Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. 16 ಅಧಿಕಾರಿಗಳು, 7 ಗುತ್ತಿಗೆದಾರರ...

16 ಅಧಿಕಾರಿಗಳು, 7 ಗುತ್ತಿಗೆದಾರರ ವಿರುದ್ಧ ತನಿಖೆಗೆ ಆದೇಶ

► ನೀರಾವರಿ ಯೋಜನೆಗಳಲ್ಲಿ ನಕಲಿ ದಾಖಲೆ ಸೃಷ್ಟಿ ► ಸರಕಾರಕ್ಕೆ 28.35 ಕೋಟಿ ರೂ. ನಷ್ಟ

ಜಿ.ಮಹಾಂತೇಶ್ಜಿ.ಮಹಾಂತೇಶ್12 July 2022 8:42 AM IST
share
16 ಅಧಿಕಾರಿಗಳು, 7 ಗುತ್ತಿಗೆದಾರರ ವಿರುದ್ಧ ತನಿಖೆಗೆ ಆದೇಶ

ಬೆಂಗಳೂರು: ರಾಜ್ಯದ ನಾಲ್ಕು ನೀರಾವರಿ ನಿಗಮಗಳ ವ್ಯಾಪ್ತಿಯಲ್ಲಿ ಬೋಗಸ್ ದಾಖಲೆ ಸೃಷ್ಟಿ, ಸಂಬಂಧಪಡದ ಕಾಮಗಾರಿ ನಿರ್ವಹಿಸಿರುವ ಗುತ್ತಿಗೆದಾರರಿಗೆ ಹಣ  ಪಾವತಿ, ಕಳಪೆ ಕಾಮಗಾರಿ, ಕಳಪೆ ಸಾಮಾಗ್ರಿ ಬಳಕೆ, ಕಾಮಗಾರಿ ಮಾಡದೇ ಬಿಲ್ ಬರೆದಿರುವುದು, ಅಧಿಕಾರ ದುರುಪಯೋಗ, ಕಾನೂನು ಉಲ್ಲಂಘನೆ, ಅಧಿಕ ಪರಿಹಾರ ಮೊತ್ತದ ಮೇಲೆ ಬಡ್ಡಿ ವಿಧಿಸದಿರುವುದು, ನಕಲಿ ಬಿಲ್, ಪೂರಕ ದಾಖಲೆ ಸೃಷ್ಟಿಸಿ  ಕಳೆದ 2 ವರ್ಷಗಳಲ್ಲಿ 874.44 ಕೋಟಿ ರೂ. ಅಕ್ರಮ, ಅವ್ಯವಹಾರ ನಡೆದಿರುವುದು ಇದೀಗ ಬಹಿರಂಗವಾಗಿದೆ.

 ಕೃಷ್ಣ ಜಲಭಾಗ್ಯ ನಿಗಮ, ಕಾವೇರಿ ನೀರಾವರಿ, ಕರ್ನಾಟಕ ನೀರಾವರಿ, ವಿಶ್ವೇಶ್ವರಯ್ಯ ಜಲ ನಿಗಮಗಳ ವ್ಯಾಪ್ತಿಯಲ್ಲಿ ಕಳೆದ 2 ವರ್ಷಗಳಲ್ಲಿ  ನಡೆದಿರುವ ಗಂಭೀರ ಸ್ವರೂಪದ ಅಕ್ರಮಗಳ ಕುರಿತು ತನಿಖೆ ನಡೆಸಲು ಜಲಸಂಪನ್ಮೂಲ ಇಲಾಖೆಯು 2020, 2021 ಮತ್ತು 2022ರಲ್ಲಿ ವಿಚಕ್ಷಣಾ ದಳಕ್ಕೆ ಆದೇಶ ಹೊರಡಿಸಿದೆ.

