Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಳಿ ಕುರಿತು ಹೇಳಿಕೆ:ಮಹುವಾ ಮೊಯಿತ್ರಾಗೆ...

ಕಾಳಿ ಕುರಿತು ಹೇಳಿಕೆ:ಮಹುವಾ ಮೊಯಿತ್ರಾಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ6 July 2022 9:15 PM IST
share
ಕಾಳಿ ಕುರಿತು ಹೇಳಿಕೆ:ಮಹುವಾ ಮೊಯಿತ್ರಾಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಬೆಂಬಲ

ಹೊಸದಿಲ್ಲಿ,ಜು.6: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಕಾಳಿಯ ಕುರಿತು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಬುಧವಾರ ಅವರನ್ನು ಬೆಂಬಲಿಸಿದ ಕಾಂಗ್ರೆಸ್ ಸಂಸದ ಶಶಿ ತರೂರ್,‘ನಮ್ಮ ಆರಾಧನಾ ವಿಧಾನಗಳು ದೇಶಾದ್ಯಂತ ವಿಭಿನ್ನವಾಗಿವೆ ’ ಎಂದು ಹೇಳಿದ್ದಾರೆ. ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿಲ್ಲ,ವ್ಯಕ್ತಿಗಳು ತಮ್ಮ ಧಾರ್ಮಿಕ ಆಚರಣೆಗಳನ್ನು ತಮ್ಮ ಇಚ್ಛೆಯಂತೆ ಖಾಸಗಿಯಾಗಿ ನಡೆಸಲು ಬಿಡಿ ಎಂದು ಜನರನ್ನು ಅವರು ಆಗ್ರಹಿಸಿದ್ದಾರೆ.

‘ದುರುದ್ದೇಶಗಳಿಂದ ಹುಟ್ಟುಹಾಕುವ ವಿವಾದಗಳಿಗೆ ನಾನು ಹೊಸಬನಲ್ಲ. ಆದಾಗ್ಯೂಪ್ರತಿಯೊಬ್ಬ ಹಿಂದುವಿಗೂ ತಿಳಿದಿರುವುದನ್ನೇ ಹೇಳಿದ್ದಕ್ಕಾಗಿ ಮೊಯಿತ್ರಾ ವಿರುದ್ಧ ನಡೆಯುತ್ತಿರುವ ದಾಳಿ ನನ್ನನ್ನು ದಿಗ್ಭ್ರಮೆಗೊಳಿಸಿದೆ. ದೇಶಾದ್ಯಂತ ನಮ್ಮ ಆರಾಧನಾ ವಿಧಾನಗಳು ಬದಲಾಗುತ್ತವೆ ಎನ್ನುವುದು ಎಲ್ಲರಿಗೂ ಗೊತ್ತು. ಭಕ್ತರು ಅರ್ಪಿಸುವ ನೈವೇದ್ಯ ದೇವಿಗಿಂತ ಹೆಚ್ಚಿನದನ್ನು ಅವರ ಬಗ್ಗೆಯೇ ಹೇಳುತ್ತದೆ’ ಎಂದು ತರೂರ್ ಟ್ವೀಟಿಸಿದ್ದಾರೆ.

‘ನಾವಿಂದು ಧರ್ಮದ ಯಾವುದೇ ಅಂಶದ ಬಗ್ಗೆ ಸಾರ್ವಜನಿಕವಾಗಿ ಏನನ್ನೂ ಹೇಳಲು ಸಾಧ್ಯವಿಲ್ಲದ ಹಂತವನ್ನು ತಲುಪಿದ್ದೇವೆ. ಏನೇ ಹೇಳಿದರೂ ಅದು ಧಾರ್ಮಿಕ ಅವಹೇಳನವೆಂದು ಯಾರಾದರೂ ಆರೋಪಿಸುವುದು ಸಾಮಾನ್ಯವಾಗಿಬಿಟ್ಟಿದೆ. ಮೊಯಿತ್ರಾ ಯಾರನ್ನೂ ನೋಯಿಸುವ ಇಚ್ಛೆಯನ್ನು ಹೊಂದಿರಲಿಲ್ಲ ಎನ್ನುವದು ಸ್ಪಷ್ಟವಾಗಿದೆ ’ ಎಂದು ತರೂರ್ ಇನ್ನೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಮಂಗಳವಾರ ಕೋಲ್ಕತಾದಲ್ಲಿ ಮಾಧ್ಯಮ ಸಂಸ್ಥೆಯ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮೊಯಿತ್ರಾ‘ಹಿಂದು ಧರ್ಮದಲ್ಲಿ,ಕಾಳಿ ಮಾತೆಯ ಆರಾಧಕಿಯಾಗಿ ನನ್ನ ಕಾಳಿಯನ್ನು ನನ್ನ ಆಯ್ಕೆಯ ರೂಪದಲ್ಲಿ ಕಲ್ಪಿಸಿಕೊಳ್ಳಲು ನನಗೆ ಸ್ವಾತಂತ್ರವಿದೆ. ಅದು ನನ್ನ ಸ್ವಾತಂತ್ರವಾಗಿದೆ ಮತ್ತು ಅದರಿಂದ ಯಾರದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗುವುದಿಲ್ಲ ಎಂದು ನಾನು ಭಾವಿಸಿದ್ದೇನೆ. ನಿಮಗೆ ನಿಮ್ಮ ದೇವರನ್ನು ಆರಾಧಿಸಲು ಇರುವಷ್ಟೇ ಸ್ವಾತಂತ್ರ ನನಗೂ ಇದೆ ’ಎಂದು ಹೇಳಿದ್ದರು.

‘ನನ್ನ ಪಾಲಿಗೆ ಕಾಳಿ ಮಾಂಸವನ್ನು ತಿನ್ನುವ ಮತ್ತು ಮದ್ಯವನ್ನು ಸೇವಿಸುವ ದೇವತೆಯಾಗಿದ್ದಾಳೆ. ಪ.ಬಂಗಾಳದ ವೀರಭೂಮ್ ಜಿಲ್ಲೆಯಲ್ಲಿಯ ಪ್ರಮುಖ ಶಕ್ತಿಪೀಠವಾಗಿರುವ ತಾರಾಪೀಠಕ್ಕೆ ನೀವು ಭೇಟಿ ನೀಡಿದರೆ ಅಲ್ಲಿ ಸಾಧುಗಳು ಧೂಮ್ರಪಾನ ಮಾಡುವುದನ್ನು ನೀವು ನೋಡುತ್ತೀರಿ. ಅದು ಅಲ್ಲಿ ಕಾಳಿ ಆರಾಧನೆಯ ರೂಪವಾಗಿದೆ ’ಎಂದು ಹೇಳಿದ್ದರು.

ಕೆನಡಾದಲ್ಲಿ ನೆಲೆಸಿರುವ ತಮಿಳುನಾಡು ಮೂಲದ ನಿರ್ಮಾಪಕಿ ಲೀನಾ ಮಣಿಮೇಖಲೈ ಅವರ ನೂತನ ಸಾಕ್ಷಚಿತ್ರ ‘ಕಾಳಿ’ಯ ಪೋಸ್ಟರ್ ವಿವಾದವನ್ನುಂಟು ಮಾಡಿರುವ ಸಂದರ್ಭದಲ್ಲಿಯೇ ಹೊರಬಿದ್ದಿರುವ ಮೊಯಿತ್ರಾ ಅವರ ಹೇಳಿಕೆಯೂ ವಿವಾದವನ್ನು ಸೃಷ್ಟಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X