Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇನ್ನೊಂದು ಶ್ರೀಲಂಕಾ ಸೃಷ್ಟಿ ಮಾಡುವ...

ಇನ್ನೊಂದು ಶ್ರೀಲಂಕಾ ಸೃಷ್ಟಿ ಮಾಡುವ ಪಕ್ಷಗಳು ನಿಮಗೆ ಬೇಕಾ?: ಕುಮಾರಸ್ವಾಮಿ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ10 July 2022 9:31 PM IST
share
ಇನ್ನೊಂದು ಶ್ರೀಲಂಕಾ ಸೃಷ್ಟಿ ಮಾಡುವ ಪಕ್ಷಗಳು ನಿಮಗೆ ಬೇಕಾ?: ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಅಭಿವೃದ್ಧಿ ಹೆಸರಿನಲ್ಲಿ ಬಿಜೆಪಿ ಸರ್ಕಾರ ಜನರ ತೆರಿಗೆ ಹಣ ಲೂಟಿ ಮಾಡುತ್ತಿದೆ. ನಾನು ಯಾವುದೇ ಲೂಟಿ ಹೊಡೆಯುವ ಸಂಸ್ಥೆಗಳನ್ನು ನಡೆಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ  ವಾಗ್ದಾಳಿ ನಡೆಸಿದ್ದಾರೆ.

ಅಲ್ಲದೆ, ಜೆಡಿಎಸ್ ಪಕ್ಷಕ್ಕೆ ಬೆಂಗಳೂರಿನಲ್ಲಿ ನೆಲೆಯೇ ಇಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ನಮ್ಮ ಪಕ್ಷಕ್ಕೆ ನಗರದಲ್ಲಿ ನೆಲೆ ಇದೆಯೋ ಇಲ್ಲವೋ ಎಂಬುದನ್ನು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತೋರಿಸುತ್ತೇನೆ ಎಂದು ಅವರು ಗುಡುಗಿದರು.

ಅವರು ಇಂದು ದಾಸರಹಳ್ಳಿಯ ಅಬ್ಬಿಗೆರೆ ಹಾಗೂ ಹೊಸಕೆರೆಹಳ್ಳಿಯಲ್ಲಿ ನಡೆದ ಜನತಾ ಮಿತ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಡವರನ್ನು ಹಿಂಸೆ ಮಾಡುವ ಕೆಲಸ ನಡೆದರೆ ಶ್ರೀಲಂಕಾದ ಪರಿಸ್ಥಿತಿ ಇಲ್ಲಿಯೂ ನಡೆಯುತ್ತದೆ. ಇನ್ನೊಂದು ಶ್ರೀಲಂಕಾ ಸೃಷ್ಟಿ ಮಾಡುವ ಪಕ್ಷಗಳು ನಿಮಗೆ ಬೇಕಾ ಎಂದು ಮಾಜಿ ಮುಖ್ಯಮಂತ್ರಿಗಳು ಜನರನ್ನು ಪ್ರಶ್ನೆ ಮಾಡಿದರು.

ಮೋದಿ ಶ್ರೀಮಂತರ ಪರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನಂಬಬೇಡಿ. ನರೇಂದ್ರ ಮೋದಿ ಮಾತಿಗೆ ನೀವು ಮರುಳಾಗಬೇಡಿ. ಮೋದಿ ಹಾಗೂ ಬಿಜೆಪಿ ಪಕ್ಷ ಇರುವುದೇ ಶ್ರೀಮಂತರಿಗಾಗಿ, ಚುನಾವಣೆ ಸಂದರ್ಭದಲ್ಲಿ ಹಣ ಕೊಟ್ಟು ಮತ ಪಡೆಯಲು ಬರುತ್ತಾರೆ. ನಿಮ್ಮ ದುಡ್ಡನ್ನು ಲೂಟಿ ಮಾಡಿ ಮಜಾ ಮಾಡುತ್ತಿದ್ದಾರೆ. ಅವರು ಶ್ರೀಮಂತರ ಪರವಾಗಿದ್ದಾರೆ. ಬಡವರ ಪರ ಇಲ್ಲ ಎಂದು ಟೀಕಿಸಿದರು.

ಪಿಎಸ್‌ಐ ಹುದ್ದೆ ಪಡೆಯಲು ಲಕ್ಷಾಂತರ ರೂ. ಲಂಚ ನೀಡಬೇಕಾದ ಪರಿಸ್ಥಿತಿ ಇದೆ. ಜನರ ಹಣ ರಾಜ್ಯದಲ್ಲಿ ಲೂಟಿಯಾಗುತ್ತಿದೆ ಎಂದು ಅವರು ಹೇಳಿದರು.

