ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ

ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ, ಖ್ಯಾತ ಜ್ಯೋತಿಷಿ ಚಂದ್ರಶೇಖರ್ ಗುರೂಜಿ ಅವರನ್ನು ಹತ್ಯೆ ಮಾಡಿರುವ ಬಗ್ಗೆ ವರದಿಯಾಗಿದೆ.
ಹುಬ್ಬಳ್ಳಿ ನಗರದ ಉಣಕಲ್ ಕ್ರಾಸ್ ಬಳಿ ಇರುವ ಖಾಸಗಿ ಹೊಟೆಲ್‌ನಲ್ಲಿ ದುಷ್ಕರ್ಮಿಗಳ ತಂಡ ಚಾಕುವಿನಿಂದ ಇರಿದು ಹತ್ಯೆ ಮಾಡಿದೆ ಎನ್ನಲಾಗಿದ್ದು, ಇಬ್ಬರು ದುಷ್ಕರ್ಮಿಗಳು ಕೃತ್ಯ ನಡೆಸಿ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇಂದು(ಸೋಮವಾರ ) ಮಧ್ಯಾಹ್ನ 12.43 ರ ಸುಮಾರಿಗೆ ಚಂದ್ರಶೇಖರ್ ಗುರೂಜಿ ಅವರನ್ನು ವಾಸ್ತು ಸಲಹೆ ನೆಪದಲ್ಲಿ ಭೇಟಿಯಾಗಲು ಬಂದ ಇಬ್ಬರು ಈ ಕೃತ್ಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಸದ್ಯ ಅವರ ಮೃತ ದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಹುಬ್ಬಳ್ಳಿ ಪೊಲೀಸ್ ಆಯುಕ್ತ ಲಾಬೂರಾಮ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Next Story





