Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸಿಬಿಯ ಎಸ್‌ಪಿ ಕೇಡರ್ ಅಧಿಕಾರಿಗೆ 50...

ಎಸಿಬಿಯ ಎಸ್‌ಪಿ ಕೇಡರ್ ಅಧಿಕಾರಿಗೆ 50 ಲಕ್ಷ ರೂ. ಕೊಟ್ಟವರು ಯಾರು?: ಕುಮಾರಸ್ವಾಮಿ ಪ್ರಶ್ನೆ

PSI ಹಗರಣ

ವಾರ್ತಾಭಾರತಿವಾರ್ತಾಭಾರತಿ5 July 2022 11:51 PM IST
share
ಎಸಿಬಿಯ ಎಸ್‌ಪಿ ಕೇಡರ್ ಅಧಿಕಾರಿಗೆ 50 ಲಕ್ಷ ರೂ. ಕೊಟ್ಟವರು ಯಾರು?: ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಬಹುಕೋಟಿ ರೂಪಾಯಿ ಹಗರಣ ಪಿಎಸ್ಐ ಕರ್ಮಕಾಂಡದ ಬಗ್ಗೆ ನಾನು ಗಾಳಿಯಲ್ಲಿ ಗುಂಡು ಹೊಡೆದಿಲ್ಲ.  ಇದ್ದದ್ದನ್ನು ಇದ್ದ ಹಾಗೆ ಹೇಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ನಗರದ ಚಾಮರಾಜಪೇಟೆಯ ಛಲವಾದಿ ಪಾಳ್ಯದಲ್ಲಿ ಇಂದು ಮಾತನಾಡಿದ ಅವರು; ಮಾಧ್ಯಮಗಳಲ್ಲೇ ಈ ಬಗ್ಗೆ ತನಿಖಾ ವರದಿಗಳು ಬಂದಿವೆ. ತಲಾ 30 ಲಕ್ಷ ರೂಪಾಯಿಯನ್ನು 25 ಅಭ್ಯರ್ಥಿಗಳಿಂದ ವಸೂಲಿ ಆಗಿದೆ ಅಂದರೆ, ಒತ್ತು ಮೊತ್ತ  ಎಷ್ಟಾಯ್ತು? 200-300 ಜನ 70-80 ಲಕ್ಷ ಕೊಟ್ಟಿದ್ದರೆ ಒಟ್ಟು ಹಣ ಎಷ್ಟಾಯ್ತು? ಎಂದು ಅವರು ಪ್ರಶ್ನಿಸಿದರು.

ನಾನು ಯಾವುದೇ ಕಾರಣಕ್ಕೂ ಗಾಳಿಯಲ್ಲಿ ಗುಂಡು ಹೊಡೆದಿಲ್ಲ. ಹಗರಣದಲ್ಲಿ ಕಿಂಗ್ ಪಿನ್ ಬೇರೆ ಇದ್ದಾರೆ,  ಅವರನ್ನು ಮೊದಲು ಬಂಧಿಸಿ. ಸಣ್ಣ ಪುಟ್ಟ ಮೀನು ಹಿಡಿಯಬೇಡಿ ಅಂದಿದ್ದೆ. ನಾನು ಸರ್ಕಾರಕ್ಕೆ ಎಚ್ಚರಿಕೆ‌ ಕೊಡ್ತಾ ಬಂದಿದ್ದೇನೆ. ಎಲ್ಲಾ ಮಾಹಿತಿ ಪಡೆದ ನಂತರವೇ ಚರ್ಚೆ ಮಾಡೋದು ಎಂದು ಸರಕಾರವನ್ನು ಅವರು ತರಾಟೆಗೆ ತೆಗೆದುಕೊಂಡರು.