 2013-14ನೇ ಸಾಲಿನಿಂದ 2022ರ ಮೇ ತಿಂಗಳವರೆಗೆ ಜಲ ಸಂಪನ್ಮೂಲ ಇಲಾಖೆಯು ಹಲವು ಪ್ರಕರಣಗಳ ಕುರಿತಾದ ತನಿಖೆ ನಡೆಸುವ ಸಂಬಂಧ ವಿಚಕ್ಷಣಾ ದಳಕ್ಕೆ ಹೊರಡಿಸಿರುವ ಈ ಎಲ್ಲಾ ಆದೇಶಗಳನ್ನು 'ಣhe-ಜಿiಟe.iಟಿ' ಆರ್‌ಟಿಐ ಮೂಲಕ ಪಡೆದುಕೊಂಡಿದೆ.

 ಹಿಂದಿನ ಕಾಂಗ್ರೆಸ್ ಸರಕಾರ, ಜೆಡಿಎಸ್ ಮತ್ತು ಕಾಂಗ್ರೆಸ್ ಪಾಲುದಾರಿಕೆಯ ಸಮ್ಮಿಶ್ರ ಸರಕಾರದಲ್ಲಿ ಒಂದೆರಡು ಪ್ರಕರಣಗಳನ್ನಷ್ಟೇ ವಿಚಕ್ಷಣಾ ದಳಕ್ಕೆ ವಹಿಸಲಾಗಿದೆ. 2021 ಮತ್ತು 2022ರಲ್ಲಿ  ಚೆಕ್ ಡ್ಯಾಂ ನಿರ್ಮಾಣ ಸೇರಿದಂತೆ ಇನ್ನಿತರ ಕಾಮಗಾರಿಗಳಿಗೆ ಬಿಡುಗಡೆಯಾಗಿದ್ದ ಅನುದಾನದಲ್ಲಿ  ಒಟ್ಟು ಮೊತ್ತ 800 ಕೋಟಿ

ರೂ.ಗೂ ಹೆಚ್ಚು ಭ್ರಷ್ಟಾಚಾರ ನಡೆದಿರುವುದು ಆರ್‌ಟಿಐ ದಾಖಲೆಗಳಿಂದ ತಿಳಿದು ಬಂದಿದೆ.

ಕರ್ನಾಟಕ ನೀರಾವರಿ ನಿಗಮದ ಹಿಪ್ಪರಗಿ ಬ್ಯಾರೇಜ್ ಯೋಜನೆ (ಬೆಳಗಾವಿ) ವಿಭಾಗ, ತುಂಗಭದ್ರಾ ಎಡದಂಡೆ ಕಾಲುವೆ (ಮುನಿರಾಬಾದ್ ವಲಯ) ನೀರಾವರಿ ಯೋಜನಾ ವಿಭಾಗ (ಕಲಬುರಗಿ)ಗಳಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸರಕಾರಕ್ಕೆ ಒಟ್ಟು 28.35 ಕೋಟಿ ರೂ. ನಷ್ಟವಾಗಿತ್ತು. ಈ ಪ್ರಕರಣದಲ್ಲಿ ಮುಖ್ಯ ಲೆಕ್ಕಾಧಿಕಾರಿ ಅಜಿತ್‌ಕುಮಾರ್ ಹೆಗಡೆ, ಎಸ್.ಎನ್.ವರದರಾಜು  ಸೇರಿದಂತೆ ಒಟ್ಟು 16 ಮಂದಿ ಅಧಿಕಾರಿ, ನೌಕರರು ಮತ್ತು ಬಿ.ಜೆ. ಬುಡವಿ ಸೇರಿದಂತೆ ಒಟ್ಟು 7ಮಂದಿ ಗುತ್ತಿಗೆದಾರರ ವಿರುದ್ಧ ತನಿಖೆ ನಡೆಸಬೇಕು ಎಂದು ಜಲಸಂಪನ್ಮೂಲ ಇಲಾಖೆಯು 2021ರ ಡಿಸೆಂಬರ್ 10ರಂದು ವಿಚಕ್ಷಣಾ ದಳಕ್ಕೆ ವಹಿಸಿ ಆದೇಶಿಸಲಾಗಿದೆ.

