ಬಿಷಪ್‌ರಿಂದ ಡಾ. ವಿರೇಂದ್ರ ಹೆಗ್ಗಡೆಗೆ ಅಭಿನಂದನೆ

ಮಂಗಳೂರು : ರಾಜ್ಯ ಸಭಾ ಸದಸ್ಯರಾಗಿ ನಾಮ ನಿರ್ದೇಶನ ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ ಅಭಿನಂದಿಸಿದ್ದಾರೆ.
ಡಾ. ಹೆಗ್ಗಡೆ ಅವರು ದಕ್ಷಿಣಕನ್ನಡ ಮತ್ತು ಕರ್ನಾಟಕದಲ್ಲಿ ತಮ್ಮ ವಿಶಿಷ್ಟವಾದ ಸೇವೆಯ ಮೂಲಕ ಸರ್ವಜನರ ಮನ್ನಣೆಗೆ ಪಾತ್ರರಾಗಿದ್ದಾರೆ. ರಾಜ್ಯ ಸಭಾ ಸದಸ್ಯತ್ವದ ಮೂಲಕ ಅವರ ಸೇವಾ ವೈಖರಿ ದೇಶಾದ್ಯಂತ ಪಸರಿಸುವಂತಾಗಲಿ ಎಂದು ಆಶಿಸಿದ್ದಾರೆ.
ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಸಮಸ್ತ ಕ್ರೈಸ್ತರ ಪರವಾಗಿ ಅಭಿನಂದಿಸುವುದಾಗಿ ಬಿಷಪ್ ತಮ್ಮ ಶುಭ ಸಂದೇಶದಲ್ಲಿ ತಿಳಿಸಿದ್ದಾರೆ.
Next Story





