Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಳೆಯಿಂದ ಹಾನಿಗೊಳಗಾದ ಭತ್ತದ ಬೆಳೆಗೆ...

ಮಳೆಯಿಂದ ಹಾನಿಗೊಳಗಾದ ಭತ್ತದ ಬೆಳೆಗೆ ಶೀಘ್ರ ಪರಿಹಾರ ಒದಗಿಸಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ11 July 2022 9:19 PM IST
share
ಮಳೆಯಿಂದ ಹಾನಿಗೊಳಗಾದ ಭತ್ತದ ಬೆಳೆಗೆ ಶೀಘ್ರ ಪರಿಹಾರ ಒದಗಿಸಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೂಚನೆ

ಉಡುಪಿ : ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಭಿತ್ತನೆ ಮಾಡಿದ ಭತ್ತದ ಬೆಳೆಗೆ ಹಾನಿಯಾಗಿದ್ದು, ರೈತರಿಗೆ ಹಾನಿಯ ಮೊತ್ತವನ್ನು ಶೀಘ್ರದಲ್ಲಿಯೇ ಪಾವತಿಸಬೇಕು. ಅಲ್ಲದೇ ಅವರು ಮತ್ತೊಮ್ಮೆ ಭಿತ್ತನೆ ಮಾಡಲು ಸಾಧ್ಯವಾಗುವಂತೆ ಅಗತ್ಯಕ್ಕನುಗುಣವಾಗಿ ಬಿತ್ತನೆ ಬೀಜವನ್ನು ಸಮರ್ಪಕವಾಗಿ ವಿತರಣೆ ಮಾಡಲು ವ್ಯವಸ್ಥೆ ಮಾಡುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸೂಚನೆಗಳನ್ನು ನೀಡಿದ್ದಾರೆ.

ಸೋಮವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಕೋರ್ಟ್‌ಹಾಲ್‌ನಲ್ಲಿ ನಡೆದ, ಜಿಲ್ಲೆಯ ಪ್ರಾಕೃತಿಕ ವಿಕೋಪ ಸಂಬಂಧಿಸಿದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಜೂನ್ ತಿಂಗಳ ವಾಡಿಕೆ ಮಳೆಗಿಂತ ಶೇ.೩೧ರಷ್ಟು ಕಡಿಮೆ ಮಳೆಯಾಗಿ ಜುಲೈ ೧ರಿಂದ ಈವರೆಗೆ ವಾಡಿಕೆ ಮಳೆಗಿಂತ ಶೇ.೧೩೬ರಷ್ಟು ಹೆಚ್ಚುವರಿ ಮಳೆಯಾಗಿದೆ. ಕಳೆದ ತಿಂಗಳ ಕುಂಠಿತ ಮಳೆಯಿಂದಾಗಿ ಭಿತ್ತನೆ ಕಾರ್ಯಗಳು ನಿಗದಿತ ಪ್ರಮಾಣದಲ್ಲಿ ನಡೆಯದೇ ಜೂನ್ ಕೊನೆಯ ವಾರದಲ್ಲಿ ಹಾಗೂ ಜುಲೈ ಮೊದಲ ವಾರದಲ್ಲಿ ಭಿತ್ತನೆ ಕಾರ್ಯಗಳು ಚುರುಕುಗೊಂಡಿದ್ದವು. ಇದುವರೆಗೆ ೧೩,೫೨೬ ಹೆಕ್ಟೇರ್‌ನಲ್ಲಿ ಭಿತ್ತನೆ ಆಗಿದ್ದು, ಕಳೆದ ೪-೫ ದಿನಗಳಿಂದ ಸುರಿದ ಹೆಚ್ಚಿನ ಮಳೆಯಿಂದಾಗಿ ಅಂದಾಜು ೧೩೦೦ ಹೆಕ್ಟೇರ್‌ಗೂ ಅಧಿಕ ಬೆಳೆಹಾನಿ ಉಂಟಾಗಿದೆ ಎಂದರು.

ಮಳೆಯ ಪ್ರಮಾಣ ತಗ್ಗಿದ ನಂತರ ಬೆಳೆಹಾನಿಯನ್ನು ನಿಖರವಾಗಿ ಗುರುತಿಸಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಪರಿಹಾರವನ್ನು ಒದಗಿಸುವುದರ ಜೊತೆಗೆ ಸ್ಥಳೀಯವಾಗಿ ಬೇಡಿಕೆ ಇರುವ ಎಂ.ಓ.೪ ಭಿತ್ತನೆ ಬೀಜವನ್ನು ರೈತರಿಗೆ ಸಹಾಯಧನದ ಅಡಿಯಲ್ಲಿ ವಿತರಣೆ ಮಾಡುವಂತೆ ಶೋಭಾ ತಿಳಿಸಿದರು.