 ಹಿಪ್ಪರಗಿ ಬ್ಯಾರೇಜ್ ನಾಲಾ (ಎಚ್‌ಬಿಸಿ) ವಿಭಾಗದಲ್ಲಿ ಯಾವುದೇ ಟೆಂಡರ್ ಕರೆಯದೇ, ಕಾಮಗಾರಿ ನಿರ್ವಹಿಸದೇ 8 ನಕಲಿ ಬಿಲ್ ಹಾಗೂ ಇತರೆ ಪೂರಕ ದಾಖಲೆ ಸೃಷ್ಟಿಸಿ 16.62 ಕೋಟಿ ರೂ. ಸರಕಾರದ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಆರೋಪಗಳು ಮೇಲ್ನೋಟಕ್ಕೆ ಕಂಡು ಬಂದಿದ್ದವು. ಈ ಪ್ರಕರಣದಲ್ಲಿ ಜಲಸಂ ಪನ್ಮೂಲ ಇಲಾಖೆಯ 5 ಅಧಿಕಾರಿ ನೌಕರರು ಭಾಗಿಯಾಗಿದ್ದಾರೆ. ಇವರನ್ನು ಅಮಾನತುಗೊಳಿಸಿ 2021ರ ನವೆಂಬರ್ 20ರಂದು ಆದೇಶ ಹೊರಡಿಸಿರುವುದು

ಆರ್‌ಟಿಐ ದಾಖಲೆಯಿಂದ ಗೊತ್ತಾಗಿದೆ.

ಅದೇ ರೀತಿ ತುಂಗಾಭದ್ರಾ ಎಡದಂಡೆ ಕಾಲುವೆ ವಿಭಾಗದಲ್ಲಿ 20 ನಕಲಿ/ಕೊಟ್ಟಿ ಬಿಲ್ ಸೃಷ್ಟಿಸಿ 11.73 ಕೋಟಿ ರೂ. ಮೊತ್ತದ ಸರಕಾರದ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿತ್ತು. 8 ಕಾಮಗಾರಿಗಳ ಬಿಲ್‌ಗಳು, ಎಂ ಬಿ ಪುಸ್ತಕ, ಡಿಬಿಆರ್ ಸಂಖ್ಯೆ, ಕರಾರು/ಟೆಂಡರ್ ಪುಸ್ತಕಗಳನ್ನು ಕಾರ್ಯಪಾಲಕ ಇಂಜಿನಿಯರ್ ಸಲ್ಲಿಸಿರಲಿಲ್ಲ.

 ಅಲ್ಲದೆ ಕಡತ, ಅಳತೆ ಪುಸ್ತಕ, ಮುಖ್ಯ ಇಂಜಿನಿಯರ್, ಅಧೀಕ್ಷಕ ಇಂಜಿನಿಯರ್ ಅವರ ಶಿಫಾರಸಿನ ಪತ್ರ, ಕರಾರು, ಟೆಂಡರ್ ಪುಸ್ತಕವನ್ನು ನಿರ್ವಹಿಸದೇ ಸಿಬಿಆರ್ ದಾಖಲಾಗಿತ್ತು. 5 ಕಾಮಗಾರಿಗಳ ಬಿಲ್‌ಗಳಲ್ಲಿ ಗುತ್ತಿಗೆದಾರರ ಸಹಿ ಇರಲಿಲ್ಲ. 8 ಕಾಮಗಾರಿಗಳ ಪೈಕಿ 6 ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅನುದಾನ ಬಿಡುಗಡೆಗೊಳಿಸಲು ಅವಶ್ಯ ಕವಾಗಿದ್ದ ಇಂಡೆಂಟ್‌ಗಳನ್ನು ಸಲ್ಲಿಸಿರಲಿಲ್ಲ. ಇನ್ನುಳಿದ 2 ಕಾಮಗಾರಿಗಳಿಗೆ ಇಂಡೆಂಟ್‌ಗಳನ್ನು ಸಲ್ಲಿಸಿದ್ದರೂ ಸಕ್ಷಮ ಪ್ರಾಧಿಕಾರದಿಂದ ಅನುದಾನ ಬಿಡುಗಡೆಯಾಗುವ ಮುನ್ನವೇ ಬಿಲ್ ಪಾವತಿಯಾಗಿತ್ತು. 8 ಕಾಮಗಾರಿಗಳ ಬಿಲ್‌ಗಳಲ್ಲಿ 5 ಬಿಲ್‌ಗಳು ಮಾತ್ರ ಲಭ್ಯವಿತ್ತು. ಇನ್ನು 3 ಬಿಲ್‌ಗಳು ಕಚೇರಿಯಲ್ಲಿ ಲಭ್ಯವಿರಲಿಲ್ಲ ಎಂಬುದು ಆರ್‌ಟಿಐ ದಾಖಲೆಗಳಿಂದ ತಿಳಿದು ಬಂದಿದೆ.

