ಕುಂದಾಪುರ | ಚಿತ್ತೂರಿನಲ್ಲಿ ಗುಡ್ಡ ಕುಸಿತ: ಅಪಾಯದಲ್ಲಿ ಮನೆಗಳು

ಕುಂದಾಪುರ, ಜು.9: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಂದಾಪುರ ತಾಲೂಕಿನ ವಂಡ್ಸೆ ಹೋಬಳಿಯ ಚಿತ್ತೂರು ಗ್ರಾಮದಲ್ಲಿ ಗುಡ್ಡ ಕುಸಿದಿರುವ ಬಗ್ಗೆ ವರದಿಯಾಗಿದೆ
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡ ಕುಸಿದಿದ್ದು ಇದರ ಸಮೀಪದಲ್ಲಿರುವ ಮನೆಗಳು ಅಪಾಯದ ಸ್ಥಿತಿಯಲ್ಲಿದೆ ಎಂದು ತಿಳಿದುಬಂದಿದೆ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story