ಮುಂದುವರಿದ ಮಳೆ; ಕೊಡಗು ಜಿಲ್ಲೆಯಾದ್ಯಂತ ಘನ ವಾಹನ ಸಂಚಾರ ನಿಷೇಧ

ಮಡಿಕೇರಿ ಜು.9 : ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದ್ದು, ಘನ ವಾಹನಗಳ ಸಂಚಾರವನ್ನು ಅಕ್ಟೋಬರ್ 15 ರವರೆಗೂ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಶನಿವಾರ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಮಳೆಗಾಲ ಆರಂಭವಾಗಿದೆ. ಮುಂದಿನ ಮುಂಗಾರು ಮಳೆಗಾಲದ ದಿನಗಳಲ್ಲಿ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣೆ ಮತ್ತು ಇತರೆ ಸರಕು ಸಾಗಾಣಿಕೆಯನ್ನು ಕೊಡಗು ಜಿಲ್ಲೆಯಾದ್ಯಂತ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಬಂಧಿಸುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ತಿಳಿಸಿದರು.

Next Story





