ಕಾಪು; ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕೂಲಿ ಕಾರ್ಮಿಕ ಹೃದಯಾಘಾತದಿಂದ ಮೃತ್ಯು
ಕಾಪು: ಮಂಗಳೂರಿನಿಂದ ಗುಲ್ಬರ್ಗಕ್ಕೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಲಸೆ ಕಾರ್ಮಿಕರೊಬ್ಬರು ಹೃದಯಾಘಾತ ದಿಂದ ಮೃತಪಟ್ಟ ಘಟನೆ ಜು.೧೧ ರಂದು ರಾತ್ರಿ ಕಾಪುವಿನ ಉದ್ಯಾವರ ಸಮೀಪ ನಡೆದಿದೆ.
ಮೃತರನ್ನು ಗದಗ ಜಿಲ್ಲೆಯ ರೋಣ ತಾಲೂಕಿನ ಕನಕಪ್ಪದಂಡಿನ(೩೮) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿಗೆ ಕೂಲಿ ಕೆಲಸಕ್ಕೆಂದು ಬಂದು ಪಂಪ್‌ವೆಲ್ ಬಳಿ ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡಿದ್ದರು.
ಮಳೆಯ ಕಾರಣಕ್ಕೆ ಸ್ವಂತ ಊರಿನಲ್ಲಿ ಕೃಷಿ ಕೆಲಸ ಮಾಡಲು ಇವರು ಬಸ್ಸಿನಲ್ಲಿ ಹೊರಟಿ ದ್ದರು. ಮಾರ್ಗ ಮಧ್ಯೆ ಇವರು ಹೃದಯಾಘಾತದಿಂದ ಮೃತಪಟ್ಟರು.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





