ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ
ಉಡುಪಿ: ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ವಿಶ್ವ ಯುವ ಕೌಶಲ್ಯ ದಿನಾಚರಣೆ ಪ್ರಯುಕ್ತ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಕನ್ನಡ ಹಾಗೂ ಆಂಗ್ಲ ಭಾಷೆಯಲ್ಲಿ ಆಯೋಜಿಸಲಾಗಿದೆ.
ಪದವಿ ಪೂರ್ವ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕೈಗಾರಿಕೆ ಶೈಕ್ಷಣಿಕ ಒಗ್ಗೂಡುವಿಕೆಯಿಂದ ಕೌಶಲ್ಯದ ಅಂತರವನ್ನು ಕಡಿಮೆ ಮಾಡುವುದು, ಶಕ್ತಿಯುತ ಹಾಗೂ ಸುಸ್ಥಿರ ಬೆಳವಣಿಗೆಗಾಗಿ ಕೌಶಲ್ಯಯುತ ಮಾನವ ಸಂಪನ್ಮೂಲವನ್ನು ಸೃಷ್ಟಿಸುವ ಮಾರ್ಗಗಳು, ಕೌಶಲ್ಯ ಮತ್ತು ಸಾಮರ್ಥ್ಯಗಳ ಮೇಲೆ ಕೇಂದ್ರೀಕೃತ ವಾದ ಉನ್ನತ ಶಿಕ್ಷಣದ ಬಗ್ಗೆ ಮರುಚಿಂತನೆ ಹಾಗೂ ೮ರಿಂದ ೧೨ನೇ ತರಗತಿ ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ಯುವಕರಲ್ಲಿ ಕೌಶಲ್ಯಾಭಿವೃದ್ಧಿಯ ಪ್ರಾಮುಖ್ಯತೆ, ಶಿಕ್ಷಣದಲ್ಲಿ ಕೌಶಲ್ಯಾಭಿವೃದ್ಧಿಯ ಪ್ರಾಮುಖ್ಯತೆ ಕುರಿತು ಪ್ರಬಂಧ ವನ್ನು ಸಿದ್ಧಪಡಿಸಿ ಜುಲೈ ೧೦ರೊಳಗೆ -https://www.kaushalkar.com/app/skill-essay-compitition- ಲಿಂಕ್ ಬಳಸಿ ನೋಂದಾವಣಿ ಮಾಡಿ, ಪ್ರಬಂಧವನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ:೯೪೪೮೪೦೯೩೫೫, ೯೭೩೯೬೯೧೨೯೪, ೯೪೪೯೯೪೩೮೮೨ ಅಥವಾ ಇಮೇಲ್ -udupikaushalya@gmail.com- ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.