Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮನೆಯ ದೊಡ್ಡಣ್ಣನ ಜನ್ಮದಿನೋತ್ಸವಕ್ಕೆ...

ಮನೆಯ ದೊಡ್ಡಣ್ಣನ ಜನ್ಮದಿನೋತ್ಸವಕ್ಕೆ ಅಣ್ಣ-ತಮ್ಮಂದಿರಿಂದಲೇ ವಿರೋಧ: ಕೆ.ಎಸ್ ಈಶ್ವರಪ್ಪ

ಕಾಂಗ್ರೆಸ್ ಗೆ ಇಂತಹ ದುಸ್ಥಿತಿ ಬರಬಾರದಿತ್ತು ಎಂದು ವ್ಯಂಗ್ಯವಾಡಿದ ಮಾಜಿ ಸಚಿವ

6 July 2022 5:21 PM IST
share
ಮನೆಯ ದೊಡ್ಡಣ್ಣನ ಜನ್ಮದಿನೋತ್ಸವಕ್ಕೆ ಅಣ್ಣ-ತಮ್ಮಂದಿರಿಂದಲೇ ವಿರೋಧ: ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ, ಜು.06: ಕಾಂಗ್ರೆಸ್ ನಾಯಕರಿಗೆ ದುಸ್ಥಿತಿ ಬಂದಿದ್ದು, ದೀಪ ಆರುವಾಗ ಜೋರಾಗಿ ಉರಿಯುವಂತೆ ಕಾಂಗ್ರೆಸ್ ಮುಖಂಡರು ಉರಿಯುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಕೆ.ಎಸ್. ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ಬುಧವಾರ ತುಂಗಾ ನದಿಗೆ ಬಾಗಿನ ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.

ಕಾಂಗ್ರೆಸ್ ಪಕ್ಷದಲ್ಲಿಯೇ ಒಗ್ಗಟ್ಟಿಲ್ಲ. ಅದು ಛಿದ್ರ ಛಿದ್ರವಾಗುತ್ತಿದೆ. ಮನೆಯ ದೊಡ್ಡಣ್ಣನ(ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ) ಜನ್ಮದಿನೋತ್ಸವ ಸಿದ್ದರಾಮೋತ್ಸವಕ್ಕೆ ಅವರ ಅಣ್ಣತಮ್ಮಂದಿರೇ(ಪಕ್ಷದ ಮುಖಂಡರು) ವಿರೋಧಿಸುತ್ತಿದ್ದಾರೆ. ಸಿದ್ದರಾಮೋತ್ಸವಕ್ಕೂ ನಮಗೂ ಸಂಬಂಧವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬಹಿರಂಗವಾಗಿಯೇ ಹೇಳುತ್ತಿದ್ದಾರೆ. ಇಂತಹ ದುಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಬರಬಾರದಿತ್ತು ಎಂದು ವ್ಯಂಗ್ಯವಾಡಿದರು.

ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಯಾರೂ ಮಾತನಾಡಬಾರದು ಎಂದು ಕಾಂಗ್ರೆಸ್ ಹೈಕಮಾಂಡ್ ತಿಳಿಸಿದ್ದರೂ ನಾನು ಮುಖ್ಯಮಂತ್ರಿ, ನಾನು ಮುಖ್ಯಮಂತ್ರಿ ಎಂದು ಅವರವರೇ ಕಚ್ಚಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಈಗ ಒಗ್ಗಟ್ಟೂ ಇಲ್ಲ, ಏನೂ ಇಲ್ಲ. ತಮ್ಮ ಅಸ್ತಿತ್ವಕ್ಕಾಗಿ ಮಾತನಾಡುವುದನ್ನು ಬಿಟ್ಟರೆ ಆ ಪಕ್ಷಕ್ಕೆ ದುರ್ಗತಿ ಬಂದಿರುವುದಂತೂ ನಿಜ ಎಂದರು.

