Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್...

ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಹಗರಣ: ಸಂಸತ್ ಅಧಿವೇಶನದ ವೇಳೆ ದೆಹಲಿಯಲ್ಲಿ ಪ್ರತಿಭಟನೆಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ9 July 2022 7:18 PM IST
share
ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಹಗರಣ: ಸಂಸತ್ ಅಧಿವೇಶನದ ವೇಳೆ ದೆಹಲಿಯಲ್ಲಿ ಪ್ರತಿಭಟನೆಯ ಎಚ್ಚರಿಕೆ

ಬೆಂಗಳೂರು, ಜು.9: ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್‍ನ ಕೋಟ್ಯಂತರ ರೂಪಾಯಿ ಹಗರಣ ಬೆಳಕಿಗೆ ಬಂದು ಎರಡುವರೆ ವರ್ಷ ಕಳೆದಿದ್ದು, ಈ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇಲ್ಲವಾದಲ್ಲಿ ಮುಂದಿನ ಸಂಸತ್ ಅಧಿವೇಶನದ ವೇಳೆ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಶೇರುದಾರರು ಮತ್ತು ಠೇವಣಿದಾರರ ಹಿತರಕ್ಷಣಾ ವೇದಿಕೆಯ ಮಹಾಪೋಷಕ ಡಾ. ಶಂಕರ್ ಗುಹಾ ದ್ವಾರಕನಾಥ್ ಬೆಳ್ಳೂರು ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಬಸವನಗುಡಿಯ ಅಭಿನವ ವಿದ್ಯಾ ವಿಹಾರ ಸಭಾಂಗಣದಲ್ಲಿ ಮುಂದಿನ ಹೋರಾಟದ ಬಗ್ಗೆ ನಡೆದ ಚಿಂತನ ಮಂಥನ ಸಭೆಯಲ್ಲಿ ಮಾತನಾಡಿದ ಅವರು, ಹಗರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯನ್ನು ನೀಡಿಲ್ಲ. ವಂಚನೆಗೊಳಗಾದವರಿಗೆ ಸೂಕ್ತ ಪರಿಹಾರ ನೀಡಲು ಕ್ರಮ ತೆಗೆದುಕೊಂಡಿಲ್ಲ. ಹಾಗಾಗಿ ಹಗರಣವನ್ನು ಸಿಬಿಐಗೆ ವಹಿಸಿ ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ವಂಚನೆಗೊಳಗಾದವರಿಗೆ ಪರಿಹಾರವನ್ನು ನೀಡಬೇಕು. ವಂಚನೆಗೊಳಗಾದ ಎಲ್ಲಾ ಸಹಕಾರ ಸೌಹಾರ್ದ ಬ್ಯಾಂಕ್‍ಗಳ ಮಹಾ ಒಕ್ಕೂಟವನ್ನು ರಚಿಸುವುದು ಅನಿವಾರ್ಯ ಎಂದರು.  

ಇನ್ನು ಈ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್, ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್‍ಗೆ ಸಂಬಂಧಿಸಿದಂತೆ ಈಗಾಗಲೇ ಮೂರು ಬಾರಿ ಸಂಸತ್‍ನಲ್ಲಿ ಧ್ವನಿ ಎತ್ತಿದ್ದೇನೆ. ಎರಡು ವರ್ಷದ ಹಿಂದೆ ನಾನು ಈ ಬಗ್ಗೆ ಪ್ರಶ್ನಿಸಿದ್ದೆನು. ಆ ಸಮಯದಲ್ಲಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದರು. 

ಮುಂಬರುವ ಮುಂಗಾರು ಅಧಿವೇಶನದಲ್ಲಿ ಏನು ಕೇಳಬೇಕು, ಹಣ ಹಿಂಪಡೆಯಬೇಕಾದ ದಾರಿಗಳೇನು ಎನ್ನುವುದರ ಬಗ್ಗೆ ನನಗೆ ಸಲಹೆ ನೀಡಿ, ನಿಮ್ಮ ಸಲಹೆಗಳನ್ನು ನಾನು ರಾಜ್ಯಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ಜಿ.ಸಿ. ಚಂದ್ರಶೇಖರ್ ಭರವಸೆ ನೀಡಿದರು.

ಇಲ್ಲಿ ಯಾವುದೇ ರಾಜಕೀಯವಾಗಲಿ ಸ್ವ-ಪ್ರತಿಷ್ಠೆ ಯಾಗಲಿ ಬೇಕಾಗಿಲ್ಲ. ಯಾವುದೇ ರೀತಿಯ  ಕ್ರೆಡಿಟ್ ನನಗೆ ಬೇಕಾಗಿಲ್ಲ.ವಂಚನೆಗೊಳಾಗದವರಿಗೆ ಹಣ ಕೊಡಿಸುವ ವಿಚಾರದಲ್ಲಿ ಪಕ್ಷ-ಭೇದ ಮರೆತು ಎಲ್ಲರೂ ಹೋರಾಡಬೇಕಿದೆ. ಈ ವಿಚಾರದಲ್ಲಿ ರಾಜಕೀಯ ತಂದರೆ ಹಣ ಕೊಡಿಸುವ ವಿಚಾರ ಹಿಂದಕ್ಕೆ ಬೀಳಲಿದೆ ಎಂದರು.

ಈ ಚಿಂತನ-ಮಂಥನ ಸಭೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್‍ನ ನಿವೃತ್ತ ನಿವೃತ್ತ ಅಧಿಕಾರಿ ಪಳನಿಸ್ವಾಮಿ ಹಾಗೂ ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ಶ್ರೀ ಗುರು ಸಾರ್ವಭೌಮ ಸೌಹಾರ್ದ ಸಹಕಾರ ಬ್ಯಾಂಕ್, ಕಣ್ವ ಸೌಹಾರ್ದ ಸಹಕಾರ ಬ್ಯಾಂಕ್, ಬೆಳ್ಳಿ-ಬೆಳಕು ಸೌಹಾರ್ದ ಸಹಕಾರ ಬ್ಯಾಂಕ್, ಸಿರಿ-ವೈಭವ ಸಹಕಾರ ಬ್ಯಾಂಕ್, ವಸಿಷ್ಟ ಸೌಹಾರ್ದ ಸಹಕಾರ ಬ್ಯಾಂಕ್, ಶ್ರೀ ಶೈಲಗಿರಿ ಸೌಹಾರ್ದ ಬ್ಯಾಂಕ್‍ನಲ್ಲಿ ವಂಚನೆಗೊಳಾಗದ ನೂರಾರು ಠೇವಣಿದಾರರು, ಶೇರುದಾರರು ಭಾಗವಹಿಸಿದ್ದರು.

ಬ್ಯಾಂಕ್ ಹಗರಣದಲ್ಲಿ ಸಿಬ್ಬಂದಿ ಮತ್ತು ಆಡಳಿತ ಮಂಡಳಿಯ ಮೇಲೆ ಕ್ರಮ ತೆಗೆದುಕೊಂಡಿಲ್ಲ. ಪರಿಣಾಮವಾಗಿ ವಂಚನೆ ಮಾಡಿದವರೆಲ್ಲಾ ಐಷಾರಾಮಿ ಜೀವನ ಸಾಗಿಸುತ್ತಿದ್ದಾರೆ. ಆದರೆ ಜೀವನ ಭದ್ರತೆಗಾಗಿ ಠೇವಣಿ ಇಟ್ಟು ಹಣ ಕಳೆದುಕೊಂಡವರ ಬದುಕು ಬೀದಿಗೆ ಬಂದಿದೆ. ಈ ನಿಟ್ಟಿನಲ್ಲಿ ಬ್ಯಾಂಕ್ ಹಗರಣದ ವಿಷಯವಾಗಿ ನೊಂದವರಿಗೆ ನ್ಯಾಯ ಕೊಡಿಸುವಂತೆ, ರಾಜ್ಯದ ಎಲ್ಲಾ ಸಂಸದರ ಜೊತೆಗೂ ಮಾತುಕತೆ ನಡೆಸುತ್ತೇವೆ. ಅವರನ್ನು ತಮ್ಮ ಜೊತೆ ಸೇರಿಸಿಕೊಂಡು ನೊಂದವರಿಗೆ ಪರಿಹಾರ ಸಿಗುವಂತೆ ಕೇಳಿಕೊಳ್ಳುತ್ತೇವೆ. ಒಂದು ವೇಳೆ ನಮಗೆ ಸೂಕ್ತ ಪರಿಹಾರ ಸಿಗದಿದ್ದರೆ, ಉಪವಾಸ ಸತ್ಯಾಗ್ರಹ ಮಾಡುತ್ತೇವೆ.

-ಡಾ. ಶಂಕರ್ ಗುಹಾ ದ್ವಾರಕಾನಾಥ್ ಬೆಳ್ಳೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X