ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಉಡುಪಿ, ಜು.೧೨: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆ ಯಡಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಕ್ಲಿನಿಕಲ್ ಸೈಕೋಲಜಿಸ್ಟ್, ಪಿ ಆ್ಯಂಡ್ ಓ ಅಭಿಯಂತರ ಹಾಗೂ ಕಂಪ್ಯೂಟರ್ ಅಪರೇಟರ್‌ನ ತಲಾ ಒಂದು ಹುದ್ದೆ ಗಳಿಗೆ ಗೌರವಧನದ ಆಧಾರದಲ್ಲಿ ಕರ್ತವ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿ ಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕ್ಲಿನಿಕಲ್ ಸೈಕೋಲಜಿಸ್ಟ್ ಹುದ್ದೆಗೆ ಎಂ.ಎ ಇನ್ ಕ್ಲಿನಿಕಲ್ ಸೈಕೋಲಜಿ, ಪಿ ಆ್ಯಂಡ್ ಓ ಅಭಿಯಂತರರ ಹುದ್ದೆಗೆ ಪಿ ಆ್ಯಂಡ್ ಓ ಎಂಜಿನಿಯರಿಂಗ್ ಪದವಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ ಹಾಗೂ ಕಂಪ್ಯೂಟರ್ ಅಪರೇಟರ್ ಹುದ್ದೆಗೆ ಪಿಯುಸಿ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜುಲೈ ೨೭ ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್‌ಕ್ರಾಸ್ ಭವನ, ಅಜ್ಜರಕಾಡು, ಉಡುಪಿ ದೂರವಾಣಿ ಸಂಖ್ಯೆ :೦೮೨೦-೨೫೩೩೩೭೨ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.