ಕಾಪು: ಬುಲೆಟ್ ಟ್ಯಾಂಕರ್ ನಿಂದ ಅನಿಲ ಸೋರಿಕೆ

ಕಾಪು: ಬಿಕೋ ಜಾಯ್ ಕಂಪನಿ ಎದುರು ಬುಲೆಟ್ ಟ್ಯಾಂಕರ್ ನಿಂದ ಅನಿಲ ಸೋರಿಕೆಯಾದ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ಕಾಪುವಿನ ಬಿಕೋ ಜಾಯ್ ಕಂಪನಿ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಪಂಜಾಬ್ ಕಾರ್ಬೋನಿಕ್ ಸಂಸ್ಥೆಗೆ ಸೇರಿದ, ಮಹಾರಾಷ್ಟ್ರದಿಂದ ಮಂಗಳೂರಿಗೆ ಕಾರ್ಬನ್ ಡೈಆಕ್ಸೈಡ್ ಅನಿಲ ಸಾಗಿಸುತ್ತಿದ್ದ ಬುಲೆಟ್ ಟ್ಯಾಂಕರ್ ನಲ್ಲಿ ಅನಿಲ ಸೋರಿಕೆಯಾದ ಬಗ್ಗೆ ಮಾಹಿತಿ ತಿಳಿದ ಕಾಪು ಠಾಣಾಧಿಕಾರಿ ಶ್ರೀಶೈಲ ಮುರುಗೋಡ ಅವರು ಸ್ಥಳಕ್ಕೆ ಧಾವಿಸಿದ್ದು, ಉಡುಪಿಯಿಂದ ಅಗ್ನಿಶಾಮಕ ದಳ ಕರೆಸಿ ತಪಾಸಣೆ ನಡೆಸಿದ್ದಾರೆ.
ಟ್ಯಾಂಕರಿನ ಮುಚ್ಚಳದಲ್ಲಿ ಸೋರಿಕೆ ಉಂಟಾಗಿದ್ದು, ಇದನ್ನು ಸರಿಪಡಿಸಿ ಮಂಗಳೂರಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Next Story