 ಈ ಪ್ರಕರಣದಲ್ಲಿ 16 ಮಂದಿ ಅಧಿಕಾರಿ, ನೌಕರರು ಮತ್ತು 6 ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು 2021ರ ನವೆಂಬರ್ 23ರಂದು ಪ್ರಸ್ತಾವ ಸಲ್ಲಿಸಿದ್ದರು.

‘ಯಾವುದೇ ಟೆಂಡರ್ ಕರೆಯದೇ ಹಾಗೂ ಯಾವುದೇ ಕಾಮಗಾರಿ ನಿರ್ವಹಿಸದೆಯೇ 28 ನಕಲಿ ಬಿಲ್ ಹಾಗೂ ಇತರೆ ಪೂರಕ ದಾಖಲೆಗಳನ್ನು ಸೃಷ್ಟಿಸಿ ಸುಮಾರು 28.35 ಕೋಟಿ ರೂ. ಸರಕಾರದ ಹಣವನ್ನು ದುರುಪಯೋಗಪಡಿಸಿಕೊಂಡಿರುವುದು ಸರಕಾರದ ಗಮನಕ್ಕೆ ಬಂದಿರುವುದರಿಂದ ಇದೇ ರೀತಿಯ ಅಕ್ರಮಗಳು ಕರ್ನಾಟಕ ನೀರಾವರಿ ನಿಗಮದ ಇನ್ನಿತರೆ ವಿಭಾಗೀಯ ಕಚೇರಿಗಳಲ್ಲಿಯೂ ನಡೆದಿರಬಹುದಾದ ಸಾಧ್ಯತೆ ಇದೆ. ಹೀಗಾಗಿ ಈ ನಿಗಮದ ವ್ಯಾಪ್ತಿಯಲ್ಲಿರುವ ಎಲ್ಗಲಾ ವಿಭಾಗ, ಅಧೀನ ಕಚೇರಿಗಳ ವ್ಯಾಪ್ತಿಯಲ್ಲಿ ಜರುಗಿರಬಹುದಾದ ಅವ್ಯವಹಾರದ ಕುರಿತಂತೆ ಸಮಗ್ರವಾಗಿ ಪರಿಶೀಲಿಸಿ ವಿವರವಾದ ತನಿಖೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಬೇಕು,’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

 ಅದೇ ರೀತಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ 59.46 ಕೋಟಿ ರೂ. ಮೊತ್ತದ ಕಾಮಗಾರಿ ನಿರ್ವಹಿಸಲು ಹೊರಡಿಸಿದ್ದ ಟೆಂಡರ್‌ನಲ್ಲಿಯೂ ಅಕ್ರಮ ನಡೆದಿತ್ತು.  ರ‌್ಹತೆ ಇಲ್ಲದಿದ್ದರೂ ಖೊಟ್ಟಿ ದಾಖಲೆ ಸೃಷ್ಟಿಸಿದ್ದ ಗುತ್ತಿಗೆದಾರರಿಗೆ   ಟೆಂಡರ್ ನಿರ್ವಹಿಸಲು ಮಂಜೂರು ಮಾಡಲಾಗಿತ್ತು. ಈ ಸಂಬಂಧ ಕಾರ್ಯಪಾಲಕ ಇಂಜಿನಿಯರ್ ರಮೇಶ್ ವಲ್ಯಾಪುರೆ ಎಂಬವರ ವಿರುದ್ಧ ತನಿಖೆ ನಡೆಸಲು 2022ರ ಎಪ್ರಿಲ್ 4ರಂದು ವಿಚಕ್ಷಣಾ ದಳಕ್ಕೆ ವಹಿಸಲಾಗಿತ್ತು.

