Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ‘ಮೀಫ್ʼ ಶಾಲೆಗಳಲ್ಲಿ ಐಎಎಸ್...

ಮಂಗಳೂರು: ‘ಮೀಫ್ʼ ಶಾಲೆಗಳಲ್ಲಿ ಐಎಎಸ್ ಓರಿಯೆಂಟೇಶನ್ ಯೋಜನೆಗೆ ಚಾಲನೆ

► ಎಕ್ಸಲೆನ್ಸ್ ಪ್ರಶಸ್ತಿ-2022 ಪ್ರದಾನ ► ಯೆನೆಪೊಯ ವಿವಿ ಕುಲಪತಿ ಡಾ.ವೈ.ಅಬ್ದುಲ್ಲ ಕುಂಞಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ6 July 2022 4:16 PM IST
share
ಮಂಗಳೂರು: ‘ಮೀಫ್ʼ ಶಾಲೆಗಳಲ್ಲಿ ಐಎಎಸ್ ಓರಿಯೆಂಟೇಶನ್ ಯೋಜನೆಗೆ ಚಾಲನೆ

ಮಂಗಳೂರು: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್)ದ ವತಿಯಿಂದ ಮೀಫ್ ಸದಸ್ಯ ಶಾಲೆಗಳ ಸಹಿತ ದ.ಕ. ಮತ್ತು ಉಡುಪಿ ಜಿಲ್ಲೆಯ ಎಸೆಸೆಲ್ಸಿ ಹಾಗೂ ಪಿಯುಸಿಯಲ್ಲಿ ರಾಜ್ಯ ಮಟ್ಟದ ಟಾಪರ್‌ಗಳಿಗೆ ಮೀಫ್ ಎಕ್ಸಲೆನ್ಸ್ ಪ್ರಶಸ್ತಿ -2022 ಪ್ರದಾನ ಕಾರ್ಯಕ್ರಮವು ಬುಧವಾರ ನಗರದ ಕಂಕನಾಡಿಯ ಜಂಇಯ್ಯತುಲ್ ಫಲಾಹ್ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭ ಐಎಎಸ್ ಓರಿಯೆಂಟೇಶನ್ ಯೋಜನೆಗೆ ಚಾಲನೆ ನೀಡಲಾಯಿತು. ಅಲ್ಲದೆ ಗುಲ್ಬರ್ಗಾ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ಯೆನೆಪೊಯ ಪರಿಗಣಿಸಲ್ಪಟ್ಟ ವಿವಿಯ ಕುಲಪತಿ ಡಾ.ವೈ.ಅಬ್ದುಲ್ಲಾ ಕುಂಞಿ ಅವರನ್ನು ಸನ್ಮಾನಿಸಲಾಯಿತು.

ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ‘ಸಕಾರಾತ್ಮಕ ಚಿಂತನೆಯಿಂದ ಒಗ್ಗೂಡಿ ಕೆಲಸ ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ‘ಮೀಫ್’ ಸಂಸ್ಥೆ ಸಾಕ್ಷಿಯಾಗಿದೆ. ಮಾಜಿ ಶಿಕ್ಷಣ ಸಚಿವ ಬಿ.ಎ. ಮೊಯ್ದಿನ್‌ರವರ ಕನಸಿನ ಕೂಸಾದ ‘ಮೀಫ್’ನ ಸಹಕಾರದಿಂದ ಸಮುದಾಯದಲ್ಲಿ ಶೈಕ್ಷಣಿಕ ಕ್ರಾಂತಿ ಸೃಷ್ಟಿಯಾಗಿದೆ. ಇದು ಭವಿಷ್ಯದ ಮಕ್ಕಳಿಗೂ ಸ್ಫೂರ್ತಿಯಾಗಬೇಕು. 2050, 2070ನೆ ಇಸವಿಯ ದೃಷ್ಟಿಯಲ್ಲಿಟ್ಟುಕೊಂಡು ಶೈಕ್ಷಣಿಕ ಯೋಜನೆಗಳನ್ನು ರೂಪಿಸಬೇಕಾದ ಅಗತ್ಯವಿದೆ’ ಎಂದರು.

