Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಭಾವಿ ಸಚಿವರ ಹೆಸರು ದಾಖಲಿಸಿಕೊಳ್ಳಲು...

ಪ್ರಭಾವಿ ಸಚಿವರ ಹೆಸರು ದಾಖಲಿಸಿಕೊಳ್ಳಲು ಸಿದ್ಧವಿಲ್ಲದ ತನಿಖಾಧಿಕಾರಿಗಳು: ಡಿ.ಕೆ. ಶಿವಕುಮಾರ್

ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ6 July 2022 3:26 PM IST
share
ಪ್ರಭಾವಿ ಸಚಿವರ ಹೆಸರು ದಾಖಲಿಸಿಕೊಳ್ಳಲು ಸಿದ್ಧವಿಲ್ಲದ ತನಿಖಾಧಿಕಾರಿಗಳು: ಡಿ.ಕೆ. ಶಿವಕುಮಾರ್

ಬೆಂಗಳೂರು, ಜು.6: ‘ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಬಂಧನಕ್ಕೊಳಗಾಗಿರುವ ಎಡಿಜಿಪಿ ಅಮೃತ್ ಪೌಲ್ ಈ ಹಗರಣದಲ್ಲಿ ಭಾಗಿಯಾಗಿರುವ ಸಚಿವರು, ನಾಯಕರ ಹೆಸರನ್ನು ಬಹಿರಂಗಪಡಿಸಲು ಸಿದ್ಧವಿದ್ದರೂ ತನಿಖಾಧಿಕಾರಿಗಳು ಅದನ್ನು ದಾಖಲಿಸಿಕೊಳ್ಳುತ್ತಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಕರ್ನಾಟಕ ಭ್ರಷ್ಟಾಚಾರದ ರಾಜಧಾನಿಯಾಗಿದೆ. ಈ ಕುರಿತು ಹೈಕೋರ್ಟ್ ನ್ಯಾಯಾಧೀಶರು ಏನು ಹೇಳಿದ್ದಾರೆ ಎಂದು ಎಲ್ಲರೂ ನೋಡಿದ್ದಾರೆ ಎಂದರು.

ಪಿಎಸ್‍ಐ ಹಗರಣದಲ್ಲಿ ರಾಜ್ಯದ ಐಪಿಎಸ್ ಅಧಿಕಾರಿಗಳು, ರಾಜಕಾರಣಿಗಳು, ಮಂತ್ರಿಗಳು ಭಾಗಿಯಾಗಿದ್ದಾರೆ. ಸಚಿವರೇ ನಮ್ಮ ಜಿಲ್ಲೆಯ ಅಭ್ಯರ್ಥಿಗಳಿಗೆ ಶರಣಾಗುವಂತೆ ಹೇಳಿದ್ದಾರೆ. ಇದುವರೆಗೂ 50ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದು, ಅವರ ಹೇಳಿಕೆ, ಬಂಧನವಾಗಿರುವ ಎಡಿಜಿಪಿ ಅವರ ಹೇಳಿಕೆಯನ್ನು ಪೂರ್ಣಪ್ರಮಾಣದಲ್ಲಿ ತನಿಖಾಧಿಕಾರಿಗಳು ದಾಖಲೆ ಮಾಡಿಕೊಳ್ಳುತ್ತಿಲ್ಲ ಎಂದು ಅವರು ದೂರಿದರು.

ತನಿಖೆಯಲ್ಲಿ ಆಂತರಿಕವಾಗಿ ಏನೆಲ್ಲಾ ಆಗುತ್ತಿದೆ ಎಂಬುದು ಗೊತ್ತಿದೆ. ಇಂತಹ ತನಿಖೆಯಿಂದ ನ್ಯಾಯ ಸಿಗುವುದಿಲ್ಲ. ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು. ರಾಜ್ಯದಲ್ಲಿ ಯಾವುದೇ ಯೋಜನೆಗಳು ಜಾರಿಯಾಗುತ್ತಿಲ್ಲ. ಬಿಜೆಪಿ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ಅವರ ಕತೆ ಮುಕ್ತಾಯದ ಹಂತದಲ್ಲಿದ್ದು, ಜನ ಅವರನ್ನು ಅಧಿಕಾರದಿಂದ ಕಿತ್ತೊಗೆಯಲಿದ್ದಾರೆ ಎಂದು ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಶಾಸಕರ ಅಧ್ಯಯನ ಪ್ರವಾಸ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಧ್ಯಯನದ ಹೆಸರಲ್ಲಿ ಬಿಜೆಪಿ ಶಾಸಕರು ಪ್ರವಾಸ ಮಾಡುತ್ತಿದ್ದಾರೆ. ಇದು ಅವರ ಇಚ್ಛೆ. ನಾವು ನಮ್ಮ ಶಾಸಕರನ್ನು ಅಧ್ಯಯನ ಪ್ರವಾಸಕ್ಕೆ ಕಳುಹಿಸಲು ಮುಂದಾದಾಗ ಅವರು ಟೀಕಿಸಿದ್ದರು ಎಂದರು.