ಜಿಲ್ಲೆಯಲ್ಲಿ ಮಳೆಯಿಂದಾಗಿ ಕಡಲಕೊರೆತ ಉಂಟಾಗಿ ಸಮುದ್ರ ತೀರದಲ್ಲಿರುವ ಮೀನುಗಾರರಲ್ಲಿ ಆತಂಕ ಉಂಟಾಗಿದೆ. ಕಡಲ ಕೊರೆತ ಉಂಟಾಗದಂತೆ ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳಲು ಮುಂದಾಗಬೇಕು. ಪ್ರಸ್ತುತ ಎನ್.ಡಿ.ಆರ್.ಎಫ್ ನಿಯಮಾವಳಿಯಲ್ಲಿ ಕಡಲಕೊರೆತ ಕಾಮಗಾರಿ ಗಳಿಗೆ ಅವಕಾಶವಿರುವುದಿಲ್ಲ. ಇದನ್ನು ಅದರ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿ ಮಾಹಿತಿ ನೀಡಿದಲ್ಲಿ ಈ ಬಗ್ಗೆ ಕೇಂದ್ರ ಸರ್ಕಾರ ಮಟ್ಟದಲ್ಲಿ ಚರ್ಚಿಸಿ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದರು.

ಅತಿಯಾದ ಮಳೆಯಿಂದಾಗಿ ರಸ್ತೆಗಳು, ಶಾಲೆಗಳು, ಅಂಗನವಾಡಿ, ಸರ್ಕಾರಿ ಕಟ್ಟಡಗಳು, ಸೇತುವೆಗಳು ಸೇರಿದಂತೆ ಅನೇಕ ಶಾಶ್ವತ ಕಾಮಗಾರಿಗಳಿಗೆ ಹಾನಿ ಉಂಟಾಗಿದ್ದು, ಇದರ ಹಾನಿಯ ಮೊತ್ತವನ್ನು ನಿಖರವಾಗಿ ಗುರುತಿಸಿ ಸರ್ಕಾರಕ್ಕೆ ವರದಿ ನೀಡಬೇಕೆಂದು ಸೂಚನೆ ನೀಡಿದರು. ಗ್ರಾಮೀಣ ಭಾಗದ ರಸ್ತೆಗಳನ್ನು ಜಿಲ್ಲಾ ಪಂಚಾಯತ್ ರಸ್ತೆಗಳನ್ನಾಗಿ ಮೇಲ್ದರ್ಜೆಗೆ ಏರಿಸಿದಲ್ಲಿ ಶೀಘ್ರದಲ್ಲಿ ದುರಸ್ತಿಗೆ ಅನುಕೂಲವಾಗಲಿದೆ ಎಂದರು.

ಗ್ರಾಮೀಣ ಭಾಗದಲ್ಲಿ ಮೊಬೈಲ್ ಸಿಗ್ನಲ್‌ಗಳು ಸಿಗುತ್ತಿಲ್ಲ ಎಂಬ ದೂರುಗಳು ಹೆಚ್ಚಾಗಿ ಕೇಳಿ ಬರುತ್ತಿವೆ. ಇದಕ್ಕೆ ಮುಖ್ಯಕಾರಣ ಟವರ್‌ಗಳಿಗೆ ವಿದ್ಯುಚ್ಛಕ್ತಿ ಸರಬರಾಜಿನ ಕೊರತೆ. ಇದಕ್ಕೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮೆಸ್ಕಾಂ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ  ಮುಂದಾಗಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿಯ ಬಾಕಿ ಉಳಿದ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು. ಜಿಲ್ಲಾಡಳಿತ ದಿಂದ ಗುರುತಿಸಲಾಗಿರುವ ಅಪಘಾತ ಸ್ಥಳಗಳಲ್ಲಿ ವೈಜ್ಞಾನಿಕ ರೀತಿಯಲ್ಲಿ ಕಾಮಗಾರಿಗಳನ್ನು ಕೈಗೊಂಡು ವಾಹನಗಳು ಸುರಕ್ಷಿತವಾಗಿ ಚಾಲನೆ ಆಗುವಂತೆ ನೋಡಿಕೊಳ್ಳಬೇಕು. ಕಾಲಕಾಲಕ್ಕೆ ರಸ್ತೆ ನಿರ್ವಹಣೆ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಅವರು ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ವೀಣಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X