Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿಗಮ -ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷರ...

ನಿಗಮ -ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಾತಿ ರದ್ದುಗೊಳಿಸಿದ ರಾಜ್ಯ ಸರಕಾರ

ವಾರ್ತಾಭಾರತಿವಾರ್ತಾಭಾರತಿ12 July 2022 4:21 PM IST
share
ನಿಗಮ -ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಾತಿ ರದ್ದುಗೊಳಿಸಿದ ರಾಜ್ಯ ಸರಕಾರ

ಬೆಂಗಳೂರು, ಜು.12: ರಾಜ್ಯ ಸಚಿವ ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆ ಪದೇ ಪದೇ ಮುಂದೂಡಲ್ಪಡುತ್ತಿರುವುದು, ಸಚಿವ ಸ್ಥಾನದ ಆಕಾಂಕ್ಷಿಗಳ ನಿರೀಕ್ಷೆಗಳಿಗೆ ತಣ್ಣೀರು ಎರೆಚಿದಂತಾಗುತ್ತಿದೆ. ಈ ಬೆಳವಣಿಗೆಗಳ ನಡುವೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯಮಟ್ಟದ ಬಹುತೇಕ ಎಲ್ಲ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಉಪಾಧ್ಯಕ್ಷರ ನಾಮ ನಿರ್ದೇಶನವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ವಿಳಂಬ ಆಗುತ್ತಿರುವುದರಿಂದ ಮಹತ್ವದ ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ಶಾಸಕರನ್ನು ನೇಮಕ ಮಾಡಲು ಮುಖ್ಯಮಂತ್ರಿ ಚಿಂತನೆ ನಡೆಸಿದ್ದು, ಈಗಾಗಲೆ ಯಾವ ಯಾವ ಶಾಸರನ್ನು ನೇಮಕ ಮಾಡಬೇಕು ಎಂಬ ಪಟ್ಟಿಯನ್ನು ಸಿದ್ಧಪಡಿಸಿ, ಹೈಕಮಾಂಡ್ ಒಪ್ಪಿಗೆಗಾಗಿ ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ರಾಜ್ಯ ಪಶ್ಚಿಮಘಟ್ಟಗಳ ಸಂರಕ್ಷಣ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಖ್ತಾರ್ ಹುಸೇನ್ ಪಠಾಣ್, ರಾಜ್ಯ ವಿದ್ಯುತ್ ಕಾರ್ಖಾನೆ ನಿಯಮಿತ ತಮ್ಮೇಶ ಗೌಡ ಎಚ್.ಸಿ. ಅವರ ನಾಮ ನಿರ್ದೇಶನ ರದ್ದುಗೊಳಿಸಲಾಗಿದೆ.

ಮೈಸೂರು ಎಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಸಂತೋಷ್ ರೈ ಬೋಲಿಯಾರ್, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಎನ್.ನಂದೀಶ್ ಹಂಚೆ, ರಾಜ್ಯ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ರಾಜ್ಯಮಟ್ಟದ ಸಾವಯವ ಕೃಷಿ ಉತ್ಪನ್ನ ಮಟ್ಟದ ಅಧಿಕಾರಯುಕ್ತ ಸಮಿತಿ ಆನಂದ ಆ ಶ್ರೀ ಉಪ್ಪಳ್ಳಿ, ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಲಿಂಗರಡ್ಡಿ ಗೌಡ.

ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮಗೌಡ ಬೆಳಗುರ್ಕಿ, ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಕಾವೇರಿ ಜಲಾನಯನ ಯೋಜನೆ(ಕಾಡಾ-ಮೈಸೂರು) ಅಧ್ಯಕ್ಷ ಎನ್.ಶಿವಲಿಂಗಯ್ಯ, ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆ(ಕಾಡಾ-ಭೀಮರಾಯನಗುಡಿ ಕಲಬುರಗಿ) ಅಧ್ಯಕ್ಷ ಶರಣಪ್ಪ ತಳವಾರ, ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರ ಯೋಜನೆ(ಕಾಡಾ) ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಬಿ.ಎಚ್.ಎಂ. ಅವರ ನಾಮ ನಿರ್ದೇಶನ ರದ್ದುಗೊಳಿಸಲಾಗಿದೆ.

ರಾಜ್ಯ ದ್ರಾಕ್ಷಿರಸ ಮಂಡಳಿ ಅಧ್ಯಕ್ಷ ಕಾಂತಿಲಾಕ್ ಕೇವಲ ಚಂದ್ರ ಬಸ್ಸಾಲಿ, ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜ, ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ವಿಶ್ವನಾಥ್ ಅಮರ ಶೆಟ್ಟಿ, ರಾಜ್ಯ ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷ ಎಸ್.ಆರ್.ಗೌಡ, ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ್ ಎಸ್.ಅಲ್ಲಾಪುರ.

ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಂ.ಜಯದೇವ, ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಶರಣು ಭೀಮಣ್ಣ ತಳ್ಳಿಕೇರಿ, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ(ಜಂಗಲ್ ಲಾಡ್ಜಸ್ ಅಂಡ್ ರೆಸಾಟ್ರ್ಸ್) ಅಧ್ಯಕ್ಷ ಅಣ್ಣಪ್ಪ, ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಕೆ.ಹೇಮಂತ ಕುಮಾರ್ ಗೌಡ.

ರಾಜ್ಯ ಮಹಿಳಾ ಅಭಿವೃದ್ಧಿ ಹಾಗೂ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ನಿಗಮದ ಅಧ್ಯಕ್ಷೆ ಶಶಿಕಲಾ ವಿ.ಟೆಂಗಳಿ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಅಂತೋಣಿ ಸಬಾಸ್ಟೀನ್, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು, ಬಾಲ ಭವನ ಸೊಸೈಟಿ ಅಧ್ಯಕ್ಷೆ ಚಿಕ್ಕಮ್ಮ ಬಸವರಾಜ, ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ.

ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ(ಚಿತ್ರದುರ್ಗ) ಅಧ್ಯಕ್ಷ ಜೀವನಮೂರ್ತಿ, ರಾಜ್ಯ ಮಾರುಕಟ್ಟೆ ಕನ್ಸಲ್ಟೆಂಟ್ಸ್ ಮತ್ತು ಏಜೆನ್ಸಿಸ್ ಅಧ್ಯಕ್ಷ ಮುನಿಕೃಷ್ಣ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ, ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಎನ್.ಆರ್.ಕೃಷ್ಣಪ್ಪಗೌಡ,  ಮೈಸೂರು ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ಅಧ್ಯಕ್ಷ ಎಸ್.ಲಿಂಗಮೂರ್ತಿ.

ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಕೆ.ಮಂಜುನಾಥ್, ಮೈಸೂರು ಸಕ್ಕರೆ ಕಾರ್ಖಾನೆ(ಮಂಡ್ಯ) ಅಧ್ಯಕ್ಷ ಶಿವಲಿಂಗೇಗೌಡ, ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್.ಹನುಮಂತಪ್ಪ, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ.ರಾಮಚಂದ್ರಪ್ಪ, ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬು ಪತ್ತಾರ್.

ರಾಜ್ಯ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ, ಡಿ.ದೇವರಾಜ ಅರಸು ಸಂಶೋಧನಾ ಸಂಸ್ಥೆ ಅಧ್ಯಕ್ಷ ಡಾ.ಆರ್.ಅನುರಾಧಾ ಪಾಟೀಲ್, ರಾಜ್ಯ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಕೆ.ರತ್ನಪ್ರಭಾ, ಮೈಸೂರು ಪೈಂಟ್ಸ್ ಮತ್ತು ವಾರ್ನಿಸ್ ನಿಯಮಿತದ ಅಧ್ಯಕ್ಷ ಎನ್.ವಿ.ಪಣೀಶ್, ರಾಜ್ಯ ವಿಕಾಸ ಅಕಾಡೆಮಿ(ಧಾರವಾಡ) ಅಧ್ಯಕ್ಷ ಈರಣ್ಣ ಶಿ.ಜಡಿ ಹಾಗೂ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷೆ ಶೃತಿ ಅವರ ನಾಮ ನಿರ್ದೇಶನವನ್ನು ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ.

ಉಪಾಧ್ಯಕ್ಷರು: ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಕೆ.ರೇವಣಪ್ಪ ಕೋಳಗಿ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಕೆ.ಪಿ.ಪುರುಷೋತ್ತಮ್, ರಾಜ್ಯ ಜವಳಿ ಮೂಲಸೌಲಭ್ಯ(ವಿದ್ಯುತ್‍ಮಗ್ಗಗಳ) ಅಭಿವೃದ್ಧಿ ನಿಗಮ ಬೆಳಗಾವಿ ಉಪಾಧ್ಯಕ್ಷ ನೀಲಕಂಠ ಬಿ.ಮಾಸ್ತರಮರಡಿ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್.ದತ್ತಾ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಎಸ್.ಎನ್.ಈಶ್ವರಪ್ಪ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಎಂ.ಆರ್.ವೆಂಕಟೇಶ್ ಅವರ ನಾಮ ನಿರ್ದೇಶನವನ್ನು ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X