ಬೆಂಗಳೂರು | ಐಎಎಸ್ ಅಧಿಕಾರಿಗೆ ಬೆದರಿಕೆ: ಆರೋಪಿ ಕಾರು ಚಾಲಕನ ಬಂಧನ

ಸಾಂದರ್ಭಿಕ ಚಿತ್ರ
ಬೆಂಗಳೂರು, ಜು.9: ಐಎಎಸ್ ಅಧಿಕಾರಿ ಮನೀಷ್ ಮೌದ್ಗಿಲ್ಗೆ ಕರೆ ಮಾಡಿ ಬೆದರಿಕೆವೊಡ್ಡಿದ ಆರೋಪ ಪ್ರಕರಣ ಸಂಬಂಧ ಓರ್ವನನ್ನು ಇಲ್ಲಿನ ಸಂಪಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಗೋವಿಂದರಾಜು ಬಂಧಿತ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ.
ಇತ್ತೀಚಿಗೆ ಆಡಳಿತಾತ್ಮಕ ಕಾರಣಗಳಿಗಾಗಿ ತಮ್ಮ ಕಾರು ಚಾಲಕ ಆನಂದ್ ಎಂಬುವರನ್ನು ಕೋಲಾರಕ್ಕೆ ವರ್ಗಾವಣೆ ಮಾಡಿದ್ದರು. ವರ್ಗಾವಣೆ ಮಾಡಿದ ದಿನವೇ ಆರೋಪಿ ಗೋವಿಂದರಾಜು ತಾನೂ ಅಬಕಾರಿ ಸಚಿವ ಗೋಪಾಲಯ್ಯ ಅವರ ಆಪ್ತ ಸಹಾಯಕ ಎಂದು ಹೇಳಿಕೊಂಡು ವರ್ಗಾವಣೆ ಪ್ರಶ್ನಿಸಿ ಕರೆ ಮಾಡಿದ್ದ ಎನ್ನಲಾಗಿದೆ.
ಅಷ್ಟೇ ಅಲ್ಲದೆ, ಆನಂದ್ ವರ್ಗಾವಣೆ ರದ್ದು ಮಾಡಿ ಎಂದು ಆರೋಪಿ ಮಾತಾಡಿದ್ದಾನೆ. ಈ ಸಂಬಂಧ ದಾಖಲಾದ ದೂರಿನನ್ವಯ ಕಾರ್ಯಾಚರಣೆ ನಡೆಸಿ ಪೊಲೀಸರು ಆರೋಪಿ ಗೋವಿಂದರಾಜುನನ್ನು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
Next Story