ಯಾವುದೇ ಆಕ್ಷೇಪವಿಲ್ಲ: ಸಿದ್ದರಾಮೋತ್ಸವ ಕಾರ್ಯಕ್ರಮ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ನಾಯಕರು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುವುದರಲ್ಲಿ ಯಾವುದೇ ತಪ್ಪಿಲ್ಲ. ಅದು ಅವರ ವೈಯಕ್ತಿಕ ಹಾಗೂ ಅಭಿಮಾನಿಗಳ ಇಚ್ಛೆಗೆ ಬಿಟ್ಟದ್ದು. ಪಕ್ಷಕ್ಕೆ ಏನೆಲ್ಲಾ ಕಾರ್ಯಕ್ರಮಗಳು ಅನುಕೂಲವಾಗುತ್ತವೋ ಅದಕ್ಕೆ ಪಕ್ಷದ ಅಧ್ಯಕ್ಷನಾಗಿ ನಾನು ಬೆಂಬಲವಾಗಿ ನಿಲ್ಲುತ್ತೇನೆ ಎಂದರು.

ಸೋನಿಯಾ ಗಾಂಧಿ ಆಗಸ್ಟ್ 15 ರಂದು ದೇಶದ 75ನೇ ಸ್ವಾತಂತ್ರ್ಯೋತ್ಸವ ಆಚರಣೆ ವಿಚಾರವಾಗಿ ನನಗೆ ಜವಾಬ್ದಾರಿ ವಹಿಸಿದ್ದು, ಕಾಂಗ್ರೆಸ್ ನಾಯಕರು, 75 ಸಾವಿರದಿಂದ 1 ಲಕ್ಷ ಕಾರ್ಯಕರ್ತರು ಬೆಂಗಳೂರಿನಲ್ಲಿ ಮೆರವಣಿಗೆಯನ್ನು ಮಾಡಲಿದ್ದಾರೆ. ಇದರ ಜತೆಗೆ 75 ಕಿ.ಮೀ ಪಾದಯಾತ್ರೆ ಮಾಡಲು ತಿಳಿಸಿದ್ದಾರೆ. ಇದನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಸಲು ಸೂಚಿಸಲಾಗಿದ್ದು, ಈ ವಿಚಾರವಾಗಿ ನಾಳೆ ಸಭೆ ಕರೆದಿದ್ದೇನೆ. ನಾನು ಪಕ್ಷದ ಹೈಕಮಾಂಡ್ ನಿರ್ದೇಶನದಂತೆ ನಡೆದುಕೊಳ್ಳುತ್ತಿದ್ದೇನೆ ಎಂದು ಅವರು ಹೇಳಿದರು.

ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು, ಸಂವಿಧಾನವನ್ನು ನೀಡಿದೆ. ಈ ಕಾರ್ಯಕ್ರಮದ ಆಚರಣೆ ನಮ್ಮ ಕರ್ತವ್ಯ. ಈ ಕಾರ್ಯಕ್ರಮದ ಮೂಲಕ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಾತ್ರವನ್ನು ಎಲ್ಲರಿಗೂ ತಿಳಿಸಬೇಕಿದೆ. ಉಳಿದಂತೆ ನಾಯಕರ ಹುಟ್ಟುಹಬ್ಬ ಆಚರಣೆ ವಿಚಾರವಾಗಿ ನನಗೆ ಯಾವುದೇ ಆಕ್ಷೇಪವಿಲ್ಲ ಎಂದು ಅವರು ತಿಳಿಸಿದರು.

ಹೈಕೋರ್ಟ್ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಬಗ್ಗೆ ರಾಹುಲ್ ಗಾಂಧಿ ಮಾಡಿರುವ ಟ್ವೀಟ್ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಹುಲ್ ಗಾಂಧಿ ಸರಿಯಾಗಿ ಹೇಳಿದ್ದಾರೆ. ಈ ದೇಶದಲ್ಲಿ ನ್ಯಾಯಾಂಗದ ರಕ್ಷಣೆಯಾಗಬೇಕು. ನ್ಯಾಯಾಧೀಶರು ಭ್ರಷ್ಟಾಚಾರ ನಿಗ್ರಹದ ವಿಚಾರವಾಗಿ ಧ್ವನಿ ಎತ್ತಿ, ಮುಕ್ತವಾದ ತನಿಖೆ ಆಗಬೇಕು’ ಎಂದು ಹೇಳಿದ್ದಾರೆ ಎಂದರು.
 
ಹಗರಣಗಳಲ್ಲಿ ಸರಕಾರ ಸಂಪೂರ್ಣವಾಗಿ ಭಾಗಿಯಾಗಿದೆ ಎಂದು ಅವರಿಗೂ ಗೊತ್ತಿದೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ನ್ಯಾಯವನ್ನು ಎತ್ತಿ ಹಿಡಿಯಬೇಕಿದೆ ಎಂದು ಶಿವಕುಮಾರ್ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X