ಕೆಆರ್ ಎಸ್ ಜಲಾಯಶಯದಿಂದ ನೀರು ಬಿಡುಗಡೆ: ಸುರಕ್ಷಿತ ಸ್ಥಳಗಳಿಗೆ ತೆರಳಲು ನದಿ ಪಾತ್ರದ ಜನರಿಗೆ ಸೂಚನೆ

ಮಂಡ್ಯ, ಜು.9: ಕೆಆರ್ ಎಸ್ ಜಲಾಶಯ ಗರಿಷ್ಠ ಮಟ್ಟ ತಲುಪುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ಸುರಕ್ಷತೆಗಾಗಿ 10 ಸಾವಿರ ಕ್ಯುಸೆಕ್ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡಲಾಗಿದೆ.
ಜಲಾಶಯಕ್ಕೆ ನೀರಿನ ಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನದಿ ತೀರದಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸೂಚಿಸಿದ್ದಾರೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಮುಂದುವರಿದಿದ್ದು, ಜಲಾಶಯಕ್ಕೆ 35 ಸಾವಿರ ಕ್ಯುಸೆಕ ನೀರು ಹರಿದು ಬರುತ್ತಿದೆ. ಶನಿವಾರ ಮಧ್ಯಾಹ್ನದ ವೇಳೆಗೆ ನೀರಿನ ಮಟ್ಟ 122 ಅಡಿ ತಲುಪಿದೆ. ಗರಿಷ್ಠ ಮಟ್ಟ 124.80 ಅಡಿ.
Next Story





