ಬಂಟ್ವಾಳ; ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ವೈದ್ಯನ ಬಂಧನ

ಬಂಟ್ವಾಳ, ಜು.11: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯನಾಗಿರುವ ಮಾಣಿ ಮೂಲದ ಡಾ. ಅನುಷ್ ನಾಯಕ್ ಬಂಧಿತ ಅರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
14 ವರ್ಷದ ಬಾಲಕಿಗೆ ಆರೋಪಿ ಅನುಷ್ ನಾಯಕ್ ಲೈಂಗಿಕ ದೌರ್ಜನ್ಯ ನೀಡಿದ್ದಾನೆ ಎಂದು ಸಂತ್ರಸ್ತೆಯ ತಾಯಿ ದೂರು ನೀಡಿದ್ದಾರೆ.
ಪ್ರಕರಣದ ತನಿಖೆ ನಡೆಸಿದ ವಿಟ್ಲ ಪೊಲೀಸರು ವೆನ್ಲಾಕ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯನಾಗಿ ಕೆಲಸ ಮಾಡುತ್ತಿದ್ದ ಆರೋಪಿ ಡಾ. ಅನುಷ್ ನಾಯಕ್ ನನ್ನು ದಸ್ತಗಿರಿ ಮಾಡಿದ್ದಾರೆ.
Next Story