ಕಾಣಿಯೂರು | ಹೊಳೆಗೆ ಬಿದ್ದ ಕಾರು: ನೀರುಪಾಲಾಗಿದ್ದ ಓರ್ವನ ಮೃತದೇಹ ಪತ್ತೆ

ಕಡಬ, ಜು.12: ಕಾಣಿಯೂರು ಸಮೀಪದ ಬೈತ್ತಡ್ಕ ಹೊಳೆಗೆ ಕಾರು ಬಿದ್ದು ನಾಪತ್ತೆಯಾಗಿದ್ದ ಇಬ್ಬರು ಯುವಕರ ಪೈಕಿ ಓರ್ವನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.
ಘಟನೆ ನಡೆದ ಸ್ಥಳದಿಂದ 200 ಮೀಟರ್ ದೂರದ ಮರಕ್ಕಡ ಹೊಳೆಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿದೆ. ಹೊಳೆಯ ಬದಿಯಲ್ಲಿದ್ದ ಮರದ ದಿಮ್ಮಿಯಲ್ಲಿ ಜೋತುಬಿದ್ದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ.
ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಜು.9ರಂದು ತಡರಾತ್ರಿ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಉಕ್ಕಿ ಹರಿಯುತ್ತಿರುವ ಹೊಳೆಗೆ ಬಿದ್ದ ಪರಿಣಾಮ ವಿಟ್ಲದ ಕುಂಡಡ್ಕ ನಿವಾಸಿ ಧನುಷ್ (26) ಹಾಗೂ ಕನ್ಯಾನ ನಿವಾಸಿ ಧನಂಜಯ ಎಂಬವರು ನೀರುಪಾಲಾಗಿ ನಾಪತ್ತೆಯಾಗಿದ್ದರು.
Next Story