ರಾಜ್ಯ ಸರಕಾರದಿಂದ ತಾರತಮ್ಯ: ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಬಿಜೆಪಿ ಸರಕಾರವೇ ಇಂಥ ತಪ್ಪು ಮಾಡುತ್ತಿದೆ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ನೀಡಲಾಗಿದ್ದ 750 ಕೋಟಿ ಹಣವನ್ನು ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ನಿಲ್ಲಿಸಿದೆ ಎಂದು ಅವರು  ಆರೋಪಿಸಿದರು.

ನಿಮಗೆ ದ್ರೋಹ ಮಾಡುವ ಪಕ್ಷಗಳ ಮೊದಲ ಸ್ಥಾನದಲ್ಲಿ ಬಿಜೆಪಿ ಇದೆ. ವಿದ್ಯುತ್, ಅನಿಲ ಬೆಲೆ ಏರಿಕೆ ಮಾಡಲಾಗುತ್ತಿದೆ. ಇದು ಜನಸಾಮಾನ್ಯರಿಗೆ ಹೊರೆ. ಮಹಾನಗರದಲ್ಲಿ ಮಾಡಬೇಕಾದ ಕೆಲಸಗಳ ಮಾಹಿತಿ ಪಡೆಯಲು ಈ ಜನತಾಮಿತ್ರ ವಾಹನ ನಿಮ್ಮ ಮನೆ ಮುಂದೆ ಕಳಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಇಂಗ್ಲಿಷ್ ಮೀಡಿಯಂ ವಿದ್ಯಾಭ್ಯಾಸಕ್ಕೆ ಹಣ ನೀಡದೆ ಮಕ್ಕಳು ಉಚಿತವಾಗಿ ಕಲಿಯುವ ವ್ಯವಸ್ಥೆ ಮಾಡುತ್ತೇವೆ. ಆರೋಗ್ಯಮಿತ್ರ ಅಡಿಯಲ್ಲಿ ಉಚಿತ ಆರೋಗ್ಯ ಒದಗಿಸುತ್ತೇವೆ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಹೆಣ್ಣು ಮಕ್ಕಳು ಸ್ವಾಭಿಮಾನದಿಂದ ಬದುಕಲು ಬೇಕಾಗಿರುವ ಎಲ್ಲ ಅಗತ್ಯ ಸೌಲಭ್ಯಗಳನ್ನೂ ಒದಗಿಸುವುದಾಗಿ ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ಉಚಿತ ವಿದ್ಯುತ್:

ಬಡ ಕುಟುಂಬಗಳಿಗೆ ಉಚಿತವಾಗಿ ವಿದ್ಯುಚ್ಛಕ್ತಿ ಕೊಡಲು ಚಿಂತನೆ ಮಾಡಲಾಗಿದೆ. ಲೂಟಿ ಆಗುತ್ತಿರುವ ನಿಮ್ಮ ಹಣ ನಿಮಗೇ ತಲುಪಬೇಕು. ನಿಮ್ಮ ಕಷ್ಟಗಳು ಏನೇ ಇದ್ದರೂ ಜನತಾ ಮಿತ್ರ ವಾಹನದ ಬಾಕ್ಸ್‌ನಲ್ಲಿ ಹಾಕಿ, ಯಾವ ರೀತಿಯ ಯೋಜನೆ ಬೇಕು ಅದನ್ನು ಮಾಡುತ್ತೇವೆ ಎಂದು ಅವರು ಹೇಳಿದರು.

ಎಲ್ಲೆಲ್ಲೂ 40% ಕಮಿಷನ್:

