಿಯೋರ್ವನನ್ನು ಕತ್ತಿಯಿಂದ ಕಡಿದು ಕೊಲೆಗೈದಿರುವ ಘಟನೆ ಜು.4ರಂದು ರಾತ್ರಿ ಬೆಳಕಿಗೆ ಬಂದಿದೆ.
ನಾವೂರು ಗ್ರಾಮದ ಅಬ್ಬನ್ ಕೆರೆ ನಿವಾಸಿ ಬೇಬಿ (55) ಮೃತರು ಎಂದು ತಿಳಿದುಬಂದಿದೆ.
ಇವರ ಪತ್ನಿ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು, ಅವರು ಈ ಕೃತ್ಯವನ್ನು ಎಸಗಿರಬಹುದೆಂದು ಸಂಶಯ ವ್ಯಕ್ತವಾಗಿದೆ.
ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story