ದಿಕ್ಸೂಚಿ ಭಾಷಣಗೈದ ‘ಮೀಫ್’ ಗೌರವಾಧ್ಯಕ್ಷ ಉಮರ್ ಟೀಕೆ ‘ಸುಮಾರು 25 ವರ್ಷದ ಹಿಂದೆ ಮುಸ್ಲಿಂ ಸಮುದಾಯದಲ್ಲಿ ಇಂಗ್ಲಿಷ್ ಮಾಧ್ಯಮದ ಶಿಕ್ಷಣದ ಪರಿಕಲ್ಪನೆಯೇ ಇರಲಿಲ್ಲ. ಆದರೆ ಕ್ರಮೇಣ ಶಿಕ್ಷಣದ ಮಹತ್ವವನ್ನು ಅರಿತ ಮುಸ್ಲಿಮರು ಸಂಘಟಿತರಾಗಿ ಮದ್ರಸಗಳಲ್ಲೇ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆದು ಇಂದು ಸಮಾಜಕ್ಕೆ ಮಾದರಿಯಾಗಿದ್ದಾರೆ. ಸಮಸ್ಯೆಗಳನ್ನು ಬಗೆಹರಿಸುವುದಕ್ಕಿಂತಲೂ ಸಮಸ್ಯೆಗಳು ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕಿದೆ. ಸಂಘಟಿತರಾಗಿ ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡಿದಾಗ ಅದರಲ್ಲಿ ಯಶಸ್ಸು ಸಿಗುತ್ತದೆ ಎಂಬುದಕ್ಕೆ ‘ಮೀಫ್’ ಉದಾಹರಣೆಯಾಗಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸೆಸೆಲ್ಸಿ-ಪಿಯುಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಸಿದ್ಧರಾಗುತ್ತಿದ್ದಾಗಲೇ ಹಿಜಾಬ್ ವಿಚಾರದಲ್ಲಿ ಗೊಂದಲ ಸೃಷ್ಟಿಯಾಯಿತು. ತಕ್ಷಣ ‘ಮೀಫ್’ ಮಧ್ಯ ಪ್ರವೇಶಿಸಿ ಸರಕಾರಿ ಅಧಿಕಾರಿಗಳು ಮತ್ತು ಸಮುದಾಯದ ಪ್ರಮುಖರ ಸಹಕಾರದಲ್ಲಿ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಪ್ರೇರಣೆ ನೀಡಿದ್ದು ಗಮನಾರ್ಹ’ ಎಂದರು.

ಮೀಫ್ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನಗೈದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ‘ಮೀಫ್’ ಗೌರವ ಸಲಹೆಗಾರ ಸೈಯದ್ ಮುಹಮ್ಮದ್ ಬ್ಯಾರಿ ‘ನೀವು ಏನೇ ಆಗಿ ಮೊದಲು ಸತ್ಯವಂತರಾಗಿ, ನ್ಯಾಯವಂತರಾಗಿ, ಪರೋಪಕಾರಿಯಾಗಿ, ಮನುಷ್ಯರಾಗಿ. ಬದುಕಿಗೆ ರ‍್ಯಾಂಕ್ ಗಳು ಮುಖ್ಯವಲ್ಲ. ಜೀವನ ಮೌಲ್ಯವೇ ಮುಖ್ಯವಾಗಿದೆ. ಬದುಕಿನಲ್ಲಿ ಮೌಲ್ಯಗಳನ್ನು ಅಳವಡಿಸಿಕೊಳ್ಳದಿದ್ದರೆ ನಾವು ಯಾವ ಸಾಧನೆ ಮಾಡಿದರೂ ಪ್ರಯೋಜನವಿಲ್ಲ. ಅದಲ್ಲದೆ ನಾವು ಎಷ್ಟೇ ಶ್ರೀಮಂತರಾಗಿದ್ದರೂ ಕೂಡ ಭವಿಷ್ಯದಲ್ಲಿ ನಮ್ಮ ಶ್ರೀಮಂತಿಕೆಯನ್ನು ಯಾರೂ ಗುರುತಿಸಿಕೊಳ್ಳುವುದಿಲ್ಲ ಬದಲಾಗಿ ನಮ್ಮ ಸೇವೆಯನ್ನಷ್ಟೇ ನೆನಪಿಸುತ್ತಾರೆ ಮತ್ತು ಗೌರವಿಸುತ್ತಾರೆ ಎಂಬುದನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ತಿಳಿದುಕೊಳ್ಳಬೇಕಿದೆ’ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಯೆನೆಪೊಯ (ಡೀಮ್ಡ್) ವಿವಿಯ ಕುಲಪತಿ ಡಾ.ವೈ.ಅಬ್ದುಲ್ಲಾ ಕುಂಞಿ ‘ಮೀಫ್ ಸಂಸ್ಥೆಯು ಸಮುದಾಯದಲ್ಲಿ ಶೈಕ್ಷಣಿಕ ಕ್ರಾಂತಿ ಸೃಷ್ಟಿಸಿದೆ ಮತ್ತು ಸಮಾಜಕ್ಕೆ ಮಾದರಿಯಾಗಿದೆ. ಜನಸಾಮಾನ್ಯರಲ್ಲಿ ಸ್ಫೂರ್ತಿಯನ್ನೂ ತುಂಬಿದೆ. ಭವಿಷ್ಯದಲ್ಲಿ ಶೈಕ್ಷಣಿಕವಾಗಿ ಯಾವ ಯೋಜನೆ ರೂಪಿಸಿಕೊಳ್ಳಬಹುದು ಮತ್ತು ಸಮಾಜಕ್ಕೆ ಯಾವ ರೀತಿಯ ಕೊಡುಗೆಗಳನ್ನು ನೀಡಬಹುದು ಎಂಬುದನ್ನು ‘ಮೀಫ್’ನಂತಹ ಸಂಸ್ಥೆಗಳಿಂದ ತಿಳಿದುಕೊಳ್ಳಬಹುದಾಗಿದೆ’ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ದ.ಕ.ಜಿಲ್ಲಾ ಡಿಡಿಪಿಯು ಸಿ.ಡಿ.ಜಯಣ್ಣ, ದ.ಕ. ಜಿಲ್ಲಾ ಡಿಡಿಪಿಐ ಕೆ. ಸುಧಾಕರ್, ಏಸ್  ಐಎಎಸ್ ಅಕಾಡಮಿಯ ಅಧ್ಯಕ್ಷ ಅಬೂಬಕರ್ ಸಿದ್ದೀಕ್, ರಾಷ್ಟ್ರೀಯ ತರಬೇತುದಾರ ರಾಜೇಂದ್ರ ಭಟ್ ಮಾತನಾಡಿದರು.

