Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ...

ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ನದಿಗಳು, ಉಪ್ಪಿನಂಗಡಿಯಲ್ಲಿ ನೆರೆ ಭೀತಿ

ವಾರ್ತಾಭಾರತಿವಾರ್ತಾಭಾರತಿ10 July 2022 10:13 AM IST
share
ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ನದಿಗಳು, ಉಪ್ಪಿನಂಗಡಿಯಲ್ಲಿ ನೆರೆ ಭೀತಿ

ಉಪ್ಪಿನಂಗಡಿ: ಶಾಂತಗೊಂಡಿದ್ದ ನೇತ್ರಾವತಿ- ಕುಮಾರಧಾರ ನದಿಗಳು ಮತ್ತೆ ರೌದ್ರವತಾರ ತಾಳುವ ಲಕ್ಷಣಗಳು ಕಾಣುತ್ತಿದ್ದು, ರವಿವಾರ ನಸುಕಿನ ಜಾವದಿಂದಲೇ ಉಭಯ ನದಿಗಳಲ್ಲಿ ನೀರ ಹರಿವು ಹೆಚ್ಚಳಗೊಂಡಿದ್ದು, ಅಪಾಯದ ಮಟ್ಟ ತಲುಪಿದೆ. ಈಗಾಗಲೇ ನದಿ ಪಾತ್ರದ ಪ್ರದೇಶಗಳು ಜಲಾವೃತಗೊಂಡಿವೆ. ಉಭಯ ನದಿಗಳಲ್ಲಿ ನೀರು ಹೆಚ್ಚಳವಾಗುತ್ತಲೇ ಇದ್ದು 2019ರ ಬಳಿಕ ಮತ್ತೊಮ್ಮೆ ನೆರೆ ಬರುವ ಸಾಧ್ಯತೆ ಕಾಣಿಸಿಕೊಂಡಿದೆ.

ಕಳೆದ ಕೆಲವು ದಿನಗಳಲ್ಲಿ ನೆರೆ ಭೀತಿ ಮೂಡಿಸಿದ ನೇತ್ರಾವತಿ- ಕುಮಾರಧಾರ ನದಿಗಳು ಶನಿವಾರ ಶಾಂತಗೊಂಡಿದ್ದವು. ಉಭಯ ನದಿಗಳಲ್ಲಿ ನೀರ ಹರಿವು ತೀರಾ ಕಡಿಮೆಯಾಗಿತ್ತು. ಆದರೆ ಶನಿವಾರ ಸಂಜೆಯಾಗುತ್ತಲೇ ನೀರು ಏರಿಕೆಯಾಗುತ್ತಲೇ ಇದ್ದು, ರವಿವಾರ ನಸುಕಿನ ಜಾವ ಎರಡು ಗಂಟೆಯ ಬಳಿಕ ಅಪಾಯದ ಮಟ್ಟದಲ್ಲಿ ಉಭಯ ನದಿಗಳ ನೀರು ಹರಿಯುತ್ತಿದೆ. ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಬಳಿ ಇರುವ ೩೮ ಮೆಟ್ಟಿಲುಗಳಲ್ಲಿ ಈ ಒಂದು ಮೆಟ್ಟಿಲಷ್ಟೇ ಕಾಣುತ್ತಿದ್ದು, ಉಳಿದ ಮೆಟ್ಟಿಲುಗಳೆಲ್ಲಾ ಮುಳುಗಿವೆ. ಈ ಒಂದು ಮೆಟ್ಟಿಲು ಮುಳುಗಿದರೆ ನೀರು ದೇವಾಲಯದ ವಠಾರಕ್ಕೆ ಪ್ರವೇಶಿಸಲಿದೆ. ಶಂಭೂರು ಅಣೆಕಟ್ಟು ಆಧಾರಿತ ಜಲಮಾಪಕದಲ್ಲಿ ನದಿಗಳ ಅಪಾಯದ ಮಟ್ಟ ೩೦ ಮೀ. ಆಗಿದ್ದು, ನದಿ ನೀರು ಈ ಮಟ್ಟವನ್ನು ಇದೀಗ ತಲುಪಿದೆ. ಅಪಾಯದ ಮಟ್ಟ ಮೀರಿ ನದಿಗಳು ಹರಿದಾಗ ಇಲ್ಲಿನ ಪಂಜಳ, ಹಿರ್ತಡ್ಕ -ಮಠ, ಹಳೆಗೇಟು, ಕೂಟೇಲು, ಕಡವಿನ ಬಾಗಿಲು, ದೇವಸ್ಥಾನ ಹೀಗೆ ನದಿ ಪಾತ್ರದ ಪ್ರದೇಶಗಳಲ್ಲದೆ, ನದಿಯನ್ನು ಸಂಪರ್ಕಿಸುವ ತೋಡುಗಳ ಬಳಿಯಿರುವ ಪ್ರದೇಶಗಳೂ ಸಂಪೂರ್ಣ ಜಲಾವೃತಗೊಳ್ಳುತ್ತವೆ. ಅಪಾಯದ ಭೀತಿಯನ್ನು ತಂದೊಡ್ಡುತ್ತವೆ.

ಸಂಗಮ ಸಾಧ್ಯತೆ: ಉಭಯ ನದಿಗಳ ನೀರು ಇನ್ನಷ್ಟು ಹೆಚ್ಚಳಗೊಂಡು ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಎಡ ಹಾಗೂ ಬಲ ಬದಿಯಿಂದ ಬಂದು ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಅಂಗಣಕ್ಕೆ ಹೊಕ್ಕು ಅಲ್ಲಿನ ಧ್ವಜ ಸ್ತಂಭವನ್ನು ಸ್ಪರ್ಶಿಸಿದಾಗ ಪವಿತ್ರ ಸಂಗಮ ಘಟಿಸುತ್ತದೆ. ಹೀಗೆ ನದಿಗಳಲ್ಲಿ ನೀರಿನ ಹರಿವು ಹೆಚ್ಚಳವಾಗುತ್ತಲೇ ಸಾಗಿದರೆ ಈ ಬಾರಿ ಪವಿತ್ರ ಸಂಗಮ ಘಟಿಸುವ ಸಾಧ್ಯತೆಯೂ ಇದೆ.

ಹಳೆಗೇಟು ಬಳಿ ಮನೆಯೊಂದು ಜಲಾವೃತಗೊಳ್ಳುವ ಸಾಧ್ಯತೆಯಲ್ಲಿದ್ದು, ಸ್ಥಳಕ್ಕೆ ಕಂದಾಯಾಧಿಕಾರಿಗಳ ತಂಡ ಭೇಟಿ ನೀಡಿ, ಅವರನ್ನು ಸುರಕ್ಷಿತ ಜಾಗಕ್ಕೆ ಅಥವಾ ಜಿಲ್ಲಾಡಳಿತದ ಕಾಳಜಿ ಕೇಂದ್ರಕ್ಕೆ ತೆರಳಲು ಸೂಚಿಸಿದ್ದಾರೆ. ಗೃಹ ರಕ್ಷಕ ದಳದ ಪ್ರಾಕೃತಿಕ ವಿಕೋಪ ರಕ್ಷಣಾ ತಂಡ ಸನ್ನದ್ಧ ಸ್ಥಿತಿಯಲ್ಲಿದ್ದು, ದೇವಾಲಯದ ಬಳಿ ಬೀಡು ಬಿಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X