ಬ್ರಹ್ಮರಕೂಟ್ಲು ಟೋಲ್ ಗೇಟ್ ಪ್ರತಿಭಟನೆ ತಾತ್ಕಾಲಿಕವಾಗಿ ಕೈ ಬಿಟ್ಟ ಎಸ್.ಡಿ.ಪಿ.ಐ.
ಬಂಟ್ವಾಳ, ಜು.12: "ಬ್ರಹ್ಮರಕೂಟ್ಲು ಟೋಲ್ ಗೆಟ್ ನಿಂದ ಮುಕ್ತಿ ನೀಡಿ" ಎಂದು ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗಮನದ ವೇಳೆ ನಡೆಸಲು ಉದ್ದೇಶಿಸಿದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಕೈ ಬಿಡಲಾಗಿದೆ ಎಂದು ಎಸ್.ಡಿ.ಪಿ.ಐ. ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ತಿಳಿಸಿದೆ.
ಬ್ರಹ್ಮರಕೂಟ್ಲು ಟೋಲ್ ಗೇಟ್ ಅವೈಜ್ಞಾನಿಕ ಹಾಗೂ ಅವ್ಯವಸ್ಥೆಯಿಂದ ಕೂಡಿದ್ದು, ಇತ್ತೀಚಿಗೆ ಸುರಿದ ಮಳೆಯಿಂದ ಬೂತ್ ಇರುವ ರಸ್ತೆಯಲ್ಲಿ ಹೊಂಡಗಳು ಬಿದ್ದಿವೆ. ಈ ಬಗ್ಗೆ ಮುಖ್ಯಮಂತ್ರಿಯ ಗಮನ ಸೆಳೆಯಲು ಇಂದು ಸಂಜೆ ಬಂಟ್ವಾಳದಿಂದ ಮಂಗಳೂರಿಗೆ ಮುಖ್ಯಮಂತ್ರಿ ತೆರಳುವ ವೇಳೆ ಟೋಲ್ ಗೇಟ್ ನಲ್ಲಿ ಪ್ರತಿಭಟನೆ ನಡೆಸಲು ಪಕ್ಷ ನಿರ್ಧರಿಸಿತ್ತು.
ಪಕ್ಷದ ನಾಯಕರೊಂದಿಗೆ ಪೊಲೀಸ್ ಅಧಿಕಾರಿಗಳು ಮಾತುಕತೆ ನಡೆಸಿ ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದ್ದು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಟೋಲ್ ಗೇಟ್ ನಲ್ಲಿ ರಸ್ತೆ ಗುಂಡಿಗಳನ್ನು ತಾತ್ಕಾಲಿಕ ದುರಸ್ಥಿ ಕಾರ್ಯ ಕೈಗೊಂಡಿದ್ದರಿಂದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಕೈಬಿಡಲಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.