ವೇದಿಕೆಯಲ್ಲಿ ಮೀಫ್ ಪದಾಧಿಕಾರಿಗಳಾದ ಬಿ.ಎ. ನಝೀರ್ ಕೃಷ್ಣಾಪುರ, ಶಬಿ ಖಾಝಿ ಉಡುಪಿ, ಮುಸ್ತಫಾ ಸುಳ್ಯ, ನಿಸಾರ್ ಫಕೀರ್ ಮುಹಮ್ಮದ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ‘ಮೀಫ್’ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೀಫ್ ಉಪಾಧ್ಯಕ್ಷ ಬಿ.ಎಂ. ಮುಮ್ತಾಝ್  ಅಲಿ ಸ್ವಾಗತಿಸಿದರು. ವಿದ್ಯಾರ್ಥಿ ಅಖೀಲ್ ಅಹ್ಮದ್ ಕಿರಾಅತ್ ಪಠಿಸಿದರು. ಬಿ.ಎ. ಮುಹಮ್ಮದ್ ಅಲಿ ಕಮ್ಮರಡಿ ಕಾರ್ಯಕ್ರಮ ನಿರೂಪಿಸಿದರು. ರಿಯಾಝ್ ಅಹ್ಮದ್ ಕಣ್ಣೂರು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಿರ್ವಹಿಸಿದರು. ಮೀಫ್ ಕೋಶಾಧಿಕಾರಿ ಅಬ್ದುಲ್ ರಹ್ಮಾನ್ ತೊಕ್ಕೊಟ್ಟು ವಂದಿಸಿದರು.

ಎಸೆಸೆಲ್ಸಿಯಲ್ಲಿ ಪ್ರಥಮ ಸ್ಥಾನ ಗಳಿಸಿದ ಉಡುಪಿಯ ಸಾಲಿಹಾತ್ ಆಂಗ್ಲ ಮಾಧ್ಯಮ ಶಾಲೆಯ ಆಯಿಶಾ ಅಝ್ವಾ, ದ್ವಿತೀಯ ಸ್ಥಾನ ಗಳಿಸಿದ ಕೃಷ್ಣಾಪುರದ ಚೈತನ್ಯ ಪಬ್ಲಿಕ್ ಶಾಲೆಯ ಏಕ್‌ಥಾ ಎಚ್., ತೃತೀಯ ಸ್ಥಾನ ಗಳಿಸಿದ ಉಪ್ಪಿನಂಗಡಿ ಆತೂರು ರಾಮಕುಂಜದ  ಆಯಿಶಾ ಗರ್ಲ್ಸ್ ಹೈಸ್ಕೂಲ್‌ನ ಹಮೀದಾ ವಫಾ ಮತ್ತು ಆಯಿಶಾ ರಿಝಾ ಅವರಿಗೆ ‘ಮೀಫ್’ ನಿಕಟಪೂರ್ವ ಅಧ್ಯಕ್ಷ ಮರ್ಹೂಂ ಎಡಪದವು ಮುಹಮ್ಮದ್ ಬ್ಯಾರಿ ಸ್ಮಾರಕ ಪ್ರಶಸ್ತಿಯನ್ನು ನೀಡಲಾಯಿತು.

