Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸದೃಢ ಶಿಕ್ಷಣ ಸಂಸ್ಥೆಯಿಂದ ನಾಗರಿಕರ...

ಸದೃಢ ಶಿಕ್ಷಣ ಸಂಸ್ಥೆಯಿಂದ ನಾಗರಿಕರ ಸಬಲೀಕರಣ- ಡಾ.ಸಿ.ಎನ್.ಅಶ್ವತ್ಥನಾರಾಯಣ

ತಿಪಟೂರು ಸ್ನಾತಕೋತ್ತರ ಕೇಂದ್ರ “ಕಲ್ಪಸಿರಿ” ನಿರ್ಮಾಣಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ11 July 2022 4:01 PM IST
share
ಸದೃಢ ಶಿಕ್ಷಣ ಸಂಸ್ಥೆಯಿಂದ ನಾಗರಿಕರ ಸಬಲೀಕರಣ- ಡಾ.ಸಿ.ಎನ್.ಅಶ್ವತ್ಥನಾರಾಯಣ

ತಿಪಟೂರು: ನಾಗರಿಕರು ಶಿಕ್ಷಣ ಸಂಸ್ಥೆಗಳ ಬೆಳವಣಿಗೆಗೆ ಕೊಡುಗೆ ನೀಡಬೇಕು. ಹೀಗಾದಾಗ, ಶಿಕ್ಷಣ ಸಂಸ್ಥೆಗಳು ಗುಣಮಟ್ಟದಲ್ಲಿ ಮೇಲ್ದರ್ಜೆಗೇರುವ ಜೊತೆಗೆ ನಾಗರಿಕರ ಸಬಲೀಕರಣವೂ ಸಾಧ್ಯವಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟರು. 

ತುಮಕೂರು ವಿಶ್ವವಿದ್ಯಾನಿಲಯದ ತಿಪಟೂರು ಸ್ನಾತಕೋತ್ತರ ಕೇಂದ್ರ “ಕಲ್ಪಸಿರಿ”ಯ ನಿರ್ಮಾಣಕ್ಕೆ ಹತ್ತಿರದ ರಂಗಾಪುರದಲ್ಲಿ ಸೋಮವಾರ ಚಾಲನೆ ನೀಡಿ ಮಾತನಾಡಿದರು.

ಇಪ್ಪತ್ತೊಂದನೇ ಶತಮಾನವು ಜ್ಞಾನಾಧಾರಿತ ಸಮಾಜವಾಗಿದೆ. ಇಂತಹ ಶಿಕ್ಷಣ ಸಂಸ್ಥೆಗಳು ಸುಸ್ಥಿರವಾಗಿರಬೇಕೆಂದರೆ ಗುಣಮಟ್ಟ ಮುಖ್ಯ. ಇಂತಹ ಕೇಂದ್ರಗಳು ಸ್ಥಳೀಯವಾಗಿ ಪ್ರತಿಭೆಯನ್ನು ಉತ್ತೇಜಿಸುವ ಜೊತೆಗೆ ಇಡೀ ದೇಶದೆಲ್ಲೆಡೆಯ ಪ್ರತಿಭೆಗಳನ್ನು ಇಲ್ಲಿಗೆ ಸೆಳೆಯುವ ರೀತಿಯಲ್ಲಿ ಬೆಳೆಯಬೇಕು. ಇದು ಸಾಧ್ಯವಾದಾಗ, ವೈವಿಧ್ಯತೆಯನ್ನು ಉಳಿಸಿಕೊಂಡು ನಮ್ಮತನದ ಛಾಪನ್ನು ಒತ್ತಿದಂತಾಗುತ್ತದೆ ಎಂದು ಸಚಿವರು ವಿವರಿಸಿದರು.

ಯಾವ ಜಾಗದಲ್ಲಿ ಗುಣಮಟ್ಟದ ಶಿಕ್ಷಣ ಇರುತ್ತದೋ ಅದು ಸಮೃದ್ಧತೆಯ ತಾಣವಾಗುತ್ತದೆ. ಇಲ್ಲಿ 16 ಎಕರೆ ಕ್ಯಾಂಪಸ್ ತಲೆಯೆತ್ತಲಿದ್ದು,  ಎಂ.ಕಾಂ, ಎಂಸಿಎ ಕೋರ್ಸ್ ಗಳು ಇರಲಿವೆ. ಜಿಲ್ಲೆಯ ಬಿದರೆಕಟ್ಟೆಯಲ್ಲಿ 44 ಕೋಟಿ ವೆಚ್ಚದಲ್ಲಿ ಹೊಸ ಕ್ಯಾಂಪಸ್ ನಿರ್ಮಾಣ ಕಾರ್ಯ ನಡೆದಿದೆ. ಸಿರಾದಲ್ಲಿ ಪಿ.ಜಿ. ಕೇಂದ್ರ ಕಾರ್ಯಾಚರಿಸುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ತುಮಕೂರು ವಿ.ವಿ.ಯಲ್ಲಿ ಸಾಕಷ್ಟು ಅಭಿವೃದ್ಧಿ ಆಗುತ್ತಿದೆ, ಒಟ್ಟು 70 ಎಕರೆ ವಿಸ್ತೀರ್ಣದಲ್ಲಿರುವ ತುಮಕೂರು ವಿ.ವಿ.ಯು ಈಗ ನ್ಯಾಕ್ ಬಿ+ ಶ್ರೇಣಿಯಲ್ಲಿದ್ದು, ಎ+ ಶ್ರೇಣಿಗೆ ಏರಬೇಕು. ಅದೇ ರೀತಿ ಎನ್.ಐ.ಆರ್.ಎಫ್. ಶ್ರೇಯಾಂಕದಲ್ಲಿ ಈಗ 150ರಿಂದ 200ರ ಒಳಗಿದ್ದು, ಇದು ಇನ್ನಷ್ಟು ಮೇಲಕ್ಕೆ ಬರಬೇಕು. ಒಟ್ಟಾರೆ ತುಮಕೂರು ವಿ.ವಿ. ದೇಶದ ಎಲ್ಲಾ ಭಾಗದವರೂ ಓದಲು ಬಯಸುವಂತಹ ಶೈಕ್ಷಣಿಕ ತಾಣವಾಗಬೇಕು ಎಂದು ಆಶಿಸಿದರು.

ಸದ್ಯ ತಾಂತ್ರಿಕತೆಯು ಶಿಕ್ಷಣದ ಅವಕಾಶಗಳನ್ನು ಹೆಚ್ಚಿಸುತ್ತಿದೆ. ಈಗ ರಾಜ್ಯದ ಯಾವುದೇ ಗ್ರಾಮದ ವಿದ್ಯಾರ್ಥಿ ಯುಯುಸಿಎಂಎಸ್ (ಯುನಿಫೈಡ್ ಯುನಿವರ್ಸಿಟಿ ಅಂಡ್ ಕಾಲೇಜ್ ಮ್ಯಾನೇಜ್ ಮೆಂಟ್ ಸಿಸ್ಟಂ) ಬಳಸಿ ತಾನಿರುವ ಸ್ಥಳದಿಂದ ರಾಜ್ಯದ ಯಾವುದೇ ಕಾಲೇಜಿಗೆ ಬೇಕಾದರೂ ಅರ್ಜಿ ಹಾಕಬಹುದು. ವಿದ್ಯಾರ್ಥಿಗಳ ಅಂಕಪಟ್ಟಿ ಸೇರಿದಂತೆ  43 ವರ್ಷಗಳ ಶೈಕ್ಷಣಿಕ ದಾಖಲೆಗಳು ಡಿಜಿ ಲಾಕರ್ ನಲ್ಲಿರುವುದರಿಂದ ಕುಳಿತ ಜಾಗದಿಂದಲೇ ಶೈಕ್ಷಣಿಕ ದಾಖಲಾತಿಗಳನ್ನು ಅರ್ಜಿಗೆ ಲಗತ್ತಿಸಬಹುದು ಎಂದು ವಿವರಿಸಿದರು.

ಸರ್ಕಾರವು 22 ವರ್ಷಗಳ ನಂತರ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದಂತೆ ಹೊಸ ಕಾಯ್ದೆ ಜಾರಿಗೊಳಿಸುವ ಉದ್ದೇಶ ಹೊಂದಿದೆ. ಇದಕ್ಕೆ ಮುಂಚೆ 2000ನೇ ಇಸವಿಯಲ್ಲಿ ಕರ್ನಾಟಕ ಸ್ಟೇಟ್ ಯೂನಿವರ್ಸಿಟಿ ಕಾಯ್ದೆ ತರಲಾಗಿತ್ತು. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಎಲ್ಎಂಎಸ್ (ಲರ್ನಿಂಗ್ ಮ್ಯಾನೇಜ್ ಮೆಂಟ್) ಸಿಸ್ಟಂ, ಸ್ಮಾರ್ಟ್ ಕ್ಲ್ಯಾಸ್ ರೂಮ್ ಸೇರಿದಂತೆ ಹಲವು ಉಪಕ್ರಮಗಳಿಗೆ ಚಾಲನೆ ಕೊಡಲಾಗಿದೆ. ಯಾವುದೇ ಕಾಲೇಜಿನಲ್ಲಿ ಬೋಧಕರ ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ಸಚಿವರು ಇದಕ್ಕೂ ಮುನ್ನ ತಿಪಟೂರು ಪಟ್ಟಣದಲ್ಲಿ ಪದವಿ ಕಾಲೇಜಿಗೆ ಭೇಟಿ ಕೊಟ್ಟು, ಅಲ್ಲಿ ನಿರ್ಮಾಣ ಹಂತದಲ್ಲಿರುವ ಕಾಲೇಜು ಕಟ್ಟಡವನ್ನು ಪರಿಶೀಲಿಸಿ, ಆಗಿರುವ ಪ್ರಗತಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

ಕೆರೆಗೋಡಿ ರಂಗಾಪುರ ಮಠದಗುರುಪರದೇಶಿಕೇಂದ್ರ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಪ್ರಾಥಮಿಕ ಶಿಕ್ಷಣ ಸಚಿವ ಹಾಗೂ ಕ್ಷೇತ್ರದ ಶಾಸಕ ಬಿ.ಸಿ.ನಾಗೇಶ್, ತುಮಕೂರು ವಿ.ವಿ. ಕುಲಪತಿ ಪ್ರೊ.ಕೇಶವ, ಸಿಂಡಿಕೇಟ್ ಸದಸ್ಯರಾದ ರಾಜು, ಟಿ.ಎಸ್.ಸುನಿಲ್ ಪ್ರಸಾದ್, ಕುಲಸಚಿವ ಪ್ರೊ.ನಿರ್ಮಲ್ ರಾಜು, ಹಣಕಾಸು ಅಧಿಕಾರಿ ಪ್ರೊ.ಪಿ.ಪರಮಶಿವಯ್ಯ ಅವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X