Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೃಹ ಸಚಿವರ ರಾಜೀನಾಮೆ ಕೇಳಲು...

ಗೃಹ ಸಚಿವರ ರಾಜೀನಾಮೆ ಕೇಳಲು ಕಾಂಗ್ರೆಸ್‍ಗೆ ನೈತಿಕ ಹಕ್ಕಿಲ್ಲ: ಸಿಎಂ ಬೊಮ್ಮಾಯಿ

ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ5 July 2022 3:32 PM IST
share
ಗೃಹ ಸಚಿವರ ರಾಜೀನಾಮೆ ಕೇಳಲು ಕಾಂಗ್ರೆಸ್‍ಗೆ ನೈತಿಕ ಹಕ್ಕಿಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು, ಜು. 05: ಪಿಎಸ್ ಐ ನೇಮಕಾತಿ ಪ್ರಕರಣ ಗಮನಕ್ಕೆ ಬಂದ ತಕ್ಷಣವೇ ಪ್ರಾಥಮಿಕ ತನಿಖೆ ಮಾಡಿಸಿ,  ಕೂಡಲೇ ಸಿಐಡಿ ಗೆ ತನಿಖೆಯನ್ನು ವಹಿಸಲಾಯಿತು. ಅತ್ಯಂತ ಪ್ರಾಮಾಣಿಕವಾಗಿ, ದಕ್ಷತೆಯಿಂದ ಗೃಹ ಸಚಿವರು ಕೆಲಸ ಮಾಡಿದ್ದಾರೆ.  ಅವರ ಪ್ರಾಮಾಣಿಕತೆ ಮತ್ತು ದಕ್ಷತೆ ಇರುವುದರಿಂದಲೇ  ಪ್ರಕರಣ ಹೊರಬಂದಿದೆ. ಗೃಹ ಸಚಿವರ ರಾಜೀನಾಮೆ ಕೇಳಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರ ಕಾಲದಲ್ಲಿ ಪಿಎಸ್‍ಐ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಪ್ರಕರಣ ದಾಖಲಾಗಿ ಹಿರಿಯ ಪೋಲಿಸ್ ಅಧಿಕಾರಿ ಆರೋಪಿಯಾಗಿದ್ದರು. ಮುಂದೆ ಏನಾಯಿತು? ಬಂಧನ ದೂರದ ಮಾತು, ಅವರನ್ನು ವಿಚಾರಣೆಯೂ ಮಾಡಲಿಲ್ಲ. ಇಂಥ ದಿಟ್ಟ ಕ್ರಮವನ್ನು  ತೆಗೆದುಕೊಳ್ಳುತ್ತಾರೆ ಎಂದರೆ, ಅಧಿಕಾರಿಗಳಿಗೆ ಯಾವುದೇ ಮುಲಾಜಿಗೆ ಒಳಗಾಗದೆ ತನಿಖೆ ಕೈಗೊಳ್ಳಲು ಮುಕ್ತ ಅಧಿಕಾರವನ್ನು ಅಧಿಕಾರಿಗಳಿಗೆ ನೀಡಲಾಗಿದೆ. ನಮಗೆ ಇಂಥ ಚಟುವಟಿಕೆಗಳ ಬಗ್ಗೆ ಜೀರೋ ಟಾಲರೆನ್ಸ್ ಇದೆ ಹಾಗೂ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು  ದೊಡ್ಡವರಾಗಲೀ, ಸಣ್ಣವರಾಗಲಿ  ಸ್ವಚ್ಛ ಮಾಡುವ ಕೆಲಸ ನಿರಂತರವಾಗಿ ನಡೆಯಬೇಕೆಂಬ ದೃಷ್ಟಿಯಿಂದ ಈ ಕೆಲಸ ಮಾಡಿದ್ದೇವೆ. ಕಾಂಗ್ರೆಸ್ ಇದ್ದಿದ್ದರೆ, ಇದೇ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿಹಾಕುತ್ತಿದ್ದರು. ಹಿಂದೆ ಹೀಗೆ ಮಾಡಿದ್ದಾರೆ. ವಿವರಗಳನ್ನು ಕೊಡಲು ನಾನು  ಸಿದ್ಧ. ಯಾರ ರಾಜಿನಾಮೆಯನ್ನು ಕೇಳುವ ಹಕ್ಕು ಅವರಿಗಿಲ್ಲ ಎಂದರು.

ಪ್ರಕರಣದಲ್ಲಿ  50 ಜನರನ್ನು ಬಂಧಿಸಲಾಗಿದ್ದು, 20 ಜನ ಪೊಲೀಸ್ ಅಧಿಕಾರಿಗಳೇ ಇದ್ದಾರೆ.  ಯಾರನ್ನು , ಯಾವುದನ್ನೂ ಮುಚ್ಚಿಡುವ ಪ್ರಯತ್ನ ಮಾಡಿಲ್ಲ. ಬಹಳ ನಿಯತ್ತಿನಿಂದ  ದಕ್ಷತೆಯಿಂದ  ಕೆಲಸ ಮಾಡಿದ್ದಾರೆ. ಯಾರೂ ರಾಜಿನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಅವರು ಇದ್ದದ್ದರಿಂದಲೇ ಇದೊಂದು  ಅಂತಿಮ ಘಟ್ಟ ಮುಟ್ಟಿದೆ ಎಂದರು.  

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗೃಹ ಸಚಿವರು ಸದನವನ್ನು ತಪ್ಪು ದಾರಿಗೆ ಎಳೆದಿದ್ದರಿಂದ ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ  ಆ ಸಂದರ್ಭದಲ್ಲಿ ಮಾಹಿತಿ ಇರಲಿಲ್ಲ. ಮಾಹಿತಿ ಗೊತ್ತಾದ ಬಳಿಕೆ ಏನು ಮಾಡಿದರು, ಎಷ್ಟು ದಕ್ಷತೆಯಿಂದ  ಮಾಡಿದರು ಎನ್ನುವುದು ಮುಖ್ಯವಾಗುತ್ತದೆ ಎಂದರು.  ವಿರೋಧಪಕ್ಷದವರು ಗಾಳಿಯಲ್ಲಿ ಹೇಳಿಕೆ ನೀಡುವುದಲ್ಲ.  ಸರ್ಕಾರ ಗಂಭೀರವಾಗಿ ಪರಿಗಣಿಸಿರದಿದ್ದರೆ, ಪ್ರಕರಣ ಹೊರಗೆ ಬರುತ್ತಿರಲಿಲ್ಲ. ಸಿಐಡಿ, ಎಸಿಬಿ ಒಳ್ಳೆ ಕೆಲಸ ಮಾಡಿದ್ದಾರೆ. ಎಲ್ಲಿ ಪುರಾವೆ ಇದೆಯೋ ಅಲ್ಲಿ ತನಿಖೆ ಮಾಡಲಾಗಿದೆ. ಪುರಾವೆ ಇಲ್ಲದೆ ಏನೂ ಮಾಡಲಾಗುವುದಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X