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಪ್ರಥನ ಸ್ಥಾನಗಳಿಸಿದ ಮೂಳೂರಿನ ಅಲ್ ಇಹ್ಸಾನ್ ವಿಮೆನ್ಸ್ ಪಿಯು ಕಾಲೇಜಿನ ರಿಝಾನಾ, ದ್ವಿತೀಯ ಸ್ಥಾನಗಳಿಸಿದ ಪುತ್ತೂರು ಕುಂಬ್ರದ ಮರ್ಖಝುಲ್ ಹುದಾ ವಿಮೆನ್ಸ್ ಪಿಯು ಕಾಲೇಜಿನ ಫಾತಿಮಾ ನಿಶಾ ಹಾಗೂ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ತೊಕ್ಕೊಟ್ಟು ಬಬ್ಬುಕಟ್ಟೆಯ ಹಿರಾ ವಿಮೆನ್ಸ್ ಪಿಯು ಕಾಲೇಜಿನ ಮುಫೀಝಾ, ದ್ವಿತೀಯ ಸ್ಥಾನಗಳಿಸಿದ ಮೂಡುಬಿದಿರೆಯ ಅಲ್ ಫುರ್ಖಾನ್ ಇಸ್ಲಾಮಿಕ್ ಪಿಯು ಕಾಲೇಜಿನ ತಹ್‌ಸಿನಾ, ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ಉಪ್ಪಿನಂಗಡಿ ಆತೂರು ರಾಮಕುಂಜದ  ಆಯಿಶಾ ಗರ್ಲ್ಸ್ ಪಿಯು ಕಾಲೇಜಿನ ನಿಯಾಫಾ ಮರಿಯಂ, ದ್ವಿತೀಯ ಸ್ಥಾನ ಗಳಿಸಿದ ಮೆಲ್ಕಾರ್‌ನ ವಿಮೆನ್ಸ್ ಪಿಯು ಕಾಲೇಜಿನ ನಿಶಾತ್ ಫಾತಿಮಾ ಅವರಿಗೆ ಮೀಫ್ ಮಾಜಿ ಅಧ್ಯಕ್ಷ ಮರ್ಹೂಂ ಕುಕ್ಕಾಡಿ ಅಬ್ದುಲ್ ಖಾದರ್ ಸ್ಮಾರಕ ಪ್ರಶಸ್ತಿಯನ್ನು ನೀಡಲಾಯಿತು.

ಎಸೆಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ತಂದುಕೊಟ್ಟ ಕಾಟಿಪಳ್ಳದ ಇನ್‌ಫೆಂಟ್ ಮೇರಿ ಇ.ಎಂ. ಹೈಸ್ಕೂಲ್‌ನ ಮುಹಮ್ಮದ್ ಆಬಿದ್ ಮತ್ತು ಮಲ್ಪೆಯ ಸರಕಾರಿ ಹೈಸ್ಕೂಲ್‌ನ ಪುನೀತ್ ನಾಯಕ್ ಹಾಗೂ ಪಿಯುಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ತಂದುಕೊಟ್ಟ ಸಂತ ಅಲೋಶಿಯಸ್ ಕಾಲೇಜಿನ ಇಲ್ಹಾಮ್ ಅವರಿಗೆ ಮಾಜಿ ಶಿಕ್ಷಣ ಸಚಿವ ಬಿ.ಎ.ಮೊಯ್ದಿನ್ ಸ್ಮಾರಕ ಪ್ರಶಸ್ತಿಯನ್ನು ನೀಡಲಾಯಿತು.

ಮೀಫ್ ಸದಸ್ಯ ಸಂಸ್ಥೆಗಳಾದ ಕೃಷ್ಣಾಪುರದ ಚೈತನ್ಯ ಪಬ್ಲಿಕ್ ಶಾಲೆ ಮತ್ತು ಪುತ್ತೂರಿನ ಮೌಂಟೈನ್ ವ್ಯೂವ್ ಹಾಗೂ ಕಾಟಿಪಳ್ಳದ ಹಸನಬ್ಬ ಮಾಸ್ಟರ್ ಮೆಮೋರಿಯಲ್ ಕಾಲೇಜಿಗೆ ಅತ್ಯುತ್ತಮ ಶಿಕ್ಷಣ ಸಂಸ್ಥೆ ಎಂದು ಗುರುತಿಸಿ ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X