Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಚರಂಡಿಗಳಲ್ಲಿ ಮಳೆ ನೀರು ಹರಿವಿಗೆ...

ಚರಂಡಿಗಳಲ್ಲಿ ಮಳೆ ನೀರು ಹರಿವಿಗೆ ತಡೆಯೊಡ್ಡಿದ್ದರೆ ಕ್ರಮಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ8 July 2022 9:56 PM IST
share
ಚರಂಡಿಗಳಲ್ಲಿ ಮಳೆ ನೀರು ಹರಿವಿಗೆ ತಡೆಯೊಡ್ಡಿದ್ದರೆ ಕ್ರಮಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆ

ಮಂಗಳೂರು: ರಸ್ತೆಯ ಮೇಲೆ ಬಿದ್ದ ಮಳೆಯ ನೀರು ಬದಿಯ ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗಬೇಕು, ಈ ಪ್ರಕ್ರಿಯೆಗೆ ತಡೆಗಳನ್ನು ಒಡ್ಡಿದ್ದರೆ ನಿರ್ದಾಕ್ಷಿಣ್ಯವಾಗಿ ಅವುಗಳನ್ನು ತೆರವು ಮಾಡಬೇಕು. ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆ ನೀಡಿದರು.

ದ.ಕ.ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರದಲ್ಲಿ ಮಳೆ ನೀರು ಹರಿದು ಹೋಗದಂತೆ ಎಲ್ಲೆಲ್ಲಿ ಚರಂಡಿಗಳಿಗೆ ತಡೆಗಳನ್ನು ಒಡ್ಡಲಾಗಿದೆಯೋ ಅಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಕೂಡಲೇ ತೆರವುಗೊಳಿಸಬೇಕು. ಮಳೆಗಾಲದಲ್ಲಿ ವಿದ್ಯುತ್ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸಬೇಕು. ಯಾವುದೇ ಸಮಸ್ಯೆಗಳು ಕಂಡುಬಂದರೆ ಕೂಡಲೇ ಅವುಗಳನ್ನು ನಿಭಾಯಿಸಲು ಅನುಕೂಲವಾಗುವಂತೆ ಸಿಬ್ಬಂದಿಯ ದೂರವಾಣಿ, ಮೊಬೈಲ್ ಸಂಖ್ಯೆಗಳನ್ನು ಸಾರ್ವಜನಿಕರ ಗಮನ ಸೆಳೆಯಲು ಕ್ರಮ ಕೈಗೊಳ್ಳಬೇಕು ಎಂದರು.

ಪ್ರಾಕೃತಿಕ ಸಹಿತ ಯಾವುದೇ ರೀತಿಯ ಅವಘಡಗಳು ಜಿಲ್ಲೆಯಲ್ಲಿ ಸಂಭವಿಸಿದರೆ ಕೂಡಲೇ ಅಲ್ಲಿಗೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿ, ಸೂಕ್ತ ಮಾರ್ಗದರ್ಶನ ಹಾಗೂ ಚಿಕಿತ್ಸೆಗೆ ವೈದ್ಯರ ತಂಡವನ್ನು ಎಲ್ಲಾ ತಾಲೂಕುಗಳಲ್ಲಿಯೂ ಸನ್ನದ್ಧ ಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್ ಕುಮಾರ್‌ಗೆ ಸೂಚಿಸಿದರು.

ನಗರದಲ್ಲಿ ಮಳೆ ಹಾಗೂ ಪ್ರವಾಹ ಸ್ಥಿತಿಯನ್ನು ಸೂಕ್ತವಾಗಿ ನಿರ್ವಹಣೆ ಮಾಡಲು ನಿಯೋಜಿಸಲಾಗಿರುವ ಮೂವರು ಇಂಜಿನಿಯರುಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಮಳೆಗಾಲವಾದ ಕಾರಣ ಯಾವುದೇ ರಸ್ತೆಗಳನ್ನು ತುಂಡರಿಸಬಾರದು ಎಂದರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿ, ಜಿಲ್ಲಾಧಿಕಾರಿಯ ಪಿಡಿ ಖಾತೆಯಲ್ಲಿ 15 ಕೋ. ರೂ. ಅನುದಾನವಿದೆ. ಪ್ರತಿ ತಾಲೂಕಿನ ತಹಶೀಲ್ದಾರರ ಖಾತೆಯಲ್ಲಿ 45 ಲಕ್ಷ ರೂ.ಇದ್ದು, ಮಳೆ, ನೆರೆಯಿಂದಾಗಿ ಮನೆ ಹಾನೀಗೀಡಾದಲ್ಲಿ ಕೂಡಲೇ ಚೆಕ್ ಮೂಲಕ ಪರಿಹಾರ ನೀಡುವಂತೆ ಸೂಚಿಸಲಾಗಿದೆ. ಪ್ರತಿಯೊಂದು ಗ್ರಾಪಂನಲ್ಲಿ ಟಾಸ್ಕ್ ಪೋರ್ಸ್ ಸಮಿತಿ ರಚಿಸಲಾಗಿದೆ. ವಿಪರೀತ ಮಳೆಯಿಂದಾಗಿ ಶಾಲಾ ಮಕ್ಕಳಿಗೆ ರಜೆ ನೀಡುವ ಬಗ್ಗೆ ಆಯಾ ಗ್ರಾಮ ವ್ಯಾಪ್ತಿಯಲ್ಲಿ ನಿರ್ಧರಿಸಿ ರಜೆ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದರು.

ಎಸ್‌ಡಿಆರ್‌ಎಫ್‌ನಲ್ಲಿ ೬೭, ಎನ್‌ಡಿಆರ್‌ಎಫ್‌ನಲ್ಲಿ ೨೦ ಸಿಬ್ಬಂದಿಗಳಿದ್ದು, ಪ್ರಾಕೃತಿಕ ಅವಘಡಗಳ ಸಂದರ್ಭದಲ್ಲಿ ನೆರವು ನೀಡುತ್ತಿದ್ದಾರೆ. ಲೋಕೋಪಯೋಗಿ, ಸಣ್ಣ ನೀರಾವರಿ ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರುಗಳು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿ ಅವಲೋಕಿಸಬೇಕು ಎಂದು ಡಿಸಿ ಸೂಚನೆ ನೀಡಿದರು.

ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಪಂ ಸಿಇಒ ಡಾ.ಕುಮಾರ್, ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆಯ ಪ್ರಭಾರ ಆಯುಕ್ತ ಪ್ರಶಾಂತ್ ಮಿಶ್ರಾ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X