ಎಸಿಬಿಯ ಒಬ್ಬ ಎಸ್ ಪಿ ಕೇಡರ್ ಅಧಿಕಾರಿಗೆ 50 ಲಕ್ಷ ರೂಪಾಯಿ ಹಣ ಕೊಟ್ಟವರು ಯಾರು? ಯಾರು ತೆಗೆದುಕೊಂಡು ಹೋಗಿ ಕೊಟ್ಟವರು? ಯಾರು ತೆಗೆದುಕೊಂಡು ಹೋದರು? ಎಲ್ಲಿಂದ, ಯಾರಿಂದ ಹಣ ಪಡೆದರು ಎನ್ನುವ ಮಾಹಿತಿ ಬೇಕಾ ಮುಖ್ಯಮಂತ್ರಿಗೆ. ನಾಚಿಕೆಯಾಗಬೇಕು ಇವರಿಗೆ. ಎಸಿಬಿಗೆ ಕೋರ್ಟ್ ಛೀಮಾರಿ ಹಾಕಿದೆ. ನನ್ನ ಬಗ್ಗೆ ಹುಡುಗಾಟಿಕೆ ಮಾಡಬೇಡಿ. ನಾನು ನಿಖರ ಮಾಹಿತಿಯನ್ನೇ ಹೇಳಿದ್ದೇನೆ ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.

ಭ್ರಷ್ಟಾಚಾರದ ಸ್ವೇಚ್ಚಾಚಾರ

ನಿನ್ನೆ ಇಬ್ಬರು ಹಿರಿಯ ಅಧಿಕಾರಿಗಳ ಬಂಧನವಾಗಿದೆ. ಈ ಘಟನೆಗೆ ಕಾರಣ ಅನೇಕ ವರ್ಷಗಳಿಂದ ಆಗಿರುವ ಆಡಳಿತದ ಕುಸಿತ. ಆಡಳಿತ ನಡೆಸುವ ಮುಖ್ಯಸ್ಥರ ನಡವಳಿಕೆಯೇ ಇದಕ್ಕೆ ಕಾರಣ. ರಾಜ್ಯದಲ್ಲಿ ಭ್ರಷ್ಟಾಚಾರ ಸ್ವೇಚ್ಚಾಚಾರವಾಗಿ ನಡೀತಾ ಇದೆ. ಇದು ಕೇವಲ ಬಿಜೆಪಿ ಪಕ್ಷದ ಭ್ರಷ್ಟಾಚಾರ ಅಷ್ಟೆ ಅಲ್ಲ ಕಾಂಗ್ರೆಸ್ ಆಡಳಿತದಲ್ಲೂ ಇತ್ತು. ಆಗ ಕಠಿಣ ಕ್ರಮ ತೆಗದುಕೊಳ್ಳದೇ ಅಂತಹ ವ್ಯಕ್ತಿಗಳಿಗೆ ರಕ್ಷಣೆ ಕೊಟ್ಟರು ಎಂದು ಕುಮಾರಸ್ವಾಮಿ ಅವರು ದೂರಿದರು.

ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಹಿರಿಯ ಅಧಿಕಾರಿ ಫ್ಲಾಟ್ ನಲ್ಲಿ 5 ಕೋಟಿ ಹಣ ಸಿಕ್ಕಿತು. ಯಶವಂತಪುರ ಫ್ಲಾಟ್ ನಲ್ಲಿ ಆ ಹಣವನ್ನು ಸೀಜ್ ಮಾಡಿದರು. ಆ ಅಧಿಕಾರಿಗೆ ಮತ್ತೆ ರಕ್ಷಣೆ ಕೊಟ್ಟು ಉನ್ನತ ಹುದ್ದೆ ಕೊಟ್ಟರು. ಇಂಥ ಹಿನ್ನೆಲೆ ಕಾಂಗ್ರೆಸ್ ನಿಂದ ಪ್ರಾರಂಭ ಆಗಿ ಬಿಜೆಪಿ ಅದನ್ನು ಮುಂದುವರೆಸಿದೆ. ಇದರಿಂದಲೇ ಯಾವುದೇ ಅಧಿಕಾರಿಗಳಿಗೆ ಭಯ ಭೀತಿ ಇಲ್ಲ ಎಂದರು ಅವರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X