ಶತಾಯುಷಿ ಐಸಮ್ಮ ಶೇಕಮಲೆ ನಿಧನ

ಪುತ್ತೂರು; ತಾಲೂಕಿನ ಅರಿಯಡ್ಕ ಗ್ರಾಮದ ಶೇಕಮಲೆ ನಿವಾಸಿ ಐಸಮ್ಮ (106) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ತನ್ನ ಸ್ವಗೃಹದಲ್ಲಿ ನಿಧನರಾದರು.
ಮೃತರು ಶೇಕಮಲೆ ತರವಾಡು ಕುಟುಂಬದ ಹಿರಿಯ ವ್ಯಕ್ತಿಯಾಗಿದ್ದರು. ಮತದಾನ ಪ್ರಾರಂಭವಾದ ದಿನದಿಂದ ಇತ್ತೀಚೆಗೆ ನಡೆದ ಸ್ಥಳೀಯ ಚುನಾವಣೆಗಳು ಸೇರಿದಂತೆ ಎಲ್ಲಾ ಚುನಾವಣೆಯಲ್ಲಿಯೂ ತಪ್ಪದೇ ಮತದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿ ಮಹಿಳೆಯಾಗಿ ಗುರುತಿಸಿಕೊಂಡಿದ್ದರು.
ಮೃತರು ಓರ್ವ ಪುತ್ರ, ನಾಲ್ವರು ಪುತ್ರಿಯರು, ಮೊಮ್ಮಕ್ಕಳು ಮತ್ತು ಮರಿಮಕ್ಕಳನ್ನು ಅಗಲಿದ್ದಾರೆ.
Next Story