ಅಮರನಾಥ ಯಾತ್ರೆ | ಚಿಕ್ಕಮಗಳೂರು ಜಿಲ್ಲೆಯಿಂದ ತೆರಳಿರುವ 60 ಯಾತ್ರಿಕರು ಸುರಕ್ಷಿತ

ಚಿಕ್ಕಮಗಳೂರು, ಜು.9: ದಕ್ಷಿಣ ಕಾಶ್ಮೀರದ ಹಿಮಾಲಯದ ತಪ್ಪಲಿನ ಪ್ರಸಿದ್ಧ ಯಾತ್ರಾಸ್ಥಳ ಅಮರನಾಥಕ್ಕೆ ಚಿಕ್ಕಮಗಳೂರು ಜಿಲ್ಲೆಯಿಂದ ತೆರಳಿರುವ 60 ಯಾತ್ರಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.
60 ಮಂದಿಯನ್ನು ಸೇನಾ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಸದ್ಯ 58 ಜನ ಮಂದಿ ಬಲ್ಸಾಲ್ ಬಂಕರ್ ನಲ್ಲಿ ವಾಸ್ತವ್ಯವಿದ್ದಾರೆ. ಇಬ್ಬರು ಜಮ್ಮುವಿಗೆ ಸುರಕ್ಷಿತವಾಗಿ ವಾಪಸ್ಸಾಗಿದ್ದಾರೆ ಎಂದು ಹೇಳಲಾಗಿದೆ.
ಯಾತ್ರಾಸ್ಥಳ ಅಮರನಾಥದಲ್ಲಿ ಮೇಘ ಸ್ಫೋಟವಾಗಿದ್ದು, ಕನಿಷ್ಠ 22 ಮಂದಿ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಈ ಘಟನೆಯಲ್ಲಿ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸುಮಾರು 15 ಸಾವಿರ ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (ಎನ್‌ಡಿಆರ್‌ಎಫ್) ಅಧಿಕಾರಿಗಳು ಹೇಳಿದ್ದಾರೆ.
Next Story




.jpeg)
.jpeg)