 ಚಿಕ್ಕಮಗಳೂರು ಜಿಲ್ಲೆಯ ಶಿರ್ವಾಸೆ ಹೋಬಳಿಯ ಮಲ್ಲಂದೂರು ಅಭಿವೃದ್ಧಿ ಕಾಮಗಾರಿಗೆ ಆಹ್ವಾನಿಸಿದ್ದ 1,00,45,00 ರೂ. ಮೊತ್ತದ ಟೆಂಡರ್‌ನಲ್ಲಿಯೂ ಅಕ್ರಮ ನಡೆಸಲಾಗಿತ್ತು. ದಾವಣಗೆರೆ ಮೂಲದ ಬಿ.ಎಂ.ಜಗದೀಶ್ವರಸ್ವಾಮಿ ಎಂಬವರಿಗೆ ಟೆಂಡರ್ ನಿರ್ವಹಿಸಲು ಅನುಮತಿ ನೀಡಲಾಗಿತ್ತು. ಆದರೆ ಕಾಮಗಾರಿಯನ್ನು ಕರ್ನಾಟಕ ನೀರಾವರಿ ನಿಗಮದಿಂದ ನಿರ್ವಹಿಸದೇ ಇದ್ದರೂ ಟೆಂಡರ್ ಆಹ್ವಾನಿಸಿ ಗುತ್ತಿಗೆದಾರರಿಗೆ 1,0045,000 ರೂ. ಪಾವತಿ ಮಾಡಲಾಗಿತ್ತು. ಈ ಸಂಬಂಧ ವಕೀಲ ವಿನಯ್ ಎಂಬವರು ನೀಡಿದ್ದ ದೂರನ್ನಾಧರಿಸಿ ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಯತೀಶ್ಚಂದ್ರ ಮತ್ತು ಇತರ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು 2022ರ ಜೂನ್ 21ರಂದು ವಿಚಕ್ಷಣಾ ದಳಕ್ಕೆ ವಹಿಸಿ ಆದೇಶಿಸಲಾಗಿದೆ.

 ಕೃಷ್ಣಭಾಗ್ಯ ಜಲನಿಗಮ ವ್ಯಾಪ್ತಿಯಲ್ಲಿ 2019-20ರಲ್ಲಿ ಬಳಕೆಯಾಗದೇ ಉಳಿದಿದ್ದ 401.77 ಕೋಟಿ ರೂ. ಹಾಗೂ 2020-21ನೇ ಸಾಲಿನಲ್ಲಿ ಬಿಡುಗಡೆಯಾದ 384.86 ಕೋಟಿ ರೂ.ಗಳನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸಂಬಂಧಪಡದ ಇತರ ಕಾಮಗಾರಿಗಳಿಗಾಗಿ ಬಳಕೆ ಮಾಡಲಾಗಿತ್ತು. ಈ ಕಾಮಗಾರಿಗಳನ್ನು ಸ್ವಜಾತಿ ಮತ್ತು ಸಂಬಂಧಿ ಗುತ್ತಿಗೆದಾರರಿಗೆ ನೀಡಿ ನೂರಾರು ಕೋಟಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪದ ಮೇರೆಗೆ ಕೃಷ್ಣ ಭಾಗ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಪ್ರಭಾಕರ್ ಎಂ.ಚಿಣಿ ಎಂಬವರ ವಿರುದ್ಧ ತನಿಖೆ ನಡೆಸಲು 2022ರ ಫೆ.16ರಂದು ವಿಚಕ್ಷಣಾ ದಳಕ್ಕೆ ವಹಿಸಿ ಆದೇಶಿಸಿಲಾಗಿದೆ.

 ಕಾವೇರಿ ನೀರಾವರಿ ನಿಗಮದ ನಂ 3, ವಿಸಿ ನಾಲಾ ಉಪ ವಿಭಾಗ, ಮದ್ದೂರು, ಮಂಡ್ಯ ಮತ್ತು ಈ ವಿಭಾಗದ ವ್ಯಾಪ್ತಿಯಲ್ಲಿನ ಉಪ ವಿಭಾಗಗಳಲ್ಲಿ ಕಳಪೆ ಕಾಮಗಾರಿ, ಕಳಪೆ ಸಾಮಗ್ರಿಗಳ ಬಳಕೆ, ಕಾಮಗಾರಿ ಮಾಡದೇ ಬಿಲ್ ಬರೆದಿರುವುದು, ಅಧಿಕಾರ ದುರುಪಯೋಗ, ಕಾನೂನು ಉಲ್ಲಂಘನೆ ಆಗಿರುವ ಕುರಿತು ಕೆ.ಎಂ. ನಾಗೇಶ್ ಎಂಬವರು ನೀಡಿದ್ದ ದೂರನ್ನಾಧರಿಸಿ ತನಿಖೆ ನಡೆಸಲು 2014ರ ಮೇ 23ರಂದು ವಿಚಕ್ಷಣಾ ದಳಕ್ಕೆ ವಹಿಸಿ ಆದೇಶಿಸಿತ್ತು.

 ಅದೇ ರೀತಿ ಇದೇ ದೂರುದಾರ ಕಟ್ಟೇಪುರ ಎಡದಂಡೆ, ಬಲದಂಡೆ ಕಾಲುವೆ ನಾಲಾ ಆಧುನೀಕರಣ ಕಾಮಗಾರಿ, ಹಾರಂಗಿ ಬಲದಂಡೆ ನಾಲಾ ವಿಭಾಗ, ಹುಣಸೂರು ವಿಭಾಗದ ಫಿಕ್ಸೆಲ್ ಸರ್ವೇ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ಬಗ್ಗೆ ಸಲ್ಲಿಸಿದ್ದ ದೂರನ್ನಾಧರಿಸಿ 2015ರ ಜುಲೈ 25ರಂದು ವಿಚಕ್ಷಣಾ ದಳಕ್ಕೆ ವಹಿಸಿತ್ತು.

ಮಾಹಿತಿ ನೀಡದ ನಿಗಮ

ಕರ್ನಾಟಕ ನೀರಾವರಿ ನಿಗಮದ (ಧಾರವಾಡ) ಬಿಆರ್‌ಎಲ್‌ಬಿಸಿ ವ್ಯಾಪ್ತಿಯಲ್ಲಿ ಸರಕಾರದ ಆದೇಶ, ನಿಯಮಗಳನ್ನು ಪಾಲಿಸದ ಕಾರಣ ಸರಕಾರ ಮತ್ತು ನಿಗಮಕ್ಕೆ ನಷ್ಟವುಂಟಾಗಿತ್ತು. ಈ ಕುರಿತು ನೋಟೀಸ್, ಅರೆ ಸರಕಾರಿ ಪತ್ರ, ಜ್ಞಾಪನ ಪತ್ರಗಳನ್ನು ಬರೆದರೂ ಯಾವುದೇ ಮಾಹಿತಿ ಸಲ್ಲಿಸಿರಲಿಲ್ಲ. ಉದ್ದೇಶ ಪೂರ್ವಕವಾಗಿ ಉಪ ವಿಭಾಗದ ಉಗ್ರಾಣ ಶಾಖೆಯಲ್ಲಿನ ವ್ಯವಹಾರ ಮಾಹಿತಿ ಸಲ್ಲಿಸುವಲ್ಲಿ ವಿಫಲವಾಗಿದ್ದರಿಂದಾಗಿ ಜಲಸಂಪನ್ಮೂಲ ಇಲಾಖೆಯು 2018ರ ಡಿಸೆಂಬರ್ 3ರಂದು ವಿಚಕ್ಷಣಾ ದಳಕ್ಕೆ  ವಹಿಸಿತ್ತು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X