ಬಕ್ರೀದ್ ಹಿನ್ನೆಲೆ; ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸರ ಪಥಸಂಚಲನ

ಮಂಗಳೂರು : ಬಕ್ರೀದ್ ಆಚರಣೆಯ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಸನ್ನದ್ಧತೆಯ ಮುನ್ಸೂಚನೆಯಾಗಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶನಿವಾರ ಪೊಲೀಸ್ ಪಥ ಸಂಚಲನ (ರೂಟ್ ಮಾರ್ಚ್) ನಡೆಸಲಾಯಿತು.
ಮಂಗಳೂರು ನಗರ, ಉಳ್ಳಾಲ, ಸುರತ್ಕಲ್, ಮೂಡುಬಿದಿರೆಯಲ್ಲಿ ಸುರಿಯುವ ಮಳೆಯನ್ನೂ ಲೆಕ್ಕಿಸದೆ ಪೊಲೀಸರು ಪಥ ಸಂಚಲನದ ಮೂಲಕ ಸಾರ್ವಜನಿಕರ ಗಮನ ಸೆಳೆದರು.
ಪ್ರತಿಯೊಂದು ಕಡೆಯೂ ಸರಿ ಸುಮಾರು 200ರಿಂದ 250 ಪೊಲೀಸರು, ಸಶಸ್ತ್ರ ಪೊಲೀಸ್ ಪಡೆ, ಗೃಹ ರಕ್ಷಕ ದಳದ ಸಿಬ್ಬಂದಿ, ಕೆಎಸ್ಸಾರ್ಪಿ ಸಿಬ್ಬಂದಿಯು ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.










