ನೀತಿ ಸಂಹಿತೆ ಉಲ್ಲಂಘನೆ ಆರೋಪ: ಶಾಸಕ ರಿಝ್ವಾನ್ ಅರ್ಶದ್ ವಿರುದ್ಧದ ಎಫ್‍ಐಆರ್ ಗೆ ಹೈಕೋರ್ಟ್ ತಡೆ

ಬೆಂಗಳೂರು, ಜು.12: ಕಳೆದ ಲೋಕಸಭಾ ಚುನಾವಣೆ ವೇಳೆ ನಡೆದಿದೆ ಎನ್ನಲಾದ ನೀತಿ ಸಂಹಿತೆ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ರಿಝ್ವಾನ್ ಅರ್ಶದ್ ವಿರುದ್ಧದ ವಿಚಾರಣೆ ಹಾಗೂ ಎಫ್‍ಐಆರ್ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಈ ಸಂಬಂಧ ಶಾಸಕ ರಿಝ್ವಾನ್ ಅರ್ಶದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಪ್ರಕರಣದ ವಿಚಾರಣೆಗೆ ತಡೆ ನೀಡಿದೆ. ವಿಚಾರಣೆಯನ್ನು ಆಗಸ್ಟ್ ತಿಂಗಳಿಗೆ ಮುಂದೂಡಿಕೆ ಮಾಡಿದೆ.
2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದೊಡ್ಡನೆಕ್ಕುಂದಿ ಗ್ರಾಮದ ವ್ಯಾಪ್ತಿಯಲ್ಲಿ ರಿಝ್ವಾನ್ ಅರ್ಶದ್ ಅವರು ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಆದರೆ, ಅವರು ಪ್ರಚಾರ ನಡೆಸಲು ಅನುಮತಿ ಪಡೆದಿರಲಿಲ್ಲ. ಹೀಗಾಗಿ, ಅವರ ವಿರುದ್ಧ ಎಚ್‍ಎಎಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
Next Story





