ಜು.9ಕ್ಕೆ ಸೇಡಿಯಾಪು ಪ್ರಶಸ್ತಿ ಪ್ರದಾನ
ಉಡುಪಿ : ಸೇಡಿಯಾಪು ಕೃಷ್ಣಭಟ್ಟ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜುಲೈ ೯ರ ಬೆಳಗ್ಗೆ ೧೦:೩೦ಕ್ಕೆ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರಮಂಟಪದಲ್ಲಿ ನಡೆಯಲಿದೆ. ಈ ವರ್ಷದ ಪ್ರಶಸ್ತಿಯನ್ನು ಹಿರಿಯ ಸಾಹಿತಿಗಳಾದ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ್ ಅವರಿಗೆ ಪ್ರದಾನ ಮಾಡಲಾಗುವುದು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಹೆ ಕುಲಸಚಿವ ಡಾ.ನಾರಾಯಣ ಸಭಾಹಿತ್ ವಹಿಸಲಿದ್ದಾರೆ.ತುಳುಭಾಷಾ ತಜ್ಞರಾದ ಡಾ.ಪದ್ಮನಾಭ ಕೇಕುಣ್ಣಾಯ ಪ್ರಶಸ್ತಿ ಪುರಸ್ಕೃತರ ಕುರಿತು ಅಭಿನಂದನಾ ಭಾಷಣ ಮಾಡಲಿದ್ದಾರೆ.
ಇದೇ ಸಂದರ್ಭದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಎಚ್.ಜಿ. ಶ್ರೀಧರ್ ‘ಕನ್ನಡ ಕಾವ್ಯದಲ್ಲಿ ಯುದ್ಧವರ್ಣನೆ’ ಎಂಬ ವಿಷಯದ ಕುರಿತು ಉಪನ್ಯಾಸ ನಡೆಯಲಿರುವುದು. ಪ್ರಶಸ್ತಿ ಸಮಿತಿಯ ಸದಸ್ಯರಾದ ಡಾ. ಎಸ್.ಜೆ.ಭಟ್ ಉಪಸ್ಥಿತರಿರುವರು ಎಂದು ಉಡುಪಿಯ ರಾಷ್ಟ್ರಕವಿ ಡಾ. ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story