ಜು.11ರಂದು ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ, ಶಾಲೆಗಳಿಗೆ ರಜೆ: ಡಿಸಿ ಕೂರ್ಮಾರಾವ್

ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಭಾರಿ ಮಳೆಯ ಕಾರಣ ಉಡುಪಿ ಜಿಲ್ಲೆಯಲ್ಲಿ ಜುಲೈ11ರಂದು (ಸೋಮವಾರ) ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶ ಹೊರಡಿಸಿದ್ದಾರೆ.
ಸೋಮವಾರ ಪದವಿ ಪೂರ್ವ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ಡಿಫ್ಲೊಮಾ, ಐಟಿಐ ವಿದ್ಯಾರ್ಥಿಗಳಿಗೆ ಎಂದಿನಂತೆ ತರಗತಿಗಳು ನಡೆಯಲಿವೆ. ಆದರೆ ಪರಿಸ್ಥಿತಿಯನ್ನು ಅವಲೋಕಿಸಿ ಹಾಜರಾತಿಯನ್ನು ಕಡ್ಡಾಯಗೊಳಿಸಬಾರದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
Next Story