Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಜಕೀಯ ಪ್ರೇರಿತವಾಗಿ ಕುಂದಾಪುರ ಪಿಪಿ...

ರಾಜಕೀಯ ಪ್ರೇರಿತವಾಗಿ ಕುಂದಾಪುರ ಪಿಪಿ ವರ್ಗಾವಣೆ: ದಿನೇಶ್ ಗಾಣಿಗ ಆರೋಪ

‘ಕೊಲೆ ಆರೋಪಿ ಬಿಜೆಪಿ ಮುಖಂಡರ ರಕ್ಷಣೆಗೆ ಕಾಣದ ಕೈಗಳ ಕೈವಾಡ’

ವಾರ್ತಾಭಾರತಿವಾರ್ತಾಭಾರತಿ11 July 2022 5:14 PM IST
share
ರಾಜಕೀಯ ಪ್ರೇರಿತವಾಗಿ ಕುಂದಾಪುರ ಪಿಪಿ ವರ್ಗಾವಣೆ: ದಿನೇಶ್ ಗಾಣಿಗ ಆರೋಪ

ಉಡುಪಿ: ಬಿಜೆಪಿ ಮುಖಂಡರು ಆರೋಪಿಗಳಾಗಿರುವ ಕೋಟ ಅವಳಿ ಕೊಲೆ ಪ್ರಕರಣ ಹಾಗೂ ಯಡಮೊಗೆ ಉದಯ ಗಾಣಿಗ ಹತ್ಯೆ ಪ್ರಕರಣ ಗಳಲ್ಲಿ ವಾದ ಮಂಡಿಸುತ್ತಿರುವ ಕುಂದಾಪುರ ನ್ಯಾಯಾಲಯದ ಸರಕಾರಿ ಅಭಿ ಯೋಜಕ(ಪಿಪಿ) ಪ್ರಕಾಶ್ಚಂದ್ರ ಶೆಟ್ಟಿ ಅವರನ್ನು ಗೃಹ ಸಚಿವರು, ಕಾಣದ ಕೈಗಳ ಜೊತೆ ಸೇರಿಕೊಂಡು ರಾಜಕೀಯ ಪ್ರೇರಿತವಾಗಿ ಒತ್ತಡಕ್ಕೆ ಮಣಿದು ವರ್ಗಾವಣೆ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಗಾಣಿಗ ಕೋಟ ಆರೋಪಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  ೨೦೧೯ರ ಜ.೨೬ರಂದು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಭರತ್ ಹಾಗೂ ಯತೀಶ್ ಅವಳಿ ಕೊಲೆ ಪ್ರಕರಣದಲ್ಲಿ ಮತ್ತು ೨೦೨೧ರ ಜೂ.೫ರಂದು ಕುಂದಾಪುರ ತಾಲೂಕಿನ ಯಡಮೊಗೆಯಲ್ಲಿ ನಡೆದ ಉದಯ ಗಾಣಿಗ ಕೊಲೆ ಪ್ರಕರಣಗಳಲ್ಲಿ ಬಿಜೆಪಿ ಉನ್ನತ ಸ್ಥಾನದಲ್ಲಿರುವವರು ಪ್ರಮುಖ ಆರೋಪಿಗಳಾಗಿ ದ್ದಾರೆ. ಈ ಪ್ರಕರಣಗಳಲ್ಲಿ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಉತ್ತಮವಾಗಿ ವಾದ ಮಂಡಿಸಿ, ಆರೋಪಿಗಳಿಗೆ ಜಾಮೀನು ದೊರೆಯದಂತೆ ಮಾಡಿದ್ದಾರೆ ಎಂದು ತಿಳಿಸಿದರು.

