ಜು.24ರಂದು ದ.ಕ. ಜಿಲ್ಲಾ 9ನೇ ಚುಟುಕು ಸಾಹಿತ್ಯ ಸಮ್ಮೇಳನ
ಮಂಗಳೂರು, ಜು.9: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಸಹಯೋಗದೊಂದಿಗೆ ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ಪಕ್ಷಿಕೆರೆಯ ಶ್ರೀ ವಿನಾಯಕ ಮಿತ್ರ ಮಂಡಳಿಯ ಸಹಕಾರದೊಂದಿಗೆ 9ನೇ ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ-ಕಲಾ ವೈವಿದ್ಯ ಮತ್ತು ವಿದ್ಯಾರ್ಥಿ ಸಮ್ಮಾನ ಕಾರ್ಯಕ್ರಮ ಜು.24ರಂದು ಬೆಳಗ್ಗೆ 9:30ರಿಂದ ಉರ್ವಸ್ಟೋರ್‌ನ ತುಳು ಭವನದಲ್ಲಿ ನಡೆಯಲಿದೆ.
ನಗರದ ಪತ್ರಿಕಾಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚುಸಾಪ ದ.ಕ. ಜಿಲ್ಲಾಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು, ರಾಜ್ಯ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅದ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಕಾರ್ಯಕ್ರಮ ಉದ್ಘಾಟಿಸುವರು. ಸಮ್ಮೇಳನವು ಹಿರಿಯ ಸಾಹಿತಿ ಶ್ರೀಕೃಷ್ಣಯ್ಯ ಅನಂತಪುರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಶಾಸಕ ಡಿ. ವೇದವ್ಯಾಸ ಕಾಮತ್ ನೂರು ವಿದ್ಯಾರ್ಥಿಗಳಿಗೆ ಸನ್ಮಾನ ನೆರವೇರಿಸಲಿದ್ದಾರೆ. ಡಾ ವೈ. ಭರತ್ ಶೆಟ್ಟಿ ‘ಮಂಜರಿ’ ಕೃತಿ ಲೋಕಾರ್ಪಣೆ ಮಾಡುವರು. ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್ ಲಾಂಛನ ಬಿಡುಗಡೆ ಮಾಡಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಡಾ.ಸುರೇಶ್ ನೆಗಳಗುಳಿ, ರಮೇಶ್ ರೈ ಕುಕ್ಕುವಳ್ಳಿ, ಆರಿಫ್ ಪಡುಬಿದ್ರಿ, ಸದಾನಂದ ನಾರಾವಿ, ಸುಂದರ್ ರೈ ಮಂದಾರ, ಪ್ರೊ.ಹೈದರಲಿ, ಡಾ.ಮೀನಾಕ್ಷಿ ರಾಮಚಂದ್ರ, ಗೋಪಿ ಹಿರೇಬೆಟ್ಟಿ, ಶಾಂತಪ್ಪ ಬಾಬು ಅವರಿಗೆ ಸಮ್ಮಾನ ನಡೆಯಲಿದೆ.
ಈ ವೇಳೆ ಡಾ.ಹರಿಕೃಷ್ಣ ಪುನರೂರು, ರಾಜೇಂದ್ರ ದೋಟ ಅವರಿಗೆ ಗೌರವ ಸಮ್ಮಾನ ನಡೆಯಲಿದೆ.
ಅಪರಾಹ್ನ 2 ಗಂಟೆಗೆ ಬಹುಭಾಷಾ ಕವಿಗೋಷ್ಠಿ, 3ರಿಂದ ವಿಶೇಷ ಹರಿಕಥಾ ಶೈಲಿಯ ಜಾದೂ, ನ್ಯಾಟಂಜಲಿ, ಹಾಸ್ಯ ರಂಜನೆ ನಡೆಯಲಿದೆ. ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಶ್ರೀಕೃಷ್ಣಯ್ಯ ಅನಂತಪುರ ಅಧ್ಯಕ್ಷತೆ ವಹಿಸಲಿದ್ದು, ಸಚಿವ ಸುನೀಲ್ ಕುಮಾರ್, ದಯಾನಂದ ಕತ್ತಲ್‌ಸಾರ್, ವಿಜಯ ಕುಮಾರ್ ಕೊಡಿಯಾಲ್‌ಬೈಲ್ ಸಾಧಕರಿಗೆ ಸನ್ಮಾನ ನೆರವೇರಿಸಲಿದ್ದಾರೆ. ವಿವಿಧ ಗಣ್ಯರು ಭಾಗವಹಿಸುವರು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಇರಾ ನೇಮು ಪೂಜಾರಿ, ಕಾ.ವೀ. ಕೃಷ್ಣದಾಸ್, ರೇಮಂಡ್ ಡಿಕುನ್ಹ ಉಪಸ್ಥಿತರಿದ್ದರು.







