Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ; ಗೂಡಿನಬಳಿಯಲ್ಲಿ ಗುಡ್ಡ...

ಬಂಟ್ವಾಳ; ಗೂಡಿನಬಳಿಯಲ್ಲಿ ಗುಡ್ಡ ಕುಸಿಯುವ ಭೀತಿ

► ಗುಡ್ಡದ ಕೆಳಗಿನ ಮನೆಗಳ ಜನರು ಅಪಾಯದಲ್ಲಿ ►ಹಾನಿಗೊಂಡ ರಸ್ತೆ, ಸಂಪರ್ಕ ಕಡಿತ ►27ವಾರ್ಡ್ ಗಳ ಕುಡಿಯುವ ನೀರಿನ ಪೈಪ್ ಗೆ ಹಾನಿ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ11 July 2022 4:52 PM IST
share
ಬಂಟ್ವಾಳ; ಗೂಡಿನಬಳಿಯಲ್ಲಿ ಗುಡ್ಡ ಕುಸಿಯುವ ಭೀತಿ

ಬಂಟ್ವಾಳ, ಜು.11: ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಗೂಡಿನಬಳಿಯ ಟಿಪ್ಪು ರಸ್ತೆ ಎಂಬಲ್ಲಿ ಗುಡ್ಡ ಕುಸಿದು ಇಲ್ಲಿನ ಮನೆಗಳ ಜನರು ತೀವ್ರ ಅಪಾಯವನ್ನು ಎದುರಿಸುತ್ತಿದ್ದಾರೆ‌. 

ವರ್ಷದ ಹಿಂದೆಯೇ ಗುಡ್ಡ ಸ್ವಲ್ಪ ಮಟ್ಟಿಗೆ ಕುಸಿದಿತ್ತು. ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವುದ ರಿಂದ ರವಿವಾರ ಗುಡ್ಡ ಮತ್ತಷ್ಟು ಕುಸಿದಿದೆ. ಇದರಿಂದ ಟಿಪ್ಪು ರಸ್ತೆ ಸಂಪೂರ್ಣ ಹಾನಿಗೊಂಡಿದ್ದು ಸಂಪರ್ಕ ಕಡಿತಗೊಂಡಿದೆ.

ಗುಡ್ಡ ಕುಸಿದ ಭಾಗ ಮಳೆಯಿಂದ ಮೃದುವಾಗಿ ಸ್ವಲ್ಪ ಸ್ವಲ್ಪ ಮಣ್ಣು ಜಾರುತ್ತಿದ್ದು ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿಯುವ ಅಪಾಯ ಇದೆ. ಗುಡ್ಡ ಕುಸಿದ ಭಾಗದ ನೇರ ಕೆಳಗೆ ಎರಡು ಮನೆಗಳು ಇದ್ದು ಮನೆಮಂದಿ ಅಪಾಯವನ್ನು ಎದುರಿಸುತ್ತಿದ್ದಾರೆ.

ನಾಲ್ಕು ದಿನಗಳ ಹಿಂದೆ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ಗುಡ್ಡ ಕುಸಿದು ಮೂವರು ಮೃತಪಟ್ಟಿದ್ದು ಇದೇ ಮಾದರಿಯ ಭೀತಿಯನ್ನು ಗೂಡಿನಬಳಿ ಟಿಪ್ಪು ರಸ್ತೆಯ ಕೆಳಭಾಗದ ಜನತೆ ಎದುರಿಸುತ್ತಿದ್ದಾರೆ. 

ಗುಡ್ಡೆ ಕುಸಿತದಿಂದ ರಸ್ತೆ ಸಂಪೂರ್ಣವಾಗಿ ಕಡಿದು ಹೋಗಿದ್ದು 75ಕ್ಕೂ ಅಧಿಕ ಮನೆಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಗುಡ್ಡ ಇನ್ನಷ್ಟು ಕುಸಿದರೆ ಇಲ್ಲಿಂದ ಹಾದುಹೋದ ಬಂಟ್ವಾಳ ಪುರಸಭಾ ವ್ಯಾಪ್ತಿಯ 27 ವಾರ್ಡ್ ಗಳಿಗೆ ಕುಡಿಯುವ ನೀರು ಪೂರೈಸುವ ಪೈಪ್ ಗೆ ಹಾನಿಯಾಗಲಿದ್ದು 27 ವಾರ್ಡ್ ಗಳಿಗೂ ಕುಡಿಯುವ ನೀರು ಪೂರೈಕೆ ಕಡಿತಗೊಳ್ಳಲಿದೆ.

ಗುಡ್ಡ ಕುಸಿದ ಭಾಗಕ್ಕೆ ತಡೆಗೋಡೆ ನಿರ್ಮಿಸುವಂತೆ ಸ್ಥಳೀಯ ಪುರಸಭಾ ಸದಸ್ಯೆಯ ನಿಯೋಗದಿಂದ ಜಿಲ್ಲಾಧಿಕಾರಿ, ಶಾಸಕ ರಾಜೇಶ್ ನಾಯ್ಕ್ ಅವರಿಗೆ ಮನವಿ ಸಲ್ಲಿಸಿದೆ. ಶಾಸಕರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

"ಗುಡ್ಡ ಕುಸಿದ ಭಾಗಕ್ಕೆ ತಡೆಗೋಡೆ ನಿರ್ಮಾಣಕ್ಕೆ ಪುರಸಭೆಯ ಸ್ವಲ್ಪ ಅನುದಾನ ಸಾಕಾಗುತ್ತಿಲ್ಲ. ಹಾಗಾಗಿ ಶಾಸಕರಿಗೆ ಮನವಿ ಸಲ್ಲಿಸಲಾಗಿದ್ದು ಅವರು ಭರವಸೆ ನೀಡಿದ್ದಾರೆ. ಗುಡ್ಡ ಇನ್ನಷ್ಟು ಕುಸಿದರೆ ಭಾರೀ ಕಷ್ಟ ನಷ್ಟ ಸಂಭವಿಸುವ ಅಪಾಯ ಇದೆ. ಪುರಸಭಾ ವ್ಯಾಪ್ತಿಗೆ ಕುಡಿಯುವ ನೀರು ಕೂಡಾ ಕಡಿತಗೊಳ್ಳಲಿದೆ. ಹಾಗಾಗಿ ಜಿಲ್ಲಾಡಳಿತ ಇದಕ್ಕೆ ಹೆಚ್ಚಿನ ಮುತುವರ್ಜಿ ವಹಿಸುವಂತೆ ಆಗ್ರಹಿಸುತ್ತೇನೆ". 

- ಝೀನತ್ ಫೈರೋಝ್, 
ಪುರಸಭಾ ಸದಸ್ಯೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X