Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಂಸದರು, ಶಾಸಕರು ಅಕ್ರಮ ಟೋಲ್ ಪರ :...

ಸಂಸದರು, ಶಾಸಕರು ಅಕ್ರಮ ಟೋಲ್ ಪರ : ಹೋರಾಟ ಸಮಿತಿ ಆರೋಪ

ಜುಲೈ ಕೊನೆಯ ವಾರ ಸುರತ್ಕಲ್ ಟೋಲ್ ಗೇಟ್ ಗೆ ಮುತ್ತಿಗೆ

ವಾರ್ತಾಭಾರತಿವಾರ್ತಾಭಾರತಿ6 July 2022 11:22 PM IST
share
ಸಂಸದರು, ಶಾಸಕರು ಅಕ್ರಮ ಟೋಲ್ ಪರ : ಹೋರಾಟ ಸಮಿತಿ ಆರೋಪ

ಸುರತ್ಕಲ್:‌‌ ಸಂಸದರು, ಶಾಸಕರು ಅಕ್ರಮ ಟೋಲ್ ಗೇಟ್ ಮುಚ್ಚಿಸಲು ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಜುಲೈ ಕೊನೆಯ ವಾರ ಸುರತ್ಕಲ್ ಟೋಲ್ ಗೇಟ್ ಗೆ ಮುತ್ತಿಗೆ ಹಾಕಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸುರತ್ಕಲ್ ನಿರ್ಧರಿಸಿತು.

ಸುರತ್ಕಲ್  ನ ಖಾಸಗಿ ಹೊಟೇಲ್ ನಲ್ಲಿ ಬುಧವಾರ ನಡೆದ ಹೋರಾಟ ಸಮಿತಿಯ ಸಭೆಯಲ್ಲಿ ನಿರ್ಧಾರ ಕೈಗೊಂಡಿರುವ ಹೋರಾಟ ಸಮಿತಿ, ವಿಲೀನದ ನಿರ್ಣಯ, ಹೆದ್ದಾರಿ ಸಚಿವರ ಭರವಸೆ, ಸತತ ಹೋರಾಟಗಳ ಹೊರತಾಗಿಯೂ ವಿವಾದಿತ ಸುರತ್ಕಲ್ ಟೋಲ್ ಗೇಟ್ ನಲ್ಲಿ ಸುಂಕ ಸಂಗ್ರಹ ಮುಂದುವರಿಯಲು ಸ್ಥಳೀಯ ಸಂಸದ, ಶಾಸಕರುಗಳೇ ಕಾರಣ. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಭರತ್ ಶೆಟ್ಟಿ ಸುಂಕ ಸಂಗ್ರಹದ ಗುತ್ತಿಗೆದಾರರು‌ ಹಾಗೂ ಅಕ್ರಮ ಟೋಲ್ ಗೇಟ್ ಪರ ನಿಂತಿದ್ದಾರೆ ಎಂದು ಗಂಭೀರ ಆರೋಪ ಮಾಡಿದೆ.‌

ಮಾರ್ಚ್ 22 ರಂದು ನಿತಿನ್ ಗಡ್ಕರಿ ಲೋಕಸಭೆಯಲ್ಲಿ ನೀಡಿದ ಭರವಸೆಯ ನಂತರದ ಬೆಳವಣಿಗೆಗಳನ್ನು ಸಭೆ ಚರ್ಚಿಸಿತು. 2018 ರಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೆಗೆದು ಕೊಂಡ ನಿರ್ಣಯದ ಪ್ರಕಾರ ಸುರತ್ಕಲ್ ಟೋಲ್ ಗೇಟ್ ವರ್ಷಗಳ ಹಿಂದೆಯೇ ತೆರವುಗೊಳ್ಳಬೇಕಿತ್ತು. ದಿನವೊಂದಕ್ಕೆ 15 ಲಕ್ಷ ರೂ.ಗೂ ಹೆಚ್ಚು ಸುಂಕ ಸಂಗ್ರಹ ಆಗುವ ಸುರತ್ಕಲ್  ಟೋಲ್ ನಲ್ಲಿ ಸುಂಕ ಸಂಗ್ರಹ ಗುತ್ತಿಗೆ ಮಾಫಿಯಾ ಆಗಿ ಬೆಳೆದಿದೆ‌ ಎಂದು  ಆರೋಪಿಸಿದೆ.

ಅದಲ್ಲದೆ ಇದೇ ರಸ್ತೆ ನಿರ್ವಹಣೆಗೆ ಕೋಟ್ಯಂತರ ರೂ. ವರ್ಷವೊಂದಕ್ಕೆ ಖಾಸಗಿ ಏಜನ್ಸಿಗೆ ಗುತ್ತಿಗೆ ನೀಡಲಾಗು ತ್ತಿದೆ‌. ಈ ಹತ್ತಾರು ಕೋಟಿ ರೂ. ಲಾಭದ ವ್ಯವಹಾರದ ಹಿತಾಸಕ್ತಿ ಟೋಲ್ ಗೇಟ್ ತೆರವಿಗೆ ದೊಡ್ಡ ಅಡ್ಡಿಯಾಗಿದೆ. ಇಂತಹ ಹಿತಾಸಕ್ತಿಗಳ ಪರವಾಗಿ ಸಂಸದರು, ಶಾಸಕರು ನಿಂತಿದ್ದಾರೆ ಎಂದು ಹೋರಾಟ ಸಮಿತಿ ಸಭೆ ಗಂಭೀರ ಆರೋಪ ಮಾಡಿದೆ.

ರಸ್ತೆ ನಿರ್ವಹಣೆ ಗುತ್ತಿಗೆ ಪಡೆದ ಕಂಪೆನಿ ಮಳೆಗಾಲದ ಮುಂಚಿತವಾಗಿ ದುರಸ್ತಿ ಕೆಲಸ ನಡೆಸದಿರುವುದರಿಂದ ಹೆದ್ದಾರಿ ಪೂರ್ತಿ ಗುಂಡಿಮಯವಾಗಿ ಸಂಚಾರ ಅಪಾಯಕಾರಿಯಾಗಿ ಮಾರ್ಪಟ್ಟಿದೆ. ಕೂಳೂರು ಹೊಸ ಸೇತುವೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು ಹಳೆ ಸೇತುವೆ ಪ್ರಯಾಣಕ್ಕೆ ಅಯೋಗ್ಯ ಸ್ಥಿತಿಗೆ ತಲುಪಿದೆ. ಇಂತಹ ಕೆಟ್ಟ ರಸ್ತೆಗೆ ಬಲವಂತದಿಂದ ಟೋಲ್ ಪಾವತಿ ಮಾಡುವ ಸ್ಥಿಗೆ ವಾಹನ ಸವಾರರಿಗೆ ಬಂದೊದಗಿದೆ. ಜನತೆ ಈ ಕುರಿತು ಆಕ್ರೋಶಗೊಂಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಸ್ಥಳೀಯ ಶಾಸಕರ ಕರ್ತವ್ಯ ಚ್ಯುತಿಯ ಕುರಿತು ಸಚಿವ ನಿತಿನ್ ಗಡ್ಕರಿಗೆ ವಿವರವಾದ ಪತ್ರ ಬರೆಯಲು  ಹೋರಾಟ ಸಮಿತಿ ನಿರ್ಧರಿಸಿತು.

ಟೋಲ್ ಗುತ್ತಿಗೆ ನವೀಕರಣ ಪ್ರಕ್ರಿಯೆ ಕೈ ಬಿಟ್ಟು, ಟೋಲ್ ಗೇಟ್ ತೆರವಿಗೆ ತಕ್ಷಣ ಕ್ರಮಗಳನ್ನು ಜನಪ್ರತಿನಿಧಿ ಗಳು ಕೈಗೊಳ್ಳದಿದ್ದಲ್ಲಿ ಜುಲೈ ಕೊನೆಯ ವಾರ ಸುರತ್ಕಲ್  ಟೋಲ್ ಗೇಟ್ ಗೆ ಮುತ್ತಿಗೆ ಹಾಕಲಾಗುವುದು ಎಂದು ಸಮಿತಿ ಸಭೆ ಇದೇ ವೇಳೆ ತೀರ್ಮಾನಿಸಿತು‌.

ಸಭೆಯ ಅಧ್ಯಕ್ಷತೆಯನ್ನು ವಸಂತ ಬೆರ್ನಾಡ್ ವಹಿಸಿದ್ದರು. ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ವಿವಿಧ ಸಂಘಟನೆಗಳ ಪ್ರಮುಖರಾದ ವೈ. ರಾಘವೇಂದ್ರ ರಾವ್, ಮೂಸಬ್ಬ ಪಕ್ಷಿಕೆರೆ, ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ, ಪ್ರತಿಭಾ ಕುಳಾಯಿ, ಹರೀಶ್ ಪೇಜಾವರ, ಯೋಗೀಶ್ ಕೋಟ್ಯಾನ್ ಮುಲ್ಕಿ, ರಾಜೇಶ್ ಪೂಜಾರಿ ಕುಳಾಯಿ, ಟಿ.ಎನ್. ಮೇಶ್ ಸುರತ್ಕಲ್, ಸಲೀಂ ಶ್ಯಾಡೋ, ರಮೀಝ್ ಪಡುಬಿದ್ರೆ, ಶ್ರೀಕಾಂತ್ ಸಾಲ್ಯಾನ್, ಶ್ರೀನಾಥ್ ಕುಲಾಲ್, ರಶೀದ್ ಮುಕ್ಕ ಮತ್ತಿತರರು ಉಪಸ್ಥಿತರಿದ್ದರು‌.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X