ಬಿಜೆಪಿ ಬಗ್ಗೆ ಮಾತನಾಡುವ ಯಾವ ಅರ್ಹತೆಯೂ ಕಾಂಗ್ರೆಸ್ ನವರಿಗೆ ಇಲ್ಲ. ನಮ್ಮದು ಶಿಸ್ತು, ನಾಯಕತ್ವ, ಸಿದ್ಧಾಂತಗಳ ತಳಹದಿಯನ್ನಿಟ್ಟುಕೊಂಡು ಎಲ್ಲಾ ವರ್ಗದ ಜನರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಪಿಎಸ್‌ಐ ನೇಮಕಾತಿ ಅಕ್ರಮ ಪ್ರಶ್ನೆ ಪತ್ರಿಕೆ ಬಯಲಾಗಿರುವುದಕ್ಕೆ ಸಂಬಂಧಿಸಿದಂತೆ ಟೀಕೆ ಮಾಡುವ ಕಾಂಗ್ರೆಸ್ ನವರು ಅವರ ಕಾಲದಲ್ಲಿ ಏನು ಹಗರಣಗಳು ನಡೆದಿಲ್ಲವೇ? ಆಗ ಇವರು ಏನು ಮಾಡಿದ್ದರು ಎಂದು ಪ್ರಶ್ನೆ ಮಾಡಿದರು.

ಆಡಳಿತದ ವಿರೋಧಿ ಅಲೆ ಇದೆ ಎಂದು ಹೇಳುತ್ತಿರುವ ಕಾಂಗ್ರೆಸ್ ನವರಿಗೆ ಅರ್ಥವಾಗಬೇಕು. ಕಳೆದ ಲೋಕಸಭೆ ಚುನಾವಣೆಯಲ್ಲೂ ಇದೇ ರೀತಿ ಮಾಡಿದ್ದರು. ಬಿಜೆಪಿ ಒಂದು ಕ್ಷೇತ್ರದಲ್ಲೂ ಗೆಲ್ಲುವುದಿಲ್ಲ ಎಂದಿದ್ದರು. ಆಗ ಬಿಜೆಪಿ 28 ಲೋಕಸಭೆ ಕ್ಷೇತ್ರಗಳಲ್ಲಿ 25 ಸ್ಥಾನಗಳನ್ನು ಗೆದ್ದಿತ್ತು. ಇದು ಕಾಂಗ್ರೆಸ್ ನವರಿಗೆ ತಿಳಿಯಲಿ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಜಗದೀಶ್, ಜಯಲಕ್ಷ್ಮಿ ಈಶ್ವರಪ್ಪ, ಕೆ.ಇ. ಕಾಂತೇಶ್, ಸಂತೋಷ್ ಬಳ್ಳೆಕೆರೆ, ಇ. ವಿಶ್ವಾಸ್, ಉಪಮೇಯರ್ ಶಂಕರ್ ಗನ್ನಿ ಮೊದಲಾದವರಿದ್ದರು.

ತುಂಗೆಗೆ ಬಾಗಿನ ಅರ್ಪಿಸಿದ ಈಶ್ವರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲಾ ಕಡೆ ಮಳೆಯಾಗುತ್ತಿದೆ. ರೈತರಿಗೆ ಸಂತೋಷವಾಗಿದೆ, ಪ್ರತಿಬಾರಿಯೂ ತುಂಗಾ ನದಿ ತುಂಬಿದಾಗ ಬಿಜೆಪಿ ಕಾರ್ಯಕರ್ತರು ಬಾಗಿನ ಅರ್ಪಿಸುವುದು ವಾಡಿಕೆ. ಆ ಮೂಲಕ ತುಂಗಾ ಮಾತೆಗೆ ನಮಿಸಿ ಈ ನಾಡಿನ ಜನ ನೆಮ್ಮದಿಯಿಂದ ಇರುವಂತೆ ಪ್ರಾರ್ಥಿಸಲಾಗಿದೆ ಎಂದರು.

ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಜಿಲ್ಲಾಡಳಿತ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಆಕಸ್ಮಾತ್ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಯಾದರೆ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ.

share
Next Story
X