Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಇತರ ಧರ್ಮಗಳನ್ನು ಗೌರವಿಸಿ ಸಮನ್ವಯ...

ಇತರ ಧರ್ಮಗಳನ್ನು ಗೌರವಿಸಿ ಸಮನ್ವಯ ಸಾಧಿಸಬೇಕು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ10 July 2022 2:11 PM IST
share
ಇತರ ಧರ್ಮಗಳನ್ನು ಗೌರವಿಸಿ ಸಮನ್ವಯ ಸಾಧಿಸಬೇಕು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಜುಲೈ 10 : ಇತರ ಧರ್ಮಗಳನ್ನು ಗೌರವಿಸುವ ಮೂಲಕ ಸಮನ್ವಯವನ್ನು ಸಾಧಿಸಬೇಕಿದೆ. ಸಮಾಜದ ಎಲ್ಲ ವರ್ಗದ ಜನರೊಂದಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಸಮನ್ವಯ ಸಾಧಿಸಿದಾಗ ಮಾತ್ರ ಸಮಾಜದಲ್ಲಿ ಸಮಾನತೆಯ ಭಾವವನ್ನು ತರಲು ಸಾದ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು  ಬೆಂಗಳೂರಿನಲ್ಲಿ ನಿವೃತ್ತ ಇಂಜಿನಿಯರ್ ಇನ್ ಚೀಫ್ ಹಾಗೂ ರಾಜ್ಯ ಸರ್ಕಾರದ ವಿಶೇಷ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ  ಡಾ. ಎಲ್.ಶಿವಲಿಂಗಯ್ಯನವರ ‘ನುಡಿ-ನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಡಾ. ಎಲ್.ಶಿವಲಿಂಗಯ್ಯ ಅವರ ಮನೆಗೆ ತೆರಳಿ ಹಲವಾರು ಭೇಟಿಯಾಗಿದ್ದೇನೆ. ಅವರು ನಮ್ಮ ತಂದೆಯವರ ಒಡನಾಟ, ಆತ್ಮೀಯತೆ, ರಾಜ್ಯ ಪ್ರಗತಿಪಥದಲ್ಲಿ ನಡೆಯಿತು ಎಂಬ ಬಗ್ಗೆ ಅತ್ಯಂತ ರೋಚಕವಾಗಿ ಹೇಳುತ್ತಿದ್ದರು. ಉನ್ನತ ಚಿಂತನೆಯ ವ್ಯಕ್ತಿತ್ವ ಅವರದು. ಹಲವಾರು ನೀರಾವರಿ ಯೋಜನೆಗಳ ರೂಪುರೇಷೆಗಳನ್ನು ಸಿದ್ಧಪಡಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಕನ್ನಡ ನಾಡಿಗೆ ಅನೇಕ ರೀತಿಯ ಮಹನೀಯರ ಸ್ಮರಣೆ ಮಾಡಿದಾಗ ಮಾತ್ರ ಪ್ರೇರಣೆ ದೊರೆಯುತ್ತದೆ. ಬೆಂಗಳೂರಿನಲ್ಲಿ  ವಿಕ್ಟೊರಿಯಾ, ನಿಮಾನ್ಸ್ ಸೇರಿದಂತೆ ಹಲವಾರು ಆಸ್ಪತ್ರೆಗಳ ವಿನ್ಯಾಸ ಹಾಗೂ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇಂದಿನ ಡಾ.ಬಿ.ಆರ್. ಅಂಬೇಡ್ಕರ್ ಸಂಸ್ಥೆಗಳು ಅವರ ದೂರದೃಷ್ಟಿಯ ಫಲವಾಗಿದೆ.  ಅವರ ಹಾದಿಯಲ್ಲಿ ನಡೆದು ಕೆಲಸ ಮಾಡಿದಾಗ ಸಮಾಜಕ್ಕೆ ನ್ಯಾಯ ಒದಗಿಸಿದಂತಾಗುತ್ತದೆ ಎಂದರು.

ಡಾ. ಎಲ್.ಶಿವಲಿಂಗಯ್ಯ ಅವರು ಯುವಕರಿಗೆ ಪ್ರೇರಣೆ :

ಡಾ. ಎಲ್.ಶಿವಲಿಂಗಯ್ಯ ಅವರು ಶ್ರಮಜೀವಿಗಳು. ಅತ್ಯಂತ ಕ್ರೀಯಾಶೀಲರಾಗಿದ್ದ ಅವರು ಯುವಕರಿಗೆ ಪ್ರೇರಣೆಯಾಗಿದ್ದರು. ಭಾರತೀಯ ಜನತಾ ಪಕ್ಷದ ದಲಿತ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದರು. ಡಾ. ಎಲ್.ಶಿವಲಿಂಗಯ್ಯ ಅವರ ಕಾರ್ಯಸಾಧನೆಗಳನ್ನು ಯುವಪೀಳಿಗೆಗೆ ಪ್ರಚುರಪಡಿಸುವ ಉದ್ದೇಶದಿಂದ ಅವರ ಸುಪುತ್ರರಾದ ಡಾ.ರವಿಪ್ರಕಾಶ್ ಅವರು ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಿರುವುದು ಅಭಿನಂದನೀಯ ಎಂದರು.

ಮಗುವಿನ ಮುಗ್ಧತೆಯ ಡಾ.ಎಲ್.ಶಿವಲಿಂಗಯ್ಯ :

ಮನುಷ್ಯನಿಗೆ ತನ್ನ  ಜೀವನದ ಉದ್ದೇಶ ತಿಳಿದಿದ್ದರೆ ಒಂದು ಸಂಸ್ಥೆಯಾಗಿ ಬೆಳೆಯಬಲ್ಲ ಎಂಬುದನ್ನು ಡಾ. ಎಲ್.ಶಿವಲಿಂಗಯ್ಯ ಅವರು ನಿರೂಪಿಸಿದ್ದಾರೆ. ನಾವು ಬದುಕನ್ನು ನಿಭಾಯಿಸುವ ರೀತಿ ಬಹಳ ಮುಖ್ಯ. ಮಗುವಿನ ಮುಗ್ಧತೆ ಹಾಗೂ ಆತ್ಮಸಾಕ್ಷಿಯನ್ನು ಕಾಯ್ದುಕೊಂಡು ಜೀವನ ನಡೆಸಿದವರು. ನಮ್ಮ ದೇಶಕ್ಕೆ ದೊಡ್ಡ ಚರಿತ್ರೆಇದ್ದು, ಚಾರಿತ್ರ್ಯ ಬೆಳೆಸಬೇಕಿದೆ. ಒಳ್ಳೆಯದನ್ನು ಪ್ರೋತ್ಸಾಹಿಸಬೇಕು ಎಂದರು. 

ಸಾವಿನ ನಂತರವೂ ಬದುಕಿದ ಸಾಧಕ :

ಪೂಜ್ಯ ಬಸವಣ್ಣ , ಬುದ್ಧರ ಕಾಲದಲ್ಲಿ ನೈಸರ್ಗಿಕ ಕಾನೂನಿತ್ತು. ನೈಸರ್ಗಿಕ ಕಾನೂನು ಎಲ್ಲರನ್ನು ಪ್ರೀತಿಸುವುದನ್ನು ಹಾಗೂ ಗೌರವಿಸುವುದನ್ನು , ಸತ್ಯ , ಧರ್ಮಗಳ ಹಾದಿಯಲ್ಲಿ ನಡೆಯುವುದನ್ನು ಬೋಧಿಸುತ್ತದೆ. ಮಾನವ ನಿರ್ಮಿತ ಕಾನೂನು  ಇತರರಲ್ಲಿ ದ್ವೇಷ, ಅಸತ್ಯ, ಅಧರ್ಮ ತೋರಿದರೆ ಶಿಕ್ಷೆ ಎಂದು ತಿಳಿಸುತ್ತದೆ. ನೈಸರ್ಗಿಕ ಕಾನೂನು ಪುರಸ್ಕಾರಕ್ಕೆ ಪೂರಕವಾಗಿದ್ದರೆ, ಮಾನವ ಕಾನೂನು ಶಿಕ್ಷೆಗೆ ಪೂರಕವಾಗಿದೆ. ಆದ್ದರಿಂದ ನಮ್ಮಲ್ಲಿ ಸತ್ಚಾರಿತ್ರ್ಯವನ್ನು ಬೆಳೆಸಿಕೊಂಡಾಗ ಇವೆರಡೂ ಕಾನೂನಿನಲ್ಲಿ ಸಾಮ್ಯತೆಯನ್ನು ಕಾಣಬಹುದಾಗಿದೆ.  ಆಗ ಮಾತ್ರ ಜೀವನ ನಡೆಸಲು ಉತ್ತಮ ವಾತಾವರಣವನ್ನು ಸೃಜಿಸಿದಂತಾಗುತ್ತದೆ. ನಮ್ಮ ನಡುವೆಯೇ ಇದ್ದು, ಸಾಧನೆಗೈದಿರುವ ಡಾ. ಎಲ್.ಶಿವಲಿಂಗಯ್ಯ ಅವರ ಜೀವನಸಾಧನೆಗಳು ಎಲ್ಲರಿಗೂ ಸದಾ ಪ್ರೇರಣೆ ನೀಡುತ್ತದೆ. ಸಾಧಕನಿಗೆ ಸಾವು ಅಂತ್ಯವಲ್ಲ. ಸಾವಿನ ನಂತರ ಬದುಕುವವರು ಸಾಧಕ ಎಂಬ ಮಾತಿಗೆ ಪ್ರೇರಣೆಯಾಗಿದ್ದಾರೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X