ಹೊಸಕೆರೆಹಳ್ಳಿ ಸುತ್ತಮುತ್ತ ಬಡವಾಣೆಗಳ ಸಮಸ್ಯೆ ಬಗೆಹರಿಸಲು ನನ್ನ ಅವಧಿಯಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಈ ಭಾಗದಲ್ಲಿ ಕಾವೇರಿ ನೀರಿಯ ಯೋಜನೆಯನ್ನು ಕೊಟ್ಟಿದ್ದು ಹೆಚ್.ಡಿ.ದೇವೇಗೌಡರು.
ಇವತ್ತು ಅಭಿವೃದ್ಧಿ ಹೆಸರಲ್ಲಿ ಬಿಜೆಪಿ ಸರ್ಕಾರ ಲೂಟಿ ಹೊಡೆಯುತ್ತಿದೆ. 40 ಪರ್ಸೆಂಟ್ ಕಮೀಷನ್ ಹೆಸರಲ್ಲಿ ಲೂಟಿ‌ ನಡೆಯುತ್ತಿದೆ. ಬೆಂಗಳೂರು ಮೂಲಭೂತ ಸಮಸ್ಯೆಗಳ ಬಗ್ಗೆ ಹೈಕೋರ್ಟ್ ಪ್ರತಿ ನಿತ್ಯ ಸರ್ಕಾರಕ್ಕೆ ಛೀಮಾರಿ ಹಾಕುತ್ತಿದೆ ಎಂದು ಕಿಡಿಕಾರಿದರು ಹೆಚ್ ಡಿಕೆ.

ಜೆಡಿಎಸ್ ಶಕ್ತಿ ತೋರಿಸುತ್ತೇನೆ: ಇಟ್ಟಮಡುವಿನಲ್ಲಿ ನಡೆದ ಜನತಾ ಮಿತ್ರ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು, 

ಬೆಂಗಳೂರು ನಗರದಲ್ಲಿ ಜೆಡಿಎಸ್‌ ನೆಲೆ ಇಲ್ಲ ಅನ್ನುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ಗೆ ಭವಿಷ್ಯವಿಲ್ಲ ಅಂತಾರೆ. ಇಂತಹವರಿಗೆ ಇಟ್ಟಮಡುವಿನ ಜನತೆ ಉತ್ತರ ಕೊಟ್ಟಿದ್ದಾರೆ. ನಮ್ಮ ಪಕ್ಷದ ಶಕ್ತಿ ಏನು ಎಂಬುದನ್ನು ತೋರಿಸುತ್ತೇನೆ ಎಂದರು.

ಕೆಂಪೇಗೌಡರು ಕಟ್ಟ ಕೆರೆಗಳಿಗೆ ಕೊಳಚೆ ನೀರು ತುಂಬಿಸುತ್ತಿದ್ದಾರೆ. ಅದೇ ವಿಷಪೂರಿತ ನೀರನ್ನು ನೀವು ಈಗಲೂ ಕುಡಿಯಬೇಕಿತ್ತು. ಕೇಂದ್ರದಲ್ಲಿದ್ದ ಕಾಂಗ್ರೆಸ್ ಸರಕಾರ ಕಾವೇರಿ ನೀರು ತರಲು ಒಪ್ಪಿಗೆ ಕೊಡಲಿಲ್ಲ.  ದೇವೇಗೌಡರು ಪ್ರಧಾನಿ ಆದಾಗ ನಗರಕ್ಕೆ 9 ಟಿಎಂಸಿ ನೀರು ಕೊಟ್ಟರು. ಬೆಂಗಳೂರಿನ ರಿಂಗ್‌ ರೋಡ್‌ಗೆ 95 ಎಕರೆ ಭೂಮಿ ಕೊಟ್ಟವರು ದೇವೇಗೌಡರು. ನಾನು ಬಿಬಿಎಂಪಿ ರಚನೆ ಮಾಡಿದೆ. 198 ವಾರ್ಡ್‌ ರಚನೆ ಮಾಡಿದೆ. ಮೆಟ್ರೋ ಯೋಜನೆಯ ಚಾಲನೆ ನೀಡಿದೆ ಎಂದು ಅವರು ಮಾಹಿತಿ ನೀಡಿದರು.

ದಾಸರಹಳ್ಳಿ ಕ್ಷೇತ್ರದ ಶಾಸಕ  ಆರ್.ಮಂಜುನಾಥ್ ಮಾತನಾಡಿ, ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಕಾವೇರಿ ನೀರನ್ನು ಈ ಭಾಗದ ಜನರಿಗೆ ಒದಗಿಸಲಾಗಿದೆ. ಅಭಿವೃದ್ಧಿ ವಿಚಾರದಲ್ಲಿ ದಾಸರಹಳ್ಳಿ ಕ್ಷೇತ್ರವನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿದರು.

ಬೆಂಗಳೂರು ನಗರ ಜೆಡಿಎಸ್‍ ಅಧ್ಯಕ್ಷ ಆರ್.ಪ್ರಕಾಶ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X