Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನವೋದ್ಯಮಗಳಿಗೆ ಸುಗಮ ಸಾಲ: ಎಸ್‍ಬಿಐ ಜೊತೆ...

ನವೋದ್ಯಮಗಳಿಗೆ ಸುಗಮ ಸಾಲ: ಎಸ್‍ಬಿಐ ಜೊತೆ ಕೆ-ಡಿಇಎಂ ಒಡಂಬಡಿಕೆ

ವಾರ್ತಾಭಾರತಿವಾರ್ತಾಭಾರತಿ8 July 2022 11:33 PM IST
share
ನವೋದ್ಯಮಗಳಿಗೆ ಸುಗಮ ಸಾಲ: ಎಸ್‍ಬಿಐ ಜೊತೆ ಕೆ-ಡಿಇಎಂ ಒಡಂಬಡಿಕೆ

ಬೆಂಗಳೂರು, ಜು.8: ನವೋದ್ಯಮಗಳಿಗೆ ಅಗತ್ಯವಾಗಿರುವ ಸಾಲಸೌಲಭ್ಯವನ್ನು ಸುಲಭವಾಗಿ ಒದಗಿಸುವ ಉದ್ದೇಶದಿಂದ ಪ್ರತ್ಯೇಕವಾದಂತಹ ಬ್ಯಾಂಕ್ ಶಾಖೆಯನ್ನು ಎಸ್‍ಬಿಐ ಆರಂಭಿಸುತ್ತಿದ್ದು, ಈ ಸಂಬಂಧ ಬ್ಯಾಂಕ್‍ನ ಅಧಿಕಾರಿಗಳು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆ-ಡಿಇಎಂ) ಜತೆ ಶುಕ್ರವಾರ ಒಡಂಬಡಿಕೆಗೆ ಸಹಿ ಹಾಕಿದರು.

ನಗರದಲ್ಲಿ ಇದರ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಐಟಿ-ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಉಪಸ್ಥಿತಿಯಲ್ಲಿ ಕೆಡಿಇಎಂ ಪರವಾಗಿ ಅದರ ಸಿಇಒ ಸಂಜೀವ್ ಗುಪ್ತ ಮತ್ತು ಎಸ್‍ಬಿಐ ಪ್ರಧಾನ ವ್ಯವಸ್ಥಾಪಕ ಎಸ್.ರಾಧಾಕೃಷ್ಣನ್ ಅಂಕಿತ ಹಾಕಿ, ಒಪ್ಪಂದ ಪತ್ರವನ್ನು ಪರಸ್ಪರ ವಿನಿಮಯ ಮಾಡಿಕೊಂಡರು. 

ಬೆಂಗಳೂರಿನ ಕೋರಮಂಗಲದಲ್ಲಿ ಎಸ್‍ಬಿಐ, ನವೋದ್ಯಮಿಗಳ ಸಲುವಾಗಿ ಪ್ರತ್ಯೇಕ ಶಾಖೆ ತೆರೆಯುತ್ತಿದ್ದು, ಇದನ್ನು ಆಗಸ್ಟ್ ತಿಂಗಳಲ್ಲಿ ಆರಂಭಿಸಲಾಗುವುದು ಎಂದು *ಅಶ್ವತ್ಥನಾರಾಯಣ ಹೇಳಿದರು*.

ಕೇಂದ್ರ ಸರಕಾರವು ಸೂಕ್ಷ್ಮ ಮತ್ತು ಸಣ್ಣ ಉದ್ದಿಮೆಗಳಿಗೆ ಸಾಲ ಸೌಲಭ್ಯವನ್ನು ಖಾತ್ರಿಪಡಿಸಲು ರೂಪಿಸಿರುವ ಸಿಜಿಟಿಎಸ್‍ಎಂಇ ಯೋಜನೆಯಡಿ ಒಂದು ಸಂಸ್ಥೆಗೆ ತಲಾ 2 ಕೋಟಿ ರೂ.ವರೆಗೂ ಸಾಲ ಸಿಗುತ್ತಿದೆ. ಇದನ್ನು ಬಳಸಿಕೊಂಡು, ರಾಜ್ಯದಲ್ಲಿ ನವೋದ್ಯಮಗಳಿಗೆ ಈ ನೆರವು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಒಟ್ಟು 13 ಸಾವಿರ ನವೋದ್ಯಮಗಳಿವೆ. ಇವುಗಳಲ್ಲಿ ಕೆಲವು ಸಂಸ್ಥೆಗಳಿಗೆ ಹಣಕಾಸು ನಿಧಿಯ ಕೊರತೆ ಉಂಟಾಗುತ್ತದೆ. ಇದನ್ನು ಪರಿಹರಿಸಿ, ಸುಗಮ ಸಾಲ ಸಿಗುವಂತೆ ಮಾಡಲು ಈ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಎಸ್‍ಬಿಐ ಮುಂದಿನ ಆರು ತಿಂಗಳಲ್ಲಿ ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡ ಕ್ಲಸ್ಟರ್‍ಗಳಲ್ಲಿ ಕೆಡಿಇಎಂ ಜತೆಗೂಡಿ ಇಂಥದೇ ಶಾಖೆಗಳನ್ನು ತೆರೆಯಲಿದೆ ಎಂದು ಅವರು ತಿಳಿಸಿದರು.

