ಜು.12ರಿಂದ ಮುಖ್ಯಮಂತ್ರಿ ಬೊಮ್ಮಾಯಿ ದ.ಕ. ಜಿಲ್ಲಾ ಪ್ರವಾಸ

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜು.12ರಂದು ದ.ಕ.ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಜು.12ರ ಮಧ್ಯಾಹ್ನ 2.30ಕ್ಕೆ ಮಡಿಕೇರಿಯಿಂದ ರಸ್ತೆ ಮೂಲಕ ಸುಳ್ಯ ಮಾರ್ಗವಾಗಿ ಆಗಮಿಸಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸುವರು. ರಾತ್ರಿ 7.30ಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಉಡುಪಿಗೆ ತೆರಳುವರು.
ಜು.13ರ ಸಂಜೆ 6.30ಕ್ಕೆ ಉಡುಪಿಯಿಂದ ರಸ್ತೆ ಮಾರ್ಗವಾಗಿ ಹೊರಟು ರಾತ್ರಿ 7.45ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿಯ ಪ್ರಕಟನೆ ತಿಳಿಸಿದೆ.
Next Story





