Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾದಿಂದ ಇನ್ನಷ್ಟು ಸಾಲ ಪಡೆಯದಂತೆ...

ಚೀನಾದಿಂದ ಇನ್ನಷ್ಟು ಸಾಲ ಪಡೆಯದಂತೆ ಪಾಕ್‌ಗೆ ಸೂಚಿಸಲು ಐಎಂಎಫ್ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ6 July 2022 10:51 PM IST
share

ಇಸ್ಲಮಾಬಾದ್, ಜು.6: ಪಾಕಿಸ್ತಾನವು ಚೀನಾದಿಂದ ಇನ್ನಷ್ಟು ಸಾಲ ಪಡೆಯುವುದನ್ನು ನಿಷೇಧಿಸಲು ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ ಉದ್ದೇಶಿಸಿದೆ ಎಂದು ವರದಿಯಾಗಿದೆ.

 ಚೀನಾ ಪಾಕಿಸ್ತಾನ ಆರ್ಥಿಕ ಕಾರಿಡಾರ್(ಸಿಪಿಇಸಿ)ಗೆ 7.9 ಬಿಲಿಯನ್ ರೂಪಾಯಿ ಮೊತ್ತದ ಸಾಲವನ್ನು ಚೀನಾದಿಂದ ಪಡೆಯಲು ಪಾಕಿಸ್ತಾನ ನಿರ್ಧರಿಸಿದ್ದು ಈಗ ಇದಕ್ಕೆ ಅಂತರಾಷ್ಟ್ರೀಯ ಹಣಕಾಸು ಸಂಸ್ಥೆಯ (ಐಎಂಎಫ್) ಶಿಫಾರಸಿನ ಅಗತ್ಯ ಬೀಳಲಿದೆ.

 ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಪಾಕಿಸ್ತಾನ ಐಎಂಎಫ್‌ನ ಆರ್ಥಿಕ ನೆರವನ್ನು ಎದುರು ನೋಡುತ್ತಿದೆ. ಆದರೆ ಚೀನಾದಿಂದ ಮಿತಿಮೀರಿ ಸಾಲ ಪಡೆಯುತ್ತಿರುವುದನ್ನು ಆಕ್ಷೇಪಿಸಿರುವ ಐಎಂಎಫ್ , ಚೀನಾದ ಇಂಡಿಪೆಂಡೆಂಟ್ ಪವರ್ ಪ್ರೊಡ್ಯೂಸರ್ಸ್ ಸಂಸ್ಥೆಗೆ ಅಧಿಕ ಬಡ್ಡಿ ಪಾವತಿಸಿರುವುದನ್ನೂ ಆಕ್ಷೇಪಿಸಿದೆ. ವಿದ್ಯುತ್ ಯೋಜನೆಗೆ ಸಂಬಂಧಿಸಿ ಚೀನಾದೊಂದಿಗೆ ಮಾಡಿಕೊಂಡಿರುವ ಒಪ್ಪಂದಗಳನ್ನು ಮರು ರೂಪಿಸಿಕೊಳ್ಳುವಂತೆ ಪಾಕಿಸ್ತಾನಕ್ಕೆ ಸೂಚಿಸಿದೆ ಎಂದು ‘ಫೈನಾನ್ಶಿಯಲ್ ಪೋಸ್ಟ್’ ವರದಿ ಮಾಡಿದೆ

ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಚೀನಾದ ವಿದ್ಯುತ್ ಉತ್ಪಾದನಾ ಸಂಸ್ಥೆಗಳಿಗೆ ಪಾಕಿಸ್ತಾನ 350 ಬಿಲಿಯನ್ ರೂಪಾಯಿಗೂ ಅಧಿಕ ಮೊತ್ತದ ಸಾಲ ಪಾವತಿಸಲು ಬಾಕಿಯಿದೆ. ಸಿಪಿಇಸಿ ಯೋಜನೆಯಡಿಯ ಒಪ್ಪಂದಗಳನ್ನು ಮರು ರೂಪಿಸುವ ಪಾಕ್‌ನ ಪ್ರಸ್ತಾವನೆಯನ್ನು ಚೀನಾ ತಿರಸ್ಕರಿಸಿದೆ. ಪಾಕಿಸ್ತಾನದ ಬಜೆಟ್‌ನಲ್ಲಿ ವೆಚ್ಚಕ್ಕೆ ಮೀಸಲಿರಿಸಿದ ಅನುದಾನ 9,502 ಬಿಲಿಯನ್ ರೂಪಾಯಿ, ಇದರಲ್ಲಿ 40%ಕ್ಕೂ ಅಧಿಕ ಅಂದರೆ 3,950 ಬಿಲಿಯನ್ ರೂಪಾಯಿ ಮೊತ್ತವು ಸಾಲ ಮರುಪಾವತಿಗೆ ಮೀಸಲಾಗಿದೆ. ಇದು ಕಳೆದ ವರ್ಷಕ್ಕಿಂತ 29.1% ಹೆಚ್ಚಳವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಪಾಕಿಸ್ತಾನದ 2022-23ನೇ ಸಾಲಿನ ಬಜೆಟ್‌ನಲ್ಲಿ ದೇಶದ ಪುನರುಜ್ಜೀವನಕ್ಕೆ ಅಡ್ಡಿಯಾಗಿರುವ ಪ್ರಮುಖ ರಚನಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ವಿಫಲವಾಗಿರುವುದರಿಂದ ದೇಶದ ಅರ್ಥವ್ಯವಸ್ಥೆಗೆ ತೀವ್ರ ಸವಾಲು ಎದುರಾಗಿದೆ. ಆರ್ಥಿಕ ಬಿಕ್ಕಟ್ಟು, ಏರುತ್ತಿರುವ ಹಣದುಬ್ಬರ ನಿಯಂತ್ರಣ ಮೀರಿದ್ದು ದೇಶವು ಅಂತರಾಷ್ಟ್ರೀಯ ಸಾಲ ಪಾವತಿಸದೆ ಡಿಫಾಲ್ಟ್ ಪಟ್ಟಿಯಲ್ಲಿ ಕಾಣಿಸಿಕೊಳ್ಳುವ ಆತಂಕಕ್ಕೆ ಕಾರಣವಾಗಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X