ರಾಜ್ಯ ಸರಕಾರದ `ಎಲಿವೇಟ್' ಉಪಕ್ರಮದಡಿ ವಿಜೇತವಾಗಿರುವ 750 ಸ್ಟಾರ್ಟ್ ಅಪ್ ಕಂಪನಿಗಳು ಈಗಾಗಲೇ ನಮ್ಮಲ್ಲಿವೆ. ಈ ಒಪ್ಪಂದದಿಂದಾಗಿ ಇವುಗಳ ಜತೆಗೆ ಇನ್ನೂ 250ಕ್ಕೂ ಹೆಚ್ಚು (ಒಟ್ಟು 1,000ಕ್ಕೂ ಅಧಿಕ) ನವೋದ್ಯಮಗಳಿಗೆ ಯಾವುದೇ ಅಡೆತಡೆ ಇಲ್ಲದೆ ಸಾಲ ಸಿಗಲಿದೆ. ಇದರಿಂದ ಉದ್ಯಮಶೀಲತೆಯ ಬೆಳವಣಿಗೆ ನಿರಾತಂಕವಾಗಿ ಸಾಗಲಿದೆ. ಈ ಮೂಲಕ ಎಸ್‍ಬಿಐ, ಮಂಗಳೂರಿನಲ್ಲಿ ಕೇಂದ್ರಸ್ಥಾನ ಹೊಂದಿರುವ ಫಿನ್‍ಟೆಕ್ ಇನ್ನೋವೇಷನ್ ಹಬ್‍ನಲ್ಲಿ ಸಹಭಾಗಿತ್ವ ಹೊಂದಲಿದೆ ಎಂದು ಅವರು ನುಡಿದರು.

ರಾಜ್ಯದಲ್ಲಿರುವ ಸ್ಟಾರ್ಟ್ ಅಪ್ ಕಾರ್ಯ ಪರಿಸರವು ಸಮರ್ಥವಾಗಿ ಮುಂದುವರಿಯಲು ಸಾರ್ವಜನಿಕ ವಲಯದ ಎಸ್‍ಬಿಐ ಸರಕಾರದೊಂದಿಗೆ ಕೈಜೋಡಿಸಿರುವುದು ಸ್ವಾಗತಾರ್ಹವಾಗಿದೆ. ಇದರಿಂದಾಗಿ ಕರ್ನಾಟಕವು ದೇಶದ ಫಿನ್-ಟೆಕ್ ತೊಟ್ಟಿಲಾಗಿ ಬೆಳೆಯಲಿದೆ. ಜತೆಗೆ, ವಿಶ್ವದ ಅಗ್ರಪಂಕ್ತಿಯ ಐದು ನವೋದ್ಯಮ ಕಾರ್ಯ ಪರಿಸರದ ನಗರಗಳಲ್ಲಿ ಒಂದಾಗಿ ಹೊರಹೊಮ್ಮಲಿದೆ ಎಂದು ಅಶ್ವತ್ಥ ನಾರಾಯಣ ಭರವಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್‍ಬಿಐ ಉಪಪ್ರಧಾನ ವ್ಯವಸ್ಥಾಪಕ ರಾಣಾ ಆಶುತೋಷ್ ಕುಮಾರ್ ಸಿಂಗ್, `ಕರ್ನಾಟಕ ಸರಕಾರದ ರಚನಾತ್ಮಕ ಉಪಕ್ರಮಗಳಿಂದಾಗಿ ಎಸ್‍ಬಿಐ ದೇಶದ ಪ್ರಪ್ರಥಮ ಕ್ಲಸ್ಟರ್ ಸೀಡ್ ಫಂಡ್ ವ್ಯವಸ್ಥೆಯನ್ನು ಆರಂಭಿಸಲು ಸಾಧ್ಯವಾಗಿದೆ. ಉಳಿದ ರಾಜ್ಯಗಳೂ ಹೀಗೆಯೇ ಮುಂದಡಿ ಇಟ್ಟರೆ, ಈ ಸೌಲಭ್ಯವನ್ನು ಉಳಿದೆಡೆಗಳಲ್ಲೂ ಆರಂಭಿಸಬಹುದು' ಎಂದರು.

ಸಮಾರಂಭದಲ್ಲಿ ಕೆಡಿಇಎಂ ಅಧ್ಯಕ್ಷ ಬಿ.ವಿ.ನಾಯ್ಡು, ಸಿಇಒ ಸಂಜೀವ್ ಗುಪ್ತ, ಎಸ್‍ಬಿಐ ಬೆಂಗಳೂರು ವೃತ್ತದ ಪ್ರಧಾನ ವ್ಯವಸ್ಥಾಪಕ ನಂದಕಿಶೋರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X