Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಳ್ಯಕ್ಕೆ ಮುಖ್ಯಮಂತ್ರಿ ಬಸವರಾಜ...

ಸುಳ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ

ವಾರ್ತಾಭಾರತಿವಾರ್ತಾಭಾರತಿ12 July 2022 9:34 PM IST
share
ಸುಳ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ

ಸುಳ್ಯ: ಮಳೆಹಾನಿ ವೀಕ್ಷಣೆಗಾಗಿ ದಕ್ಷಿಣ ಕನ್ನಡ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಗಳವಾರ ಸುಳ್ಯ ನಿರೀಕ್ಷಣಾ ಮಂದಿರಕ್ಕೆ ಭೇಟಿ ನೀಡಿದರು. 

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು ಸಚಿವರುಗಳು ಹಾಗು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಸುಳ್ಯ ತಾಲೂಕಿನಲ್ಲಿ ಉಂಟಾಗಿರುವ ಮಳೆ ಹಾನಿ ಮತ್ತು ಭೂ ಕಂಪನದ ಬಗ್ಗೆ ಸಚಿವ ಎಸ್. ಅಂಗಾರ ಅವರು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವಿವಿಧ ಬೇಡಿಕೆಗಳ ಮನವಿಯನ್ನು ಸಲ್ಲಿಸಲಾಯಿತು. ಜಿಲ್ಲೆಯ ಅಡಿಕೆ ಬೆಳೆಗಾರರ ಹಳದಿ ರೋಗ ಸಮಸ್ಯೆ ನಿವಾರಣೆಗೆ ಬಜೆಟ್‍ನಲ್ಲಿ ಘೋಷಣೆಯಾದ 25 ಕೋಟಿ ಧನಸಹಾಯ ಬಿಡುಗಡೆ ಮಾಡಬೇಕು. ಅಲ್ಲದೇ ಹಳದಿ ರೋಗ ಪೀಡಿತ ರೈತರ ಸಾಲಮನ್ನಾ ಮಾಡಬೇಕು ಎಂದು ಬಿಜೆಪಿ ಮಂಡಲ ಸಮಿತಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್, ಕಂದಾಯ ಸಚಿವ  ಆರ್.ಅಶೋಕ್, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಸಂಸದ ನಳಿನ್‍ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕುಮಾರ್, ಎಸ್‍ಪಿ ಋಷಿಕೇಶ್ ಭಗವಾನ್ ಸೋನಾವಣೆ, ಪುತ್ತೂರು ಸಹಾಯಕ ಕಮೀಷನರ್ ಗಿರೀಶ್ ನಂದನ್, ತಹಶೀಲ್ದಾರ್ ಅನಿತಾ ಲಕ್ಷ್ಮಿ, ತಾ.ಪಂ. ಕಾರ್ಯನಿರ್ವಹಣಧಿಕಾರಿ ಎನ್. ಭವಾನಿಶಂಕರ್,  ಅರೆಭಾಷೆ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ತಾ.ಪಂ. ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ಬಿಜೆಪಿ  ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಮುಖರಾದ ಪ್ರಮೋದ್ ಮಧ್ವರಾಜ್, ಎಸ್.ಎನ್.ಮನ್ಮಥ, ಎ.ವಿ.ತೀರ್ಥರಾಮ, ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ, ಸುಬೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ನ.ಪಂ.ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಎನ್.ಎ.ರಾಮಚಂದ್ರ, ಸುರೇಶ್ ಕಣೆಮರಡ್ಕ, ಸಂತೋಷ್ ಕುತ್ತಮೊಟ್ಟೆ, ಸಂತೋಷ್ ಜಾಕೆ, ರಾಧಾಕೃಷ್ಣ ಬೊಳ್ಳೂರು, ಚಂದ್ರಾ ಕೋಲ್ಚಾರ್, ಶಿವಾನಂದ ಕುಕ್ಕುಂಬಳ, ನವೀನ್ ಕುಮಾರ್ ರೈ ಮೇನಾಲ, ಮಹೇಶ್ ಮೇನಾಲ, ವಿನಯಕುಮಾರ್ ಮುಳುಗಾಡು, ಸುನಿಲ್ ಕೇರ್ಪಳ, ದಯಾನಂದ ಕುರುಂಜಿ,  ಭಾಗೀರಥಿ ಮುರುಳ್ಯ, ಸುಭದಾ ರೈ, ಪುಷ್ಪಾ ಮೇದಪ್ಪ, ಗೀತಾ ಶೇಖರ್, ಸರೋಜಿನಿ ಪೆಲ್ತಡ್ಕ ಮತ್ತಿತರರು ಉಪಸ್ಥಿತರಿದ್ದರು.

ಕೊಯನಾಡು ಮತ್ತು ಸಂಪಾಜೆಗೆ ಸಿ.ಎಂ ಭೇಟಿ

ಕೊಡಗು, ದ.ಕ., ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಮಡಿಕೇರಿಯಿಂದ ರಸ್ತೆ ಮಾರ್ಗವಾಗಿ ಸುಳ್ಯಕ್ಕೆ ಅಗಮಿಸುವ ಸಂದರ್ಭದಲ್ಲಿ ಕೊಯನಾಡು ಮತ್ತು ದ.ಕ. ಸಂಪಾಜೆಗೆ ಭೇಟಿ ನೀಡಿ ಮಳೆ ಮತ್ತು ಭೂಕಂಪನದಿಂದ ಹಾನಿಗೊಂಡು ಬಿರುಕು ಬಿಟ್ಟ ಮನೆಯನ್ನು ವೀಕ್ಷಣೆ ಮಾಡಿದರು.

ಕೊಯನಾಡು ಗಣಪತಿ ದೇವಸ್ಥಾನದ ಸಭಾಭವನದಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ನೆಲೆಸಿರುವವರಿಗೆ ಧೈರ್ಯ ತುಂಬಿದರು. ಸೇರಿದ್ದ ಜನರಿಂದ ಸಿಎಂ ಅಹವಾಲು ಸ್ವೀಕರಿಸಿದರು.

ಈ ಸಂದರ್ಭ ಸಚಿವರಾದ ಎಸ್.ಅಂಗಾರ, ವಿ. ಸುನಿಲ್ ಕುಮಾರ್, ಆರ್.ಅಶೋಕ್, ಸಿ.ಸಿ.ಪಾಟೀಲ್, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ಪಶ್ಚಿಮಘಟ್ಟ ಅರಣ್ಯ ಸಂರಕ್ಷಣಾ ಕಾರ್ಯಪಡೆಗಳ ಅಧ್ಯಕ್ಷ ರವಿ ಕುಶಾಲಪ್ಪ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ್, ಸಹಾಯಕ ಕಮಿಷನರ್ ಯತೀಶ್ ಉಳ್ಳಾಲ್ ಮತ್ತಿತರರು ಇದ್ದರು.

ದ.ಕ.ಸಂಪಾಜೆಗೆ ಭೇಟಿ

ಬಳಿಕ ದ.ಕ.ಸಂಪಾಜೆಯಲ್ಲಿ ಭೂಕಂಪನದಿಂದ ಬಿರುಕು ಬಿಟ್ಟ ಗ್ರಾ.ಪಂ.ಮಾಜಿ ಸದಸ್ಯ ಪಿ.ಆರ್. ನಾಗೇಶ್ ಅವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಜೊತೆ ಕಂದಾಯ ಸಚಿವ ಆರ್. ಆಶೋಕ್, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಇಂಧನ ಸಚಿವ ಸುನಿಲ್ ಕುಮಾರ್, ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್.ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಪ್ರಮೋದ್ ಮಧ್ವರಾಜ್, ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕುಮಾರ್, ಎಸ್‍ಪಿ ಋಷಿಕೇಶ್ ಭಗವಾನ್ ಸೋನಾವಣೆ, ಪುತ್ತೂರು ಸಹಾಯಕ ಕಮೀಷನರ್ ಗಿರೀಶ್ ನಂದನ್, ತಹಸೀಲ್ದಾರ್ ಅನಿತಾ ಲಕ್ಷ್ಮಿ, ತಾ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ, ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಸದಸ್ಯರಾದ ಅಬೂಸಾಲಿ ಪಿ. ಕೆ, ಎಸ್. ಕೆ ಹನೀಫ್, ರಜನಿ ಶರತ್, ವಿಜಯ ಅಲಡ್ಕ, ಕೇಶವ ಬಂಗ್ಲೆ ಗುಡ್ಡೆ, ಇ.ವಿ. ಪ್ರಶಾಂತ್, ರಹೀಮ್ ಬೀಜದಕಟ್ಟೆ, ರಾಮಚಂದ್ರ, ಗಣಪತಿಭಟ್ ಕುಂಞಿಕಣ್ಣ ಕೈಪಡ್ಕ ವರದಾರಜ್, ತೇಜ ಬಾಚಿಗದ್ದೆ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X