Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಂಚನೆಯಿಂದ ಭೂ ಕಬಳಿಕೆ ಆರೋಪ; ಬೆಳ್ತಂಗಡಿ...

ವಂಚನೆಯಿಂದ ಭೂ ಕಬಳಿಕೆ ಆರೋಪ; ಬೆಳ್ತಂಗಡಿ ತಹಶೀಲ್ದಾರ್, ನೋಂದಣಾಧಿಕಾರಿ, ವಕೀಲ ಸಹಿತ 7 ಮಂದಿಯ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ6 July 2022 11:32 PM IST
share
ವಂಚನೆಯಿಂದ ಭೂ ಕಬಳಿಕೆ ಆರೋಪ; ಬೆಳ್ತಂಗಡಿ ತಹಶೀಲ್ದಾರ್, ನೋಂದಣಾಧಿಕಾರಿ, ವಕೀಲ ಸಹಿತ 7 ಮಂದಿಯ ವಿರುದ್ಧ ಪ್ರಕರಣ ದಾಖಲು

ಉಪ್ಪಿನಂಗಡಿ: ವಂಚನೆ ಮಾಡಿ ಭೂ ಕಬಳಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ತಹಶೀಲ್ದಾರ್, ನೋಂದಾಣಾಧಿಕಾರಿ, ವಕೀಲರೋರ್ವರು ಸಹಿತ ಒಟ್ಟು ಏಳು ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರಾಯ ಗ್ರಾಮದ ಕೆರೆಕೋಡಿ ನಿವಾಸಿ ನಾರಾಯಣ ನಾಯ್ಕ ಎಂಬವರ ಪತ್ನಿ ವಾರಿಜಾ ಎಂಬವರು ಈ ದೂರು ನೀಡಿದ್ದು, ವಕೀಲರಾದ ಸುಬ್ರಹ್ಮಣ್ಯ ಕುಮಾರ್ ಅಗರ್ತ, ಬೆಳ್ತಂಗಡಿ ತಹಶೀಲ್ದಾರ್, ಕರಾಯ ಧನಲಕ್ಷ್ಮೀ ನಿಲಯದ ಗಿರೀಶ, ಸುರೇಶ, ಶೇಖರ ಹಾಗೂ ತಣ್ಣೀರುಪಂಥ ಗ್ರಾಮದ ಅಳಕೆಯ ನಝೀರ್ ಮತ್ತು ಬೆಳ್ತಂಗಡಿಯ ನೋಂದಣಾಧಿಕಾರಿ ನಾಗರಾಜ್ ಎಂಬವರು ತನಗೆ ವಂಚನೆ ನಡೆಸಿ, ತನ್ನ ಭೂಮಿಯನ್ನು ಕಬಳಿಸಿದ್ದಾರೆ ಎಂದು ದೂರು ನೀಡಿದ್ದಾರೆ.‌

ತನಗೆ ಎಲ್‍ಆರ್‍ವೈ 9/74-75ರಂತೆ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಸರ್ವೆ ನಂ.: 13/4ರಲ್ಲಿ 1.01 ಎಕ್ರೆ, ಸ.ನಂ.: 13/3ರಲ್ಲಿ 1.56 ಎಕ್ರೆ, ಸ.ನಂ. 11/4ರಲ್ಲಿ 0.37 ಎಕ್ರೆ, ಸ.ನಂ.: 11/2ರಲ್ಲಿ 0.34 ಎಕ್ರೆ, ಸ.ನಂ.: 13/5ರಲ್ಲಿ 0.20 ಎಕರೆ ಜಮೀನು ಮಂಜೂರಾಗಿದ್ದು, ತನ್ನ ತಂದೆ ಹಾಗೂ ತಾಯಿ ಮೃತಪಟ್ಟ ಬಳಿಕ ತಂದೆಗೆ ಮಂಜೂರಾದ ಜಮೀನನ್ನು ವಿಭಜನೆ ಮಾಡಿಕೊಡಬೇಕೆಂದು ತಾನು ಬೆಳ್ತಂಗಡಿ ಸಿವಿಲ್ ನ್ಯಾಯಾಲಯದಲ್ಲಿ ಮೂಲದಾವೆ ನಂ: 156/2016ರಂತೆ ದಾವೆ ಹೂಡಿ ಮಧ್ಯಂತರ ನಿರ್ಭಂಧಾಜ್ಞೆಯನ್ನು ನ್ಯಾಯಾಲಯದ ಮೂಲಕ ಪಡೆದಿರುತ್ತೇನೆ. ಇಲ್ಲಿ ಒಂದನೇ ಆರೋಪಿಯಾದ ಸುಬ್ರಹ್ಮಣ್ಯ ಕುಮಾರ್ ಅಗರ್ತ ಅವರು ಮೂರನೇ ಆರೋಪಿಯಾಗಿರುವ ಸುರೇಶ್ ಅವರ ಪಹಣಿಯು ವ್ಯತ್ಯಾಸವಾಗಿದೆ ಎಂಬುದಾಗಿ ನಂಬಿಸಿ, ಬೆಳ್ತಂಗಡಿ ನೋಂದಣಿ ಕಚೇರಿಯಲ್ಲಿ ಆರನೇ ಆರೋಪಿಯಾದ ನಝೀರ್ ಅವರ ಹೆಸರಿಗೆ ನೋಂದಣಿ ಮಾಡಿಸಿದ್ದಾರೆ. ಆರೋಪಿಗಳಾದ ಸುರೇಶ್, ಗಿರೀಶ್ ಹಾಗೂ ಶೇಖರ ಎಂಬವರು ಜಮೀನು ಖರೀದಿಸುವ ನಾಟಕ ಮಾಡಿದ್ದು, ಇದಕ್ಕೆ ಒಂದನೇ ಆರೋಪಿಯು ಪ್ರಮುಖ ಪಾತ್ರಧಾರಿಯಾಗಿರುತ್ತಾರೆ. ಎರಡನೇ ಆರೋಪಿಯಾದ ತಹಶೀಲ್ದಾರ್ ಅವರು ಎಲ್‍ಆರ್‍ವೈ 9/74-75ಯನ್ನು ಪಹಣಿಯಲ್ಲಿ ತಿರುಚಿ ಎಲ್‍ಆರ್‍ವೈ 12/74-75ರಂತೆ ಸುಳ್ಳು ದಾಖಲೆ ಮಾಡಿಕೊಟ್ಟು ಸಹಕರಿಸಿದ್ದಾರೆ. ಈ ಎಲ್ಲಾ ದಾಖಲೆಗಳನ್ನು ಪರಿಶೀಲಿಸದೇ ನೋಂದಣಾಧಿಕಾರಿಯಾಗಿರುವ ನಾಗರಾಜ್ ಅವರು ಇವರಿಗೆ ಜಾಗವನ್ನು ನೋಂದಣಿ ಮಾಡಿ ಸಹಕರಿಸಿದ್ದಾರೆ ಎಂದು ವಾರಿಜಾ ಎಂಬವರು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಜು.2ರಂದು ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X