ಕೆಆರ್ ಎಸ್‍ನಿಂದ 75,000 ಕ್ಯೂಸೆಕ್ ನೀರು ಬಿಡುಗಡೆ: ಕಾವೇರಿ ನದಿಯಲ್ಲಿ ಪ್ರವಾಹ ಭೀತಿ

ಮಂಡ್ಯ, ಜು.11: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ (ಕೆಆರ್‍ಎಸ್) 75,000 ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದ್ದು, ಕಾವೇರಿ ನದಿಯಲ್ಲಿ ಪ್ರವಾಹ ಭೀತಿ ಉಂಟಾಗಿದೆ.
ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಜನದಿಯ ತಗ್ಗು ಪ್ರದೇಶದಲ್ಲಿರುವ ಹಾಗೂ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ.
ನದಿಯಲ್ಲಿ ಪ್ರವಾಹ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಶ್ರೀರಂಗಪಟ್ಟಣಕ್ಕೆ ತೆರಳಿ ಪರಿಶೀಲಿಸಿದ ಜಿಲ್ಲಾಧಿಕಾರಿ ಎಸ್.ಅಶ್ವತಿ, ನಿಮಿಷಾಂಭ ದೇಗುಲ, ಸ್ನಾನಘಟ್ಟ, ವೆಲ್ಲೆಸ್ಲಿ ಸೇತುವೆ, ಗಂಜಾಂ, ಗೊಸಾಯ್ ಘಾಟ್ ಹಾಗೂ ಇತರೆ ಜಲಾವೃತಗೊಳ್ಳುವ ಪ್ರದೇಶಗಳಿಗೆ ಬ್ಯಾರಿಕೇಡ್, ಸೂಚನಾ ಫಲಕಗಳನ್ನು ಅಳವಡಿಸಿ ಪ್ರವಾಸಿಗರು ಹಾಗೂ ಸ್ಥಳೀಯರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಸೂಚಿಸಿದರು.







