Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪದವಿ, ಸ್ನಾತಕೋತ್ತರ ಕೋರ್ಸುಗಳಿಗೆ ಇಡೀ...

ಪದವಿ, ಸ್ನಾತಕೋತ್ತರ ಕೋರ್ಸುಗಳಿಗೆ ಇಡೀ ರಾಜ್ಯಕ್ಕೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ: ಸಚಿವ ಅಶ್ವತ್ಥನಾರಾಯಣ

'ವಿ.ವಿ.ಗಳು, ಕಾಲೇಜುಗಳಿಂದ ಪಾಲನೆ ಕಡ್ಡಾಯ'

ವಾರ್ತಾಭಾರತಿವಾರ್ತಾಭಾರತಿ9 July 2022 8:06 PM IST
share
ಪದವಿ, ಸ್ನಾತಕೋತ್ತರ ಕೋರ್ಸುಗಳಿಗೆ ಇಡೀ ರಾಜ್ಯಕ್ಕೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ: ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: 2022-23ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ. ರಾಜ್ಯದ ಎಲ್ಲಾ ವಿ.ವಿ.ಗಳು ಮತ್ತು ಕಾಲೇಜುಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಶನಿವಾರ ಈ ಬಗ್ಗೆ ಮಾತನಾಡಿರುವ ಅವರು, ಈ ಏಕರೂಪದ ಕಾರ್ಯಕ್ರಮ ಪಟ್ಟಿಯಂತೆ, ರಾಜ್ಯದ ಉದ್ದಗಲಕ್ಕೂ ಪದವಿ ತರಗತಿಗಳಿಗೆ ಜುಲೈ 11ರಿಂದ ಪ್ರವೇಶಾತಿ ಆರಂಭವಾಗಲಿದ್ದು, ಆಗಸ್ಟ್ 17ರಿಂದ 22ರ ನಡುವೆ ತರಗತಿಗಳು ಆರಂಭವಾಗಲಿವೆ. ಇದೇ ರೀತಿಯಲ್ಲಿ, ಸ್ನಾತಕೋತ್ತರ ಕೋರ್ಸುಗಳಿಗೆ ಅಕ್ಟೋಬರ್ 15ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ 2ರಿಂದ 14ರ ನಡುವೆ ತರಗತಿಗಳಿಗೆ ಚಾಲನೆ ಸಿಗಲಿದೆ ಎಂದಿದ್ದಾರೆ.

ಇದುವರೆಗೂ ರಾಜ್ಯದಲ್ಲಿ ಒಂದೊಂದು ವಿ.ವಿ.ಯೂ ತಮ್ಮ ಅನುಕೂಲಕ್ಕೆ ತಕ್ಕಂತೆ ಶೈಕ್ಷಣಿಕ ವೇಳಾಪಟ್ಟಿ ರೂಪಿಸಿ ಕೊಳ್ಳುತ್ತಿದ್ದವು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಗೊಂದಲ ಮತ್ತು ಅನನುಕೂಲ ಆಗುತ್ತಿತ್ತು. ಇದನ್ನು ಗಮನಿಸಿ ಈ ಏಕರೂಪದ ವೇಳಾಪಟ್ಟಿಯನ್ನು ತರಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ವೇಳಾಪಟ್ಟಿಯಲ್ಲಿ ಪ್ರತೀ ಸೆಮಿಸ್ಟರುಗಳ ಆರಂಭ, ದಂಡರಹಿತ ಮತ್ತು ದಂಡ ಸಹಿತ ಪ್ರವೇಶಾತಿ ಅವಧಿ, ಪ್ರತಿ ಸೆಮಿಸ್ಟರುಗಳಿಗೆ ಬೋಧನಾ ತರಗತಿಗಳು ಆರಂಭವಾಗುವ ಮತ್ತು ಮುಗಿಯುವ ದಿನ, ಪರೀಕ್ಷೆ ಆರಂಭವಾಗುವ ದಿನ, ಮೌಲ್ಯಮಾಪನ ಆರಂಭ ಮತ್ತು ಫಲಿತಾಂಶ ಪ್ರಕಟಣೆಯ ದಿನ, ರಜೆ ಆರಂಭದ ದಿನಗಳನ್ನೆಲ್ಲ ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಈ ಪಟ್ಟಿಯಲ್ಲಿ ಪದವಿಯ 6, ಸ್ನಾತಕೋತ್ತರ ಮಟ್ಟದ 4 ಮತ್ತು  ವೃತ್ತಿಪರ ಕೋರ್ಸುಗಳ  8 ಸೆಮಿಸ್ಟರುಗಳನ್ನೂ ಗಣನೆಗೆ ತೆಗೆದುಕೊಳ್ಳಲಾಗಿದೆ. ಸೆಮಿಸ್ಟರ್ ಮುಗಿದ ನಂತರದ ರಜೆ ಅವಧಿಯಲ್ಲಿ   ಪರೀಕ್ಷಾ ಕರ್ತವ್ಯ ಬಂದರೆ, ಉಪನ್ಯಾಸಕರು ಆ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಅವರು ಹೇಳಿದರು.

ಉನ್ನತ ಶಿಕ್ಷಣ ಪರಿಷತ್ ಮುಖ್ಯಸ್ಥರಾದ ಬಿ.ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ಈ ಸಂಬಂಧ ಇದೇ 7ರಂದು ಎಲ್ಲಾ ವಿ.ವಿ.ಗಳ ಕುಲಪತಿಗಳು ಮತ್ತು ರಿಜಿಸ್ಟ್ರಾರ್ಸ್ ಜತೆ ವರ್ಚುಯಲ್ ಸಭೆ ನಡೆಸಿ, ಸಮಾಲೋಚನೆ ನಡೆಸಲಾಗಿತ್ತು ಎಂದು ಸಚಿವರು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X