ಕೋಟ ಅವಳಿ ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಮುಗಿಸಲು ಸುಪ್ರೀಂ ಕೋರ್ಟ್ ಕೂಡ ಆದೇಶ ನೀಡಿದೆ. ಹೀಗಾಗಿ ಈ ಪ್ರಕರಣದ ವಿಚಾರಣೆ ಕೊನೆಯ ಹಂತದಲ್ಲಿದೆ. ಮುಂದೆ ಹೊಸ ಸರಕಾರಿ ಅಭಿಯಜಕರು  ಬಂದರೆ ಆ ಪ್ರಕರಣದ ಬಗ್ಗೆ ಅಧ್ಯಯನ ಮಾಡಲು ಕಷ್ಟವಾಗುತ್ತದೆ. ನಮಗೆ ಈ ಪ್ರಕರಣದಲ್ಲಿ ನ್ಯಾಯ ಸಿಗಬೇಕಾದರೆ ಪ್ರಕಾಶ್ಚಂದ್ರ ಅವರನ್ನೇ ಮುಂದುವರೆಸ ಬೇಕು ಎಂದು ಅವರು ಒತ್ತಾಯಿಸಿದರು.

ಪ್ರಕಾಶ್ಚಂದ್ರ ಶೆಟ್ಟಿ ಅವರನ್ನು ಒಂದು ವರ್ಷದ ಅವಧಿಗೆ ಕುಂದಾಪುರದಲ್ಲೇ ಮುಂದುವರೆಸಬೇಕೆಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕೂಡ ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ. ಈ ಸಂಬಂಧ ಜು.೧೦ರಂದು ತೀರ್ಥಹಳ್ಳಿಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಆದರೆ ಸಚಿವರು ಸರಿಯಾಗಿ ಸ್ಪಂದಿಸದೆ ಉಡಾಫೆಯಿಂದ ಪ್ರತಿಕ್ರಿಯಿಸಿದ್ದಾರೆ ಎಂದು ಅವರು ದೂರಿದರು.

ನಿಷ್ಠಾವಂತ, ಪ್ರಾಮಾಣಿಕ ಅಧಿಕಾರಿಯಾಗಿರುವ ಪ್ರಕಾಶ್ಚಂದ್ರ ಶೆಟ್ಟಿ, ಕಳೆದ ನಾಲ್ಕು ವರ್ಷಗಳಲ್ಲಿ ಸುಮಾರು ೩೫ ವಿಶೇಷ ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆಯಾಗಿದೆ. ನಿಷ್ಠಾವಂತ ಅಧಿಕಾರಿಗಳಿಗೆ ಬೆಲೆ ಇಲ್ಲವಾದರೆ ಇವರು ಯಾರಿಗೂ ನ್ಯಾಯ ಕೊಡುವುದಕ್ಕೆ ಗೃಹ ಸಚಿವರಾಗಿರಬೇಕು. ನ್ಯಾಯ ಕೊಡಲು ಸಾಧ್ಯ ವಾಗದಿದ್ದರೆ ರಾಜೀನಾಮೆ ಕೊಡಲಿ. ಅಂತಹ ಸ್ಥಾನದಲ್ಲಿರಲು ಅವರು ನಾಲಾ ಯಕ್ಕು ಎಂದು ಅವರು ಕಟುವಾಗಿ ಟೀಕಿಸಿದರು.

ಅವಳಿ ಕೊಲೆ ಪ್ರಕರಣದ ತೀರ್ಪು ಬರುವವರೆಗೆ ಪ್ರಕಾಶ್ಚಂದ್ರ ಶೆಟ್ಟಿ ಅವರ ವರ್ಗಾವಣೆ ರದ್ದುಗೊಳಿಸಿ, ಅವರನ್ನು ಈ ಸ್ಥಳದಲ್ಲಿಯೇ ಮುಂದುವರೆಸಬೇಕು. ಒಂದು ವೇಳೆ ನ್ಯಾಯ ಸಿಗದಿದ್ದರೆ ಮುಂದಿನ ವಾರ ಬೆಂಗಳೂರಿನ ವಿಧಾನ ಸೌಧದ ಎದುರಿನ ಗಾಂಧಿ ಪ್ರತಿಮೆಯ ಮುಂದೆ ನೊಂದ ತಾಯಂದಿರು ಹಾಗೂ ಮಕ್ಕಳು ಮತ್ತು ಸಾರ್ವಜನಿಕರು ಸೇರಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕೊಲೆಯಾದ ಭರತ್ ತಾಯಿ ಪಾರ್ವತಿ, ಜ್ಯೋತಿ ಉದಯ ಗಾಣಿಗ, ದಿನಕರ ಗಾಣಿಗ ಮೊದಲಾದವರು ಹಾಜರಿದ್ದರು.

‘ಸರಕಾರದ 5 ಲಕ್ಷ ಪರಿಹಾರ ಇನ್ನೂ ಸಿಕ್ಕಿಲ್ಲ’
ಉದಯ ಗಾಣಿಗ ಹತ್ಯೆಗೀಡಾದಾಗ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಶಿಫಾರಸ್ಸಿನ ಮೇರೆಗೆ ಸರಕಾರ ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಿತು. ಆದರೆ ಈವರೆಗೆ ಆ ಪರಿಹಾರ ಹಣ ಸಿಕ್ಕಿಲ್ಲ. ಅಲ್ಲದೆ ಒಬ್ಬ ಸಚಿವ ಕೂಡ ಅವರ ಮನೆಗೆ ಭೇಟಿ ನೀಡಿಲ್ಲ. ಈ ರೀತಿಯಾಗಿ ಅವರ ಮೇಲೆ ಕಾಣದ ಕೈಗಳು ಒತ್ತಡ ಹೇರುತ್ತಿದೆ ಎಂದು ದಿನೇಶ್ ಗಾಣಿಗ ಆರೋಪಿಸಿದರು.

ಕೊಲೆಯಾದ ಹರ್ಷ, ಪರಮೇಶ್ ಮೆಸ್ತರಿಗೆ ಸರಕಾರ ಪರಿಹಾರ ಹಣ ಘೋಷಣೆ ಮಾಡಿ ಕುಟುಂಬದವರಿಗೆ ನೀಡುತ್ತದೆ. ಆದರೆ ಇಲ್ಲಿ ಉದಯ ಗಾಣಿಗ ಕುಟುಂಬ ಏನು ತಪ್ಪು ಮಾಡಿದೆ. ಯಾವುದೇ ಮಂತ್ರಿ ಕೂಡ ಅವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿಲ್ಲ. ಯಾಕೆಂದರೆ ಇವರಿಗೆ ಇಲ್ಲಿ ರಾಜಕೀಯ ಬೇಳೆ ಬೇಯಿಸಲು ವಿಷಯ ಸಿಗುತ್ತಿಲ್ಲ. ಎಲ್ಲಿಯಾದರೂ ಮುಸ್ಲಿಮರು ಕೊಲೆ ಮಾಡುತ್ತಿದ್ದಾರೆ ಬರುತ್ತಿದ್ದಾರೇನು? ಆದರೆ ಇಲ್ಲಿ ಕೊಂದಿ ರುವುದು ಬಿಜೆಪಿಯವರೇ ಆಗಿದ್ದಾರೆ ಎಂದು ಅವರು ಟೀಕಿಸಿದರು.

"ಬೈಂದೂರು ಶಾಸಕರು ಒಂದು ಲಕ್ಷ ರೂ. ಪರಿಹಾರ ಘೋಷಣೆ ಮಾಡಿ ಒಂದು ವರ್ಷವಾದರೂ ಕೊಟ್ಟಿರಲಿಲ್ಲ. ಕೆಲವು ದಿನಗಳ ಹಿಂದೆ ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕೆ ಮೊನ್ನೆ ಬಂದು ಪರಿಹಾರ ಹಣ ನೀಡಿದ್ದಾರೆ. ಜಾಗದ ಹಕ್ಕುಪತ್ರ ಕೂಡ ಇನ್ನು ಕೂಡ ಮಾಡಿಕೊಟ್ಟಿಲ್ಲ"
-ಜ್ಯೋತಿ, ಉದಯ ಗಾಣಿಗರ ಪತ್ನಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X