ಡಿಪ್ಲೋಮಾ ಪ್ರವೇಶಕ್ಕೆ ಅವಧಿ ವಿಸ್ತರಣೆ
ಉಡುಪಿ, ಜು.೧೧: ಕಾಪುವಿನ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳಿಗೆ ಕಡಿಮೆ ಪ್ರವೇಶ ಶುಲ್ಕದೊಂದಿಗೆ ಪ್ರವೇಶ ದಾಖಲಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ ೩೦ರವರೆಗೆ ವಿಸ್ತರಿಸಲಾಗಿದೆ.
ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸೆಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ.೩೫ ಅಂಕ ಪಡೆದಿರುವ ಅರ್ಹ ಅಭ್ಯರ್ಥಿಗಳು ಆಟೋಮೇಷನ್ ಅಂಡ್ ರೊಬೋಟಿಕ್ಸ್, ಕ್ಲೌಡ್ ಕಂಪ್ಯೂಟಿಂಗ್ ಅಂಡ್ ಬಿಗ್‌ಡೇಟಾ ಎಂಬ ಕೋರ್ಸುಗಳಲ್ಲಿ ಬಾಕಿ ಉಳಿದಿರುವ ಸೀಟುಗಳಿಗೆ ಸೂಕ್ತ ದಾಖಲಾತಿಗಳೊಂದಿಗೆ ನೇರವಾಗಿ ಸಂಸ್ಥೆಯಲ್ಲಿ ಆಫ್‌ಲೈನ್ ಮೂಲಕ ಪ್ರವೇಶ ಪಡೆಯಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಪಾಲಿಟೆಕ್ನಿಕ್, ಕಾಪು ಮೊ.ನಂ: ೯೪೮೦೭೭೩೮೭೦, ೮೦೫೦೦೧೫೫